Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಶಹಾಪುರ | ಶೌಚಾಲಯಕ್ಕೆ ಬೀಗ:...

ಶಹಾಪುರ | ಶೌಚಾಲಯಕ್ಕೆ ಬೀಗ: ಪ್ರಯಾಣಿಕರಿಗೆ ಸಂಕಷ್ಟ ; ಸ್ವಚ್ಛತೆ ಕಾಪಾಡುವಂತೆ ಸಮತಾ ಸೈನಿಕ ದಳ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ20 Sept 2026 7:59 PM IST
share
ಶಹಾಪುರ | ಶೌಚಾಲಯಕ್ಕೆ ಬೀಗ: ಪ್ರಯಾಣಿಕರಿಗೆ ಸಂಕಷ್ಟ ; ಸ್ವಚ್ಛತೆ ಕಾಪಾಡುವಂತೆ ಸಮತಾ ಸೈನಿಕ ದಳ ಆಗ್ರಹ

ಶಹಾಪುರ: ಬೀದರ್‌-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪ್ರಮುಖ ಸಂಪರ್ಕ ಕೇಂದ್ರವಾಗಿರುವ ಹತ್ತಿಗೂಡೂರು ಬಸ್ ನಿಲ್ದಾಣದ ಸಾರ್ವಜನಿಕ ಶೌಚಾಲಯಕ್ಕೆ ಕಾಯಂ ಬೀಗ ಹಾಕಿರುವುದರಿಂದ ಪ್ರಯಾಣಿಕರು, ಮಹಿಳೆಯರು ಹಾಗೂ ವಯೋವೃದ್ಧರು ಪರದಾಡುವಂತಾಗಿದೆ ಎಂದು ಸಮತಾ ಸೈನಿಕ ದಳದ ಜಿಲ್ಲಾ ಘಟಕದ ಅಧ್ಯಕ್ಷ ಹತ್ತಿಗೂಡೂರು ಶರಣರೆಡ್ಡಿ ಹೇಳಿದ್ದಾರೆ. ‌

ಹತ್ತಿಗೂಡೂರು ಬಸ್ ನಿಲ್ದಾಣದ ಮೂಲಕ ಪ್ರತಿನಿತ್ಯ ನೂರಾರು ಪ್ರಯಾಣಿಕರು ಸಂಚರಿಸುತ್ತಿದ್ದು, ಹೊರರಾಜ್ಯಗಳಿಗೂ ಸಂಪರ್ಕ ಕಲ್ಪಿಸುವ ಪ್ರಮುಖ ಮಾರ್ಗವಾಗಿದೆ. ಆದರೆ ಸಾರ್ವಜನಿಕರ ಬಳಕೆಗೆ ನಿರ್ಮಿಸಿರುವ ಶೌಚಾಲಯವನ್ನು ಬಂದ್ ಮಾಡಿರುವುದರಿಂದ ಶೌಚಾಲಯಕ್ಕೆ ತೆರಳಲು ಸಾಧ್ಯವಾಗದೆ ಮಹಿಳೆಯರು ಸೇರಿದಂತೆ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಹೇಳಿದರು.

ಅನಿವಾರ್ಯವಾಗಿ ಬಯಲು ಪ್ರದೇಶವನ್ನು ಅವಲಂಬಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಬಸ್ ನಿಲ್ದಾಣದ ಆವರಣದಲ್ಲಿ ಸಮರ್ಪಕ ಸ್ವಚ್ಛತೆ ಇಲ್ಲದೆ ಗಬ್ಬು ವಾಸನೆ ಬೀರುತ್ತಿದೆ. ಸೂಕ್ತ ಕಂಪೌಂಡ್‌ ಗೋಡೆ ಇಲ್ಲದಿರುವುದರಿಂದ ನಿಲ್ದಾಣದ ಪರಿಸರವೂ ಅಶುಚಿತ್ವದಿಂದ ಕೂಡಿದೆ. ಸಾರಿಗೆ ಇಲಾಖೆಯ ಅಧಿಕಾರಿಗಳು ನಿತ್ಯ ಈ ಮಾರ್ಗವಾಗಿ ಸಂಚರಿಸುತ್ತಿದ್ದರೂ ಸಮಸ್ಯೆ ಕಂಡೂ ಕಾಣದಂತೆ ವರ್ತಿಸುತ್ತಿದ್ದಾರೆ ಎಂದು ಸಮತಾ ಸೈನಿಕ ದಳ ಆರೋಪಿಸಿದೆ.

ತಕ್ಷಣ ಸಾರ್ವಜನಿಕ ಶೌಚಾಲಯದ ದುರಸ್ತಿ ಕಾರ್ಯ ಕೈಗೊಂಡು ಬಳಕೆಗೆ ಮುಕ್ತಗೊಳಿಸಬೇಕು. ಬಸ್ ನಿಲ್ದಾಣದಲ್ಲಿ ನಿಯಮಿತವಾಗಿ ಸ್ವಚ್ಛತೆ ಕೈಗೊಂಡು ಪ್ರಯಾಣಿಕರಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಬೇಕು. ಇಲ್ಲವಾದಲ್ಲಿ ಸಮತಾ ಸೈನಿಕ ದಳದ ಜಿಲ್ಲಾ ಘಟಕದ ವತಿಯಿಂದ ಬಸ್ ನಿಲ್ದಾಣದ ಆವರಣದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.

Tags

ShahpurSamata Sainik Dal
share
ವಾರ್ತಾಭಾರತಿ
ವಾರ್ತಾಭಾರತಿ
Next Story
X