ಯಾದಗಿರಿ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಶ್ರೀಶೈಲ ಹೊಸಮನಿ ನೇಮಕ : ಜಿಲ್ಲಾ ಉಸ್ತುವಾರಿ ಸಚಿವರಿಂದ ಸನ್ಮಾನ

ಶಹಾಪುರ : ಯಾದಗಿರಿ ಜಿಲ್ಲಾ ಕಾಂಗ್ರೆಸ್ ಸಮಿತಿಗೆ ನೂತನ ಕಾರ್ಯದರ್ಶಿಯಾಗಿ ಶ್ರೀಶೈಲ ಹೊಸಮನಿ ಅವರನ್ನು ಆಯ್ಕೆ ಮಾಡಿ ಆದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ, ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಅವರು ಅವರನ್ನು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಪಕ್ಷ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡಬೇಕು. ತಳಮಟ್ಟದಿಂದಲೇ ಜನರ ಸಮಸ್ಯೆಗಳನ್ನು ಆಲಿಸಿ, ಅವುಗಳಿಗೆ ಪರಿಹಾರ ಕಲ್ಪಿಸುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸುವಲ್ಲಿ ಸಕ್ರಿಯ ಪಾತ್ರ ವಹಿಸಬೇಕು ಎಂದು ಸಲಹೆ ನೀಡಿದರು.
ನೂತನ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಶ್ರೀಶೈಲ ಹೊಸಮನಿ ಮಾತನಾಡಿ, ನನ್ನ ಆಯ್ಕೆಗಾಗಿ ಪ್ರಮುಖ ಪಾತ್ರ ವಹಿಸಿದ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಅವರಿಗೆ ಹೃದಯಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದರು. ಮುಂದಿನ ದಿನಗಳಲ್ಲಿ ಪಕ್ಷದ ಸಂಘಟನೆಗಾಗಿ ಶಕ್ತಿ ಮೀರಿ ಪ್ರಾಮಾಣಿಕವಾಗಿ ಕೆಲಸ ಮಾಡುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಮಾಂತಪ್ಪ ಸಾಹು, ಮಲ್ಲಿಕಾರ್ಜುನ ಪೂಜಾರಿ, ನಿಜಗುಣ ದೊರನಹಳ್ಳಿ, ಹೊನ್ನಪ್ಪ ಗಂಗನಾಳ, ಭೀಮರಾಯ ಜುನ್ನ, ಶರಣಪ್ಪ ಭೂತಳಿ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.







