ಶಹಾಪುರ | ಕಾಲುವೆಯಲ್ಲಿ ಈಜಲು ತೆರಳಿದ್ದ ವಿದ್ಯಾರ್ಥಿ ನೀರುಪಾಲು

ಯಾದಗಿರಿ: ಸ್ನೇಹಿತರೊಂದಿಗೆ ಕಾಲುವೆಯಲ್ಲಿ ಈಜಲು ತೆರಳಿದ್ದ ವಿದ್ಯಾರ್ಥಿಯೊಬ್ಬನು ನೀರುಪಾಲಾದ ಘಟನೆ ಜಿಲ್ಲೆಯ ಶಹಾಪುರ ತಾಲೂಕಿನ ಭೀಮರಾಯನಗುಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ
ಭೀಮರಾಯನಗುಡಿ ಕೃಷಿ ಕಾಲೇಜಿನ ವಿದ್ಯಾರ್ಥಿ ಹರೀಶ್ ರೆಡ್ಡಿ (19) ಮೃತಪಟ್ಟ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಬೇಸಿಗೆ ಹಿನ್ನೆಲೆಯಲ್ಲಿ ಸ್ನೇಹಿತರೊಂದಿಗೆ KBJNL ಕಾಲುವೆಗೆ ಈಜಲು ತೆರಳಿದ್ದ ವೇಳೆ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ವಿದ್ಯಾರ್ಥಿ ನೀರಿನಲ್ಲಿ ಮುಳುಗಿದ್ದನ್ನು ಗಮನಿಸಿದ ಸ್ನೇಹಿತರು ತಕ್ಷಣವೇ ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಲಾಗಿದ್ದು, ಅವರು ಸ್ಥಳಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
Next Story





