Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಶಹಾಪುರ | ಜನವರಿ ಅಂತ್ಯದವರೆಗೆ...

ಶಹಾಪುರ | ಜನವರಿ ಅಂತ್ಯದವರೆಗೆ ಕಾಲುವೆಗಳಿಗೆ ನೀರು ಹರಿಸಿ, ಇಲ್ಲದಿದ್ದರೆ ಧರಣಿ: ಮಲ್ಲಿಕಾರ್ಜುನ ಸತ್ಯಂಪೇಟೆ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ8 Nov 2026 7:30 PM IST
share
ಶಹಾಪುರ | ಜನವರಿ ಅಂತ್ಯದವರೆಗೆ ಕಾಲುವೆಗಳಿಗೆ ನೀರು ಹರಿಸಿ, ಇಲ್ಲದಿದ್ದರೆ ಧರಣಿ: ಮಲ್ಲಿಕಾರ್ಜುನ ಸತ್ಯಂಪೇಟೆ ಎಚ್ಚರಿಕೆ

ಶಹಾಪುರ: ರೈತರು ಬೆಳೆದಿರುವ ಮೆಣಸಿನಕಾಯಿ, ಶೇಂಗಾ, ಜೋಳ ಮತ್ತು ಸಜ್ಜೆ ಬೆಳೆಗಳಿಗೆ ಇನ್ನೂ ನೀರಿನ ಅಗತ್ಯವಿದ್ದು, ಜನವರಿ ಅಂತ್ಯದವರೆಗೂ ಕಾಲುವೆಗಳಿಗೆ ನೀರು ಹರಿಸಬೇಕು. ಇಲ್ಲವಾದಲ್ಲಿ ಕೆಬಿಜೆಎನ್‌ಎಲ್‌ನ ಭೀಮರಾಯನಗುಡಿ ಕಚೇರಿ ಮುಂದೆ ಧರಣಿ ಆರಂಭಿಸಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಮಲ್ಲಿಕಾರ್ಜುನ ಸತ್ಯಂಪೇಟೆ ಎಚ್ಚರಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಸವಸಾಗರ ಜಲಾಶಯದ ಕೃಷ್ಣಾ ಎಡದಂಡೆ ಮತ್ತು ಬಲದಂಡೆ ಕಾಲುವೆಗಳ ವ್ಯಾಪ್ತಿಯ ರಾಯಚೂರು, ಯಾದಗಿರಿ ಹಾಗೂ ಕಲಬುರಗಿ ಜಿಲ್ಲೆಗಳ ಸಾವಿರಾರು ಎಕರೆ ಜಮೀನುಗಳಲ್ಲಿ ಮೆಣಸಿನಕಾಯಿ, ಶೇಂಗಾ, ಬಿಳಿ ಜೋಳ ಮತ್ತು ಸಜ್ಜೆ ಬೆಳೆಗಳನ್ನು ಬೆಳೆಯಲಾಗಿದೆ. ಮೂರು ಜಿಲ್ಲೆಗಳಲ್ಲಿ ಅಂದಾಜು 74 ಸಾವಿರ ಎಕರೆ ಪ್ರದೇಶದಲ್ಲಿ ಮೆಣಸಿನಕಾಯಿ ಬೆಳೆ ಬೆಳೆಯಲಾಗಿದ್ದು, ಪ್ರತಿ ಎಕರೆಗೆ ಸುಮಾರು 6ರಿಂದ 7 ಲಕ್ಷ ರೂಪಾಯಿ ವೆಚ್ಚ ಮಾಡಲಾಗಿದೆ. ಒಟ್ಟಾರೆ ರೈತರು ಸುಮಾರು ಒಂದು ಸಾವಿರ ಕೋಟಿ ರೂಪಾಯಿ ಬಂಡವಾಳ ಹೂಡಿದ್ದಾರೆ ಎಂದು ತಿಳಿಸಿದರು.

ನೀರಾವರಿ ಸಲಹಾ ಸಮಿತಿಯ ತೀರ್ಮಾನದಂತೆ ನವೆಂಬರ್ 12ರಂದು ನೀರು ಹರಿಸುವುದನ್ನು ಸ್ಥಗಿತಗೊಳಿಸಿದರೆ ರೈತರಿಗೆ ದೊಡ್ಡ ಮಟ್ಟದ ನಷ್ಟ ಉಂಟಾಗಲಿದೆ. ಇದಕ್ಕೆ ಸರ್ಕಾರವೇ ಹೊಣೆ ಹೊರಬೇಕಾಗುತ್ತದೆ. ಆರಂಭದಲ್ಲಿ ನೀರಿನ ಕೊರತೆಯ ಕುರಿತು ಯಾವುದೇ ಹೇಳಿಕೆ ನೀಡದ ಸರ್ಕಾರ, ರೈತರು ಬೆಳೆ ಬೆಳೆದ ನಂತರ ನೀರಾವರಿ ಸಲಹಾ ಸಮಿತಿಯ ಮೂಲಕ ನೀರು ಸ್ಥಗಿತಗೊಳಿಸುವ ತೀರ್ಮಾನ ಕೈಗೊಂಡಿರುವುದರಿಂದ ರೈತರು ದಿಕ್ಕು ತೋಚದಂತಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈಗಾಗಲೇ ಸಾಲ ಮಾಡಿ ಕೃಷಿ ಮಾಡುತ್ತಿರುವ ರೈತರಿಗೆ ನೀರು ಸಿಗದಿದ್ದರೆ ತೀವ್ರ ಸಂಕಷ್ಟ ಎದುರಾಗಲಿದೆ. ಆದ್ದರಿಂದ ನೀರಾವರಿ ಸಲಹಾ ಸಮಿತಿಯ ತೀರ್ಮಾನವನ್ನು ಮರುಪರಿಶೀಲಿಸಿ ಜನವರಿ ಅಂತ್ಯದವರೆಗೂ ನೀರು ಹರಿಸಬೇಕು. ಇಲ್ಲವಾದಲ್ಲಿ ನವೆಂಬರ್ 12ರ ನಂತರ ಶಹಾಪುರದ ಭೀಮರಾಯನಗುಡಿಯ ಕೃಷ್ಣ ಭಾಗ್ಯ ಜಲ ನಿಗಮದ ಕಚೇರಿ ಮುಂದೆ ಧರಣಿ ಆರಂಭಿಸಲಾಗುವುದು ಎಂದು ಎಚ್ಚರಿಸಿದರು.

ಸಭೆಯಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷ ಶರಣು ಮಂದರವಾಡ, ಜಿಲ್ಲಾ ಕಾರ್ಯಾಧ್ಯಕ್ಷ ಮುದ್ದಣ್ಣ ಅಮ್ಮಾಪುರ, ಮಲ್ಕಣ್ಣ ಚಿಂತಿ ಮಂಡಗಳ್ಳಿ, ಜಿಲ್ಲಾ ಕಾರ್ಯದರ್ಶಿ ಬುಚ್ಚಪ್ಪ ನಾಯಕ, ಫಕೀರ ಅಹ್ಮದ್ ಸಾಬ್, ಮಲ್ಲು ವಡಿಗೇರಿ, ದೇವಿಂದ್ರಪ್ಪ ವಡಿಗೇರಿ, ಮಹಾದೇವ ಸಾಹುಕಾರ, ಗುರುನಾಥ ರೆಡ್ಡಿ ರಸ್ತಾಪುರ, ಅಮರಣ್ಣ ಸಾಹುಕಾರ ರಸ್ತಾಪುರ, ರಾಚಣ್ಣ ಸಾಹುಕಾರ ರಸ್ತಾಪುರ, ಭೀಮಣ್ಣಗೌಡ ಹಾರಣಗೇರ, ಶಿವಣ್ಣಗೌಡ ಹೈಯ್ಯಾಳ ಸೇರಿದಂತೆ ಹಲವರು ಭಾಗವಹಿಸಿದ್ದರು.

Tags

protestShahapur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X