Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಸುರಪುರ | ನಕಲಿ ಪಿಎಚ್‌ಡಿ ಪ್ರಮಾಣ ಪತ್ರ...

ಸುರಪುರ | ನಕಲಿ ಪಿಎಚ್‌ಡಿ ಪ್ರಮಾಣ ಪತ್ರ ಸಲ್ಲಿಸಿ ಸೇವೆಗೆ ಸೇರಿರುವ ಆರೋಪ: ತನಿಖೆಗೆ ಆಗ್ರಹಿಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ11 Aug 2026 7:49 PM IST
share
ಸುರಪುರ | ನಕಲಿ ಪಿಎಚ್‌ಡಿ ಪ್ರಮಾಣ ಪತ್ರ ಸಲ್ಲಿಸಿ ಸೇವೆಗೆ ಸೇರಿರುವ ಆರೋಪ: ತನಿಖೆಗೆ ಆಗ್ರಹಿಸಿ ಪ್ರತಿಭಟನೆ

ಸುರಪುರ: ಸರ್ಕಾರಿ ಪದವಿ ಕಾಲೇಜುಗಳಲ್ಲಿ ನಕಲಿ ಪಿಎಚ್‌ಡಿ ಪ್ರಮಾಣ ಪತ್ರಗಳನ್ನು ಸಲ್ಲಿಸಿ ಅತಿಥಿ ಉಪನ್ಯಾಸಕರಾಗಿ ಸೇವೆಗೆ ಸೇರಿರುವ ಆರೋಪದ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಡಿಎಸ್‌ಎಸ್) ಡಿ.ಜಿ. ಸಾಗರ ಬಣದ ವತಿಯಿಂದ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಸಂಘಟನಾ ಸಂಚಾಲಕ ಶಿವಲಿಂಗ ಹಸನಾಪುರ ಮಾತನಾಡಿ, ರಾಜ್ಯದಲ್ಲಿ ಸುಮಾರು 285 ಮಂದಿ ಅತಿಥಿ ಉಪನ್ಯಾಸಕರು ನಕಲಿ ಪಿಎಚ್‌ಡಿ ಪ್ರಮಾಣ ಪತ್ರಗಳನ್ನು ಸಲ್ಲಿಸಿ ಪದವಿ ಕಾಲೇಜುಗಳಲ್ಲಿ ಸೇವೆಗೆ ಸೇರಿರುವುದು ಕಾಲೇಜು ಶಿಕ್ಷಣ ಇಲಾಖೆ ಪರಿಶೀಲನೆಯಲ್ಲಿ ಬೆಳಕಿಗೆ ಬಂದಿದೆ ಎಂದು ಹೇಳಿದರು.

ಅತಿಥಿ ಉಪನ್ಯಾಸಕರ ದಾಖಲೆಗಳನ್ನು ಪರಿಶೀಲಿಸಲು ಸರ್ಕಾರಿ ಪದವಿ ಕಾಲೇಜುಗಳಲ್ಲಿ ಎಸ್‌ಒಪಿ ಸಮಿತಿ ರಚಿಸಿ ಪ್ರಮಾಣ ಪತ್ರಗಳನ್ನು ಪರಿಶೀಲಿಸಲಾಗಿದೆ. ಆದರೂ ಕೆಲವು ಕಾಲೇಜುಗಳ ಪ್ರಾಂಶುಪಾಲರು ಆಮಿಷಕ್ಕೆ ಒಳಗಾಗಿ ನಕಲಿ ಪ್ರಮಾಣ ಪತ್ರಗಳಿದ್ದರೂ ಅವುಗಳನ್ನು ಬಹಿರಂಗಪಡಿಸದೆ ಸರ್ಕಾರಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿವೆ ಎಂದು ಹೇಳಿದರು.

ಆದ್ದರಿಂದ ಕಾಲೇಜು ಶಿಕ್ಷಣ ಇಲಾಖೆ ಅತಿಥಿ ಉಪನ್ಯಾಸಕರ ಪಿಎಚ್‌ಡಿ ಹಾಗೂ ಎಂಫಿಲ್ ಪ್ರಮಾಣ ಪತ್ರಗಳನ್ನು ಮತ್ತೊಮ್ಮೆ ಸಮಗ್ರವಾಗಿ ಪರಿಶೀಲಿಸಬೇಕು. ನಕಲಿ ಪ್ರಮಾಣ ಪತ್ರಗಳನ್ನು ಸಲ್ಲಿಸಿರುವುದು ದೃಢಪಟ್ಟರೆ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಹಿಂದಿನ ವರ್ಷಗಳಲ್ಲಿಯೇ ಅಕ್ರಮದ ಬಗ್ಗೆ ಮಾಹಿತಿ ಇದ್ದರೂ ಅದನ್ನು ಮರೆಮಾಚಿರುವ ಪ್ರಾಂಶುಪಾಲರ ವಿರುದ್ಧವೂ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದರು.

ಯುಜಿಸಿ ಮಾನ್ಯತೆಯ ಹೆಸರಿನಲ್ಲಿ ನೇಮಕಗೊಂಡಿರುವ ಉಪನ್ಯಾಸಕರ ಪಿಎಚ್‌ಡಿ ಪ್ರಮಾಣ ಪತ್ರಗಳ ಬಗ್ಗೆಯೂ ಸರ್ಕಾರ ಪ್ರತ್ಯೇಕ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ನಂತರ ಮುಖ್ಯಮಂತ್ರಿ, ಕಾಲೇಜು ಶಿಕ್ಷಣ ಇಲಾಖೆಯ ಸಚಿವರು ಹಾಗೂ ಗೃಹ ಸಚಿವರಿಗೆ ಬರೆದ ಮನವಿಯನ್ನು ತಹಶೀಲ್ದಾರ್ ಕಚೇರಿಯ ಸಿರಸ್ತೆದಾರರ ಮೂಲಕ ಸಲ್ಲಿಸಲಾಯಿತು.

ಪ್ರಾಂಶುಪಾಲರಿಗೆ ಮನವಿ :

ಪಟ್ಟಣದ ಸರ್ಕಾರಿ ಪದವಿ ಕಾಲೇಜಿನಲ್ಲಿ ನಕಲಿ ಪಿಎಚ್‌ಡಿ ಪ್ರಮಾಣ ಪತ್ರ ಸಲ್ಲಿಸಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವವರ ದಾಖಲೆಗಳನ್ನು ಸಮರ್ಪಕವಾಗಿ ಪರಿಶೀಲಿಸಬೇಕು. ನಕಲಿ ಪ್ರಮಾಣ ಪತ್ರ ಸಲ್ಲಿಸಿರುವುದು ಕಂಡುಬಂದರೆ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ವರದಿ ಸಲ್ಲಿಸಬೇಕು ಎಂದು ಡಿಎಸ್‌ಎಸ್ ಮುಖಂಡರು ಕಾಲೇಜಿನ ಪ್ರಾಂಶುಪಾಲರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ಉಪ ವಿಭಾಗಿಯ ಸಂಚಾಲಕ ರಮೇಶ ಬಡಿಗೇರ,ತಾಲೂಕ ಸಂಚಾಲಕ ತಿಪ್ಪಣ್ಣ ಶೆಳ್ಳಗಿ, ಎಮ್.ಪಟೇಲ್, ಚನ್ನಬಸಪ್ಪ ತಳವಾರ, ವೆಂಕಟೇಶ ದೇವಪುರ, ಶೇಖರ ಮಂಗಳೂರ, ರಾಜು ಬಡಿಗೇರ, ಖಾಜಾ ಅಜ್ಮೀರ ಖುರೇಷಿ, ಪಾರಪ್ಪ ದೇವತ್ಕಲ್, ಮೌನೇಶ ದೇವತ್ಕಲ್, ಹಣಮಂತ ರತ್ತಾಳ, ದೇವು ಬಡಿಗೇರ, ಯಲ್ಲಪ್ಪ ರತ್ತಾಳ, ಹಣಮಂತ ದೊಡ್ಡಮನಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.

Tags

protestSurapura
share
ವಾರ್ತಾಭಾರತಿ
ವಾರ್ತಾಭಾರತಿ
Next Story
X