Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಶಹಾಪುರ | ಗ್ರಾಮಗಳಲ್ಲಿ ಅಕ್ರಮ ಮದ್ಯ...

ಶಹಾಪುರ | ಗ್ರಾಮಗಳಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಮುಂದಾದರೆ ಕಠಿಣ ಕ್ರಮ: ಶರಣಪ್ಪ ಸಲಾದಪುರ

ವಾರ್ತಾಭಾರತಿವಾರ್ತಾಭಾರತಿ6 Jan 2026 11:30 PM IST
share
ಶಹಾಪುರ | ಗ್ರಾಮಗಳಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಮುಂದಾದರೆ ಕಠಿಣ ಕ್ರಮ: ಶರಣಪ್ಪ ಸಲಾದಪುರ

ಶಹಾಪುರ : ರಾಜ್ಯದಲ್ಲಿಯೇ ಮೊಟ್ಟಮೊದಲ ಬಾರಿಗೆ ಯಾದಗಿರಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿಲ್ಲೆಯಾದ್ಯಂತ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಅಧಿಕೃತ ಆದೇಶ ಹೊರಡಿಸುವ ಮೂಲಕ ಮದ್ಯಪಾನ ಮತ್ತು ವ್ಯಸನ ಮುಕ್ತ ಗ್ರಾಮ ಅಭಿಯಾನಕ್ಕೆ ಮುನ್ನುಡಿ ಬರೆದಿದ್ದಾರೆ. ಇದರ ಭಾಗವಾಗಿ ಶಹಾಪುರ ತಾಲೂಕಿನ ಉಕ್ಕಿನಾಳ ಗ್ರಾಮ ಪಂಚಾಯಿತಿಯಲ್ಲಿ ಮದ್ಯಪಾನ ಮತ್ತು ವ್ಯಸನ ಮುಕ್ತ ಗ್ರಾಮ ಅಭಿಯಾನಕ್ಕೆ ಅಧಿಕೃತ ಚಾಲನೆ ನೀಡಲಾಗಿದೆ ಎಂದು ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಶರಣಪ್ಪ ಸಲಾದಪುರ ತಿಳಿಸಿದರು.

ಶಹಾಪುರ ತಾಲೂಕಿನ ಉಕ್ಕಿನಾಳ ಗ್ರಾಮದಲ್ಲಿ ಆಯೋಜಿಸಿದ್ದ ಮದ್ಯಪಾನ ಮತ್ತು ವ್ಯಸನ ಮುಕ್ತ ಗ್ರಾಮ ಅಭಿಯಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಪ್ರತಿ ಗ್ರಾಮಗಳ ಕಿರಾಣಿ ಅಂಗಡಿ, ಪಾನ್‌ಶಾಪ್‌ಗಳಲ್ಲಿ ಅಕ್ರಮ ಮದ್ಯ ಮಾರಾಟ ಅತಿಯಾಗಿ ನಡೆಯುತ್ತಿದೆ. ಸುಲಭವಾಗಿ ಮದ್ಯ ದೊರಕುತ್ತಿರುವುದರಿಂದ ಸಮಾಜದಲ್ಲಿ ಕುಡುಕರ ಸಂಖ್ಯೆ ಹೆಚ್ಚಾಗಿದ್ದು, ಇದರಿಂದ ಕುಟುಂಬಗಳ ಮನಶಾಂತಿ ಮತ್ತು ನೆಮ್ಮದಿ ಭಂಗವಾಗುತ್ತಿದೆ ಎಂದು ಅವರು ಹೇಳಿದರು.

ಹಳ್ಳಿಗಳಲ್ಲಿ ಸಿಗುವ ಮದ್ಯ ಅಸಲಿಯೇ ಅಥವಾ ನಕಲಿಯೇ ಎಂಬುದು ಗೊತ್ತಿಲ್ಲ. ಇದರಿಂದ ಮದ್ಯ ಸೇವಿಸುವ ವ್ಯಕ್ತಿಯ ಜೊತೆಗೆ ಆತನ ಕುಟುಂಬವೂ ತೀವ್ರ ಸಂಕಷ್ಟಕ್ಕೆ ಒಳಗಾಗುತ್ತಿದೆ. ಹೀಗಾಗಿ ಗ್ರಾಮಸ್ಥರು ಸ್ವಯಂಪ್ರೇರಿತರಾಗಿ ಅಕ್ರಮ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ತಡೆಯಬೇಕು. ಇದಕ್ಕೆ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಸಂಪೂರ್ಣ ಸಹಕಾರ ನೀಡಲಿದೆ ಎಂದು ಭರವಸೆ ನೀಡಿದರು.

ಗ್ರಾಮಗಳಲ್ಲಿ ಮದ್ಯ ಸೇವನೆಯಿಂದ ಅನೇಕ ಯುವಕರು ಚಿಕ್ಕ ವಯಸ್ಸಿನಲ್ಲೇ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಪರವಾನಗಿ ಇರುವ ಸ್ಥಳಗಳಲ್ಲಿ ಮಾತ್ರ ಮದ್ಯ ಮಾರಾಟಕ್ಕೆ ಅವಕಾಶವಿದೆ. ಗ್ರಾಮಗಳಲ್ಲಿ ಮದ್ಯ ಮಾರಾಟ ಮಾಡಲು ಯಾವುದೇ ಹಕ್ಕು ಬಾರ್ ಮಾಲೀಕರಿಗೆ ಇಲ್ಲ. ಇದನ್ನು ಉಲ್ಲಂಘಿಸಿದರೆ ಅಂತಹ ಬಾರ್ ಮಾಲೀಕರ ವಿರುದ್ಧ ಅಬಕಾರಿ ಇಲಾಖೆ ಮೇಲಾಧಿಕಾರಿಗಳಿಗೆ ಪತ್ರ ಬರೆದು ಕಠಿಣ ಕ್ರಮಕ್ಕೆ ಶಿಫಾರಸು ಮಾಡಲಾಗುವುದು ಎಂದು ಎಚ್ಚರಿಸಿದರು.

ಮದ್ಯಪಾನ ಮುಕ್ತ ಗ್ರಾಮ ಅಭಿಯಾನಕ್ಕೆ ಸಹಕಾರ ನೀಡಿದ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ, ಜಿಲ್ಲಾ ಪಂಚಾಯತ್ ಸಿಇಒ ಲವೀಶ್ ಒರಡಿಯಾ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಶರಭೈ ಹಾಗೂ ಗ್ರಾಮ ಪಂಚಾಯತ್ ಮುಖಂಡರ ಕಾರ್ಯ ಶ್ಲಾಘನೀಯವಾಗಿದೆ ಎಂದರು.

ಈ ವೇಳೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ, ಆರೋಗ್ಯವೇ ಪ್ರತಿಯೊಬ್ಬನಿಗೂ ಅತಿ ಮುಖ್ಯ. ಒಮ್ಮೆ ದುಶ್ಚಟಗಳಿಗೆ ಬಲಿಯಾದರೆ ಅದರಿಂದ ಹೊರಬರುವುದು ಕಷ್ಟಕರ. ಆದ್ದರಿಂದ ಯುವಕರು ಹಾಗೂ ಸಾರ್ವಜನಿಕರು ದುಶ್ಚಟಗಳಿಗೆ ಬಲಿಯಾಗಬಾರದು ಎಂದು ಸಲಹೆ ನೀಡಿದರು.

ಜಿಲ್ಲೆಯಲ್ಲಿ ಮದ್ಯಪಾನದಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ನಿರಂತರ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಇದರ ಜೊತೆಗೆ ಪ್ರಜ್ಞಾವಂತರು ಹಾಗೂ ಮಹಿಳೆಯರು ಮದ್ಯಪಾನ ಮುಕ್ತ ಗ್ರಾಮ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಕರೆ ನೀಡಿದರು.

ಮದ್ಯವ್ಯಾಸನಿಗಳಿಗೆ ಜಿಲ್ಲಾ ಕೇಂದ್ರದಲ್ಲಿ ಪುನರ್ವಸತಿ ಕೇಂದ್ರ ಸ್ಥಾಪಿಸಲು ಕೆಕೆಆರ್‌ಡಿಬಿ ಅನುದಾನದಲ್ಲಿ ಒಂದು ಕೋಟಿ ರೂ. ಒದಗಿಸಲಾಗುವುದು ಎಂದು ಸಚಿವರು ಘೋಷಿಸಿದರು.

ಈ ಸಂದರ್ಭದಲ್ಲಿ 2024–25ನೇ ಸಾಲಿನ ಮುಖ್ಯಮಂತ್ರಿ ವಿಶೇಷ ಅನುದಾನದಲ್ಲಿ ಉಕ್ಕಿನಾಳ ಗ್ರಾಮದಿಂದ ಯಲ್ಲಮ್ಮ ಗುಡಿಗೆ ಹೋಗುವ ರಸ್ತೆ (ಯಡ್ರಾಮಿ ಗಡಿಭಾಗ), 2025–26ನೇ ಸಾಲಿನ ಕೆಕೆಆರ್‌ಡಿಬಿ ಮೈಕ್ರೋ ಯೋಜನೆಯಡಿ ಉಕ್ಕಿನಾಳ ಗ್ರಾಮದಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಸಚಿವರು ಶಂಕುಸ್ಥಾಪನೆ ನೆರವೇರಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲವೀಶ್ ಒರಡಿಯಾ ಮಾತನಾಡಿ, ಯಾದಗಿರಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿಯೂ ಮದ್ಯಪಾನ ಮತ್ತು ವ್ಯಸನ ಮುಕ್ತ ಗ್ರಾಮ ಅಭಿಯಾನ ಜಾರಿಗೊಳಿಸಲಾಗುವುದು. ಮದ್ಯಪಾನದಿಂದ ಆಗುವ ದುಷ್ಪರಿಣಾಮಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸಲಾಗುತ್ತದೆ. ಮದ್ಯ ಸೇವಿಸುವವರನ್ನು ಕುಟುಂಬಸ್ಥರು ಮತ್ತು ಗ್ರಾಮಸ್ಥರು ತಿಳಿವಳಿಕೆ ನೀಡುವ ಮೂಲಕ ತಪ್ಪು ದಾರಿಗೆ ಹೋಗದಂತೆ ತಡೆಯಬೇಕು. ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಜನರು ಸ್ವಯಂಪ್ರೇರಿತರಾಗಿ ಕಡಿವಾಣ ಹಾಕಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಪಿಡಿಒ ಮಡಿವಾಳಪ್ಪ ಮುದ್ನೂರು, ಗ್ರಾಮ ಪಂಚಾಯತ್ ಅಧ್ಯಕ್ಷ ಗೇನುಸಿಂಗ್ ರಾಠೋಡ್ ಸೇರಿದಂತೆ ಗ್ರಾಮದ ಮುಖಂಡರು ಉಪಸ್ಥಿತರಿದ್ದರು.

Tags

Shahapur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X