Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಅ.7ರಿಂದ ಯಾದಗಿರಿಯಲ್ಲಿ ರಾಜ್ಯಮಟ್ಟದ...

ಅ.7ರಿಂದ ಯಾದಗಿರಿಯಲ್ಲಿ ರಾಜ್ಯಮಟ್ಟದ ಟೇಕ್ವಾಂಡೋ ಪಂದ್ಯಾವಳಿ

ವಾರ್ತಾಭಾರತಿವಾರ್ತಾಭಾರತಿ4 Oct 2026 7:30 PM IST
share
ಅ.7ರಿಂದ ಯಾದಗಿರಿಯಲ್ಲಿ ರಾಜ್ಯಮಟ್ಟದ ಟೇಕ್ವಾಂಡೋ ಪಂದ್ಯಾವಳಿ

ಯಾದಗಿರಿ: ಶಾಲಾ ಶಿಕ್ಷಣ ಇಲಾಖೆಯ 2026-27ನೇ ಸಾಲಿನ ರಾಜ್ಯಮಟ್ಟದ ಬಾಲಕ, ಬಾಲಕಿಯರ ಟೇಕ್ವಾಂಡೋ ಪಂದ್ಯಾವಳಿಯನ್ನು ಅಕ್ಟೋಬರ್ 7ರಿಂದ 9ರವರೆಗೆ ನಗರದ ಡಾನ್ ಬಾಸ್ಕೋ ಶಾಲೆಯಲ್ಲಿ ಆಯೋಜಿಸಲಾಗಿದೆ. ಸಂಬಂಧಿಸಿದ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ ಪಂದ್ಯಾವಳಿಯನ್ನು ಯಶಸ್ವಿಗೊಳಿಸುವಂತೆ ಅಪರ ಜಿಲ್ಲಾಧಿಕಾರಿ ರಮೇಶ್ ಕೋಲಾರ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರಾಜ್ಯಮಟ್ಟದ ಟೇಕ್ವಾಂಡೋ ಪಂದ್ಯಾವಳಿ ಆಯೋಜನೆ ಕುರಿತು ನಡೆದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಾಜ್ಯದ 35 ಶೈಕ್ಷಣಿಕ ಜಿಲ್ಲೆಗಳಿಂದ ಸುಮಾರು 760 ವಿದ್ಯಾರ್ಥಿಗಳು ಈ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ. ವಿದ್ಯಾರ್ಥಿಗಳಿಗೆ ಸೂಕ್ತ ವಸತಿ, ಆಹಾರ, ವಾಹನಗಳ ವ್ಯವಸ್ಥೆ, ಸುರಕ್ಷತಾ ಕ್ರಮಗಳು ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಅಚ್ಚುಕಟ್ಟಾಗಿ ಕಲ್ಪಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಇಂಡೋರ್ ಸ್ಟೇಡಿಯಂಗೆ ಡಾನ್ ಬಾಸ್ಕೋ ಶಾಲೆಯ ಮೇಲಿನ ಸಭಾಂಗಣವನ್ನು ಬಳಸಲು ಉದ್ದೇಶಿಸಲಾಗಿದೆ. ಮಕ್ಕಳ ವಾಸ್ತವ್ಯಕ್ಕಾಗಿ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕ್ರೀಡಾ ವಸತಿನಿಲಯಗಳನ್ನು ಸಿದ್ಧವಾಗಿಟ್ಟುಕೊಳ್ಳಬೇಕು. ವಸತಿನಿಲಯಗಳ ವ್ಯಾಪ್ತಿಯಲ್ಲಿ ಸ್ವಚ್ಛತೆಗೆ ವಿಶೇಷ ಗಮನ ನೀಡಬೇಕು. ರೆಫರಿಗಳಿಗಾಗಿ ಹಳೆಯ ಐ.ಬಿ. ಸೇರಿದಂತೆ ಸುಸಜ್ಜಿತ ವಸತಿ ವ್ಯವಸ್ಥೆ ಕಲ್ಪಿಸಬೇಕು ಎಂದು ಸೂಚಿಸಿದರು.

ಪಂದ್ಯಾವಳಿಯ ನಿರ್ವಹಣೆಗೆ ಸ್ವಾಗತ ಸಮಿತಿ, ಆಹಾರ ಸಮಿತಿ, ವಸತಿ ಸಮಿತಿ, ಆರೋಗ್ಯ ನಿರ್ವಹಣಾ ಸಮಿತಿ, ಸಾರಿಗೆ ಸಮಿತಿ, ವಿದ್ಯುತ್ ಸೇರಿದಂತೆ ಅಗತ್ಯ ಸಮಿತಿಗಳನ್ನು ರಚಿಸಲಾಗುತ್ತಿದೆ. ಎಲ್ಲ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಯಾವುದೇ ಲೋಪಕ್ಕೆ ಅವಕಾಶ ನೀಡದೆ ವ್ಯವಸ್ಥಿತವಾಗಿ ಕ್ರಮ ಕೈಗೊಳ್ಳಬೇಕು ಎಂದು ರಮೇಶ್ ಕೋಲಾರ ಸೂಚಿಸಿದರು.

ಸಭೆಯಲ್ಲಿ ಮಾತನಾಡಿದ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಚನ್ನಬಸಪ್ಪ ಮುಧೋಳ ಅವರು, ರಾಜ್ಯಮಟ್ಟದ ಟೇಕ್ವಾಂಡೋ ಸ್ಪರ್ಧೆಯಲ್ಲಿ 14 ವರ್ಷ ವಯೋಮಾನದ ಬಾಲಕ, ಬಾಲಕಿಯರು ಅಕ್ಟೋಬರ್ 7ರಂದು ಬೆಳಿಗ್ಗೆ 9 ಗಂಟೆಗೆ ವರದಿ ಮಾಡಿಕೊಳ್ಳಬೇಕು. ಅಂದು ಮಧ್ಯಾಹ್ನ 12 ಗಂಟೆಗೆ ತೂಕ ಪರಿಶೀಲನೆ ನಡೆಯಲಿದೆ. 17 ವರ್ಷ ವಯೋಮಾನದೊಳಗಿನ ಬಾಲಕ, ಬಾಲಕಿಯರು ಅಕ್ಟೋಬರ್ 8ರಂದು ವರದಿ ಮಾಡಿಕೊಳ್ಳಬೇಕು ಹಾಗೂ ಮಧ್ಯಾಹ್ನ 12 ಗಂಟೆಗೆ ತೂಕ ಪರಿಶೀಲನೆ ನಡೆಯಲಿದೆ ಎಂದು ತಿಳಿಸಿದರು.

ಸಭೆಯಲ್ಲಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Tags

YadgirTaekwondo
share
ವಾರ್ತಾಭಾರತಿ
ವಾರ್ತಾಭಾರತಿ
Next Story
X