Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಸುರಪುರ | ಶಾದಿಖಾನ ಪಕ್ಕದ ಸರ್ಕಾರಿ ಜಾಗ...

ಸುರಪುರ | ಶಾದಿಖಾನ ಪಕ್ಕದ ಸರ್ಕಾರಿ ಜಾಗ ಒತ್ತುವರಿ ಆರೋಪ; ತೆರವುಗೊಳಿಸುವಂತೆ ಆಗ್ರಹಿಸಿ ಧರಣಿ

ವಾರ್ತಾಭಾರತಿವಾರ್ತಾಭಾರತಿ19 Aug 2026 5:48 PM IST
share
ಸುರಪುರ | ಶಾದಿಖಾನ ಪಕ್ಕದ ಸರ್ಕಾರಿ ಜಾಗ ಒತ್ತುವರಿ ಆರೋಪ; ತೆರವುಗೊಳಿಸುವಂತೆ ಆಗ್ರಹಿಸಿ ಧರಣಿ

ಸುರಪುರ: ಪಟ್ಟಣದ ಖುರೇಷಿ ಮೊಹಲ್ಲಾದ ಶಾದಿಖಾನ ಪಕ್ಕದಲ್ಲಿರುವ ಸರ್ಕಾರಿ ಜಾಗವನ್ನು ಖಾಸಗಿ ವ್ಯಕ್ತಿಯೊಬ್ಬರು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ, ಒತ್ತುವರಿ ತೆರವುಗೊಳಿಸಿ ಸರ್ಕಾರಿ ಜಾಗವನ್ನು ಸಂರಕ್ಷಿಸುವಂತೆ ಆಗ್ರಹಿಸಿ ಸಾರ್ವಜನಿಕರು ನಗರಸಭೆ ಕಾರ್ಯಾಲಯದ ಎದುರು ಪ್ರತಿಭಟನೆ ನಡೆಸಿದರು.

ಧರಣಿಯಲ್ಲಿ ಭಾಗವಹಿಸಿದ್ದ ದಲಿತಪರ ಹೋರಾಟಗಾರ ಮಲ್ಲಿಕಾರ್ಜುನ ಕ್ರಾಂತಿ ಸೇರಿದಂತೆ ಹಲವರು ಮಾತನಾಡಿ, ಶಾದಿಖಾನ ಪಕ್ಕದ ಸರ್ಕಾರಿ ಜಾಗವನ್ನು ಖಾಸಗಿ ವ್ಯಕ್ತಿಯೊಬ್ಬರು ಒತ್ತುವರಿ ಮಾಡಿಕೊಂಡು ಮನೆ ಹಾಗೂ ಕಾಂಪೌಂಡ್ ನಿರ್ಮಿಸಲು ಮುಂದಾಗಿದ್ದಾರೆ. ಒತ್ತುವರಿ ಸುಮಾರು 50 ಅಡಿ ವಿಸ್ತೀರ್ಣದಲ್ಲಿದ್ದು, ಇದರಿಂದ ಶಾದಿಖಾನಕ್ಕೆ ತೆರಳಲು ಸಾರ್ವಜನಿಕರಿಗೆ ರಸ್ತೆ ಇಲ್ಲದಂತಾಗಿದೆ ಎಂದು ಆರೋಪಿಸಿದರು.

ತಕ್ಷಣ ಒತ್ತುವರಿ ತೆರವುಗೊಳಿಸಿ ಸರ್ಕಾರಿ ಜಾಗವನ್ನು ಸಂರಕ್ಷಿಸುವುದರ ಜೊತೆಗೆ, ಶಾದಿಖಾನ ಕಟ್ಟಡಕ್ಕೆ ತೆರಳಲು ಸುಗಮ ರಸ್ತೆ ನಿರ್ಮಿಸಬೇಕು ಎಂದು ಒತ್ತಾಯಿಸಿದರು. ಬೇಡಿಕೆ ಈಡೇರುವವರೆಗೆ ಧರಣಿ ಮುಂದುವರಿಸುವುದಾಗಿ ಪ್ರತಿಭಟನಾಕಾರರು ಎಚ್ಚರಿಸಿದರು.

ಧರಣಿ ಸ್ಥಳಕ್ಕೆ ಆಗಮಿಸಿದ ನಗರಸಭೆ ಪೌರಾಯುಕ್ತ ಬಸವರಾಜ ಟಣಕೆದಾರ ಅವರು ಪ್ರತಿಭಟನಾಕಾರರ ಮನವಿ ಆಲಿಸಿ, ಬಳಿಕ ವಿವಾದಿತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಪ್ರತಿಭಟನಾಕಾರರಿಗೆ ಹಿಂಬರಹ ನೀಡಿ, ಒತ್ತುವರಿ ತೆರವುಗೊಳಿಸುವಂತೆ ಖಾಸಗಿ ವ್ಯಕ್ತಿಗೆ ಮೂರು ನೋಟಿಸ್‌ಗಳನ್ನು ಜಾರಿ ಮಾಡಲಾಗುವುದು. ಎರಡು ವಾರಗಳಲ್ಲಿ ಸ್ಥಳವನ್ನು ಒತ್ತುವರಿಯಿಂದ ಮುಕ್ತಗೊಳಿಸಿ ಸಂರಕ್ಷಿಸುವುದಾಗಿ ಭರವಸೆ ನೀಡಿದರು.

ಅಧಿಕಾರಿಗಳ ಭರವಸೆಯ ಬಳಿಕ ಪ್ರತಿಭಟನಾಕಾರರು ಮನವಿ ಸಲ್ಲಿಸಿ ಧರಣಿಯನ್ನು ಅಂತ್ಯಗೊಳಿಸಿದರು.

ಧರಣಿಯಲ್ಲಿ ಜಮೈತುಲ್ ಖುರೇಷಿ ಸಮಿತಿಯ ಅಧ್ಯಕ್ಷ ದಾವೂದ್ ಸಾಬ್, ಉಪಾಧ್ಯಕ್ಷ ದಾವಲಸಾಬ್, ಕಾರ್ಯದರ್ಶಿ ಖಾಜಾ ಅಜ್ಮೀರ್, ದಾವೂಸಾಬ್ ಖಾದರ್ ಸಾಬ್, ನಬಿಲಾಲ್, ಆರುನ್, ವೀರ ರೆಹಮಾನ್ ಸಾಬ್, ಉಸ್ಮಾನಸಾಬ್, ರಿಯಾಜಸಾಬ್, ಮಹಿಬೂಬ್ ಸಾಬ್, ಬಸಿರಸಾಬ್ ಸೇರಿದಂತೆ ಸಮಿತಿಯ 90ಕ್ಕೂ ಹೆಚ್ಚು ಜನರು ಹಾಗೂ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕ್ರಾಂತಿಕಾರಿ ಬಣದ ಅನೇಕ ಮುಖಂಡರು ಭಾಗವಹಿಸಿದ್ದರು.

Tags

Surapura
share
ವಾರ್ತಾಭಾರತಿ
ವಾರ್ತಾಭಾರತಿ
Next Story
X