Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಸುರಪುರ | 10 ತಿಂಗಳ ಬಾಕಿ ವೇತನಕ್ಕೆ...

ಸುರಪುರ | 10 ತಿಂಗಳ ಬಾಕಿ ವೇತನಕ್ಕೆ ಆಗ್ರಹಿಸಿ ಕೆಲಸ ಸ್ಥಗಿತಗೊಳಿಸಿದ ಪೌರಕಾರ್ಮಿಕರು

ವಾರ್ತಾಭಾರತಿವಾರ್ತಾಭಾರತಿ9 Nov 2026 7:10 PM IST
share
ಸುರಪುರ | 10 ತಿಂಗಳ ಬಾಕಿ ವೇತನಕ್ಕೆ ಆಗ್ರಹಿಸಿ ಕೆಲಸ ಸ್ಥಗಿತಗೊಳಿಸಿದ ಪೌರಕಾರ್ಮಿಕರು

ಸುರಪುರ: ಬಾಕಿ ವೇತನ ಪಾವತಿಸುವಂತೆ ಆಗ್ರಹಿಸಿ ನಗರಸಭೆಯ ಹೊರಗುತ್ತಿಗೆ ವಾಹನ ಚಾಲಕರು ಹಾಗೂ ಲೋಡರ್‌ಗಳು ಕೆಲಸದಿಂದ ದೂರ ಉಳಿದಿದ್ದರಿಂದ ಪಟ್ಟಣದ ಹಲವು ಕಡೆಗಳಲ್ಲಿ ಕಸದ ರಾಶಿ ಸಂಗ್ರಹವಾಗಿದೆ. ದೀಪಾವಳಿ ಹಬ್ಬದ ಸಂದರ್ಭದಲ್ಲಿ ಕಸ ವಿಲೇವಾರಿ ಸ್ಥಗಿತಗೊಂಡಿರುವುದರಿಂದ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ.

ಕಳೆದ ತಿಂಗಳೂ ವೇತನ ಪಾವತಿಸುವಂತೆ ಆಗ್ರಹಿಸಿ ಹೊರಗುತ್ತಿಗೆ ಪೌರಕಾರ್ಮಿಕರು ಕೆಲಸದಿಂದ ದೂರ ಉಳಿದು ನಗರಸಭೆ ಕಚೇರಿ ಮುಂದೆ ಧರಣಿ ನಡೆಸಿದ್ದರು. ಆ ಸಂದರ್ಭದಲ್ಲಿ ವೇತನ ಪಾವತಿಸುವ ಭರವಸೆ ನೀಡಿ ಮತ್ತೆ ಕೆಲಸಕ್ಕೆ ಹಾಜರಾಗುವಂತೆ ಪೌರಾಯುಕ್ತರು ಸೂಚಿಸಿದ್ದರು. ಹೀಗಾಗಿ ಚಾಲಕರು ಮತ್ತೆ ಕೆಲಸಕ್ಕೆ ಮರಳಿದ್ದರು.

ಬಳಿಕ ಎರಡು ತಿಂಗಳ ವೇತನ ಪಾವತಿಸಲಾಗಿತ್ತು. ಉಳಿದ 10 ತಿಂಗಳ ವೇತನವನ್ನೂ ನೀಡುವಂತೆ ಆಗ್ರಹಿಸಲಾಗಿತ್ತು. ಆದರೆ, ಇದುವರೆಗೂ ಬಾಕಿ ಉಳಿದಿರುವ 10 ತಿಂಗಳ ವೇತನ ಪಾವತಿಸಿಲ್ಲ. ದೀಪಾವಳಿ ಹಬ್ಬವನ್ನೂ ನಮ್ಮ ಮನೆಗಳಲ್ಲಿ ಆಚರಿಸಲು ಸಾಧ್ಯವಾಗುತ್ತಿಲ್ಲ. ಇದರಿಂದ ಬೇಸತ್ತು ಕೆಲಸದಿಂದ ದೂರ ಉಳಿದಿದ್ದೇವೆ ಎಂದು ಹೊರಗುತ್ತಿಗೆ ಪೌರಕಾರ್ಮಿಕ ವಾಹನ ಚಾಲಕರ ಸಂಘದ ಅಧ್ಯಕ್ಷ ಸತೀಶ ನಾಯಕ ತಿಳಿಸಿದರು.

ನಗರಸಭೆ ಅಧಿಕಾರಿಗಳು ನಮ್ಮ ಸಮಸ್ಯೆಯನ್ನು ಅರ್ಥಮಾಡಿಕೊಳ್ಳುತ್ತಿಲ್ಲ. 10 ತಿಂಗಳಿನಿಂದ ವೇತನವಿಲ್ಲದೆ ಕುಟುಂಬ ನಿರ್ವಹಣೆ ಮಾಡುವುದು ಕಷ್ಟವಾಗಿದೆ. ಮಕ್ಕಳ ಶಾಲಾ ಶುಲ್ಕ ಪಾವತಿಸಲು ಸಾಧ್ಯವಾಗುತ್ತಿಲ್ಲ. ಮನೆಗೆ ಅಗತ್ಯವಾದ ವಸ್ತುಗಳನ್ನು ಖರೀದಿಸಲೂ ಹಣವಿಲ್ಲದಂತಾಗಿದೆ. ದೀಪಾವಳಿ ಹಬ್ಬದ ಸಂದರ್ಭದಲ್ಲಿ ಕುಟುಂಬದ ಸದಸ್ಯರು ಹಸಿವಿನಿಂದ ಸಂಕಷ್ಟ ಅನುಭವಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಬೇಸತ್ತು ವಾಹನ ಚಾಲಕರು ಹಾಗೂ ಲೋಡರ್‌ಗಳು ಕೆಲಸದಿಂದ ದೂರ ಉಳಿದಿದ್ದೇವೆ. ಎರಡು ದಿನಗಳಿಂದ ಕೆಲಸ ಸ್ಥಗಿತಗೊಳಿಸಿದ್ದರೂ ಯಾವುದೇ ಅಧಿಕಾರಿಗಳು ನಮ್ಮ ಬೇಡಿಕೆ ಈಡೇರಿಸಲು ಮುಂದಾಗಿಲ್ಲ. ಈಗಲಾದರೂ ನಮ್ಮ ಸಮಸ್ಯೆಯನ್ನು ಅರ್ಥಮಾಡಿಕೊಂಡು ಬಾಕಿ ಇರುವ 10 ತಿಂಗಳ ವೇತನವನ್ನು ಕೂಡಲೇ ಪಾವತಿಸಬೇಕು ಎಂದು ಅವರು ಒತ್ತಾಯಿಸಿದರು.

ಸಂಜೆಯ ವೇಳೆಗೆ ನಗರಸಭೆ ವ್ಯವಸ್ಥಾಪಕ ಯಲ್ಲಪ್ಪ ನಾಯಕ ಅವರು ಹೊರಗುತ್ತಿಗೆ ಚಾಲಕರನ್ನು ಭೇಟಿಯಾಗಿ, ಎರಡು ವಾರಗಳಲ್ಲಿ ವೇತನ ಪಾವತಿಸಲು ವ್ಯವಸ್ಥೆ ಮಾಡಲಾಗುವುದು. ಆದ್ದರಿಂದ ಮರುದಿನದಿಂದ ಕೆಲಸಕ್ಕೆ ಹಾಜರಾಗುವಂತೆ ಮನವಿ ಮಾಡಿದರು. ವ್ಯವಸ್ಥಾಪಕರ ಭರವಸೆಗೆ ಸ್ಪಂದಿಸಿದ ಚಾಲಕರು ಮಂಗಳವಾರದಿಂದ ಮತ್ತೆ ಕೆಲಸಕ್ಕೆ ಹಾಜರಾಗುವುದಾಗಿ ತಿಳಿಸಿದರು ಎಂದು ಯಲ್ಲಪ್ಪ ನಾಯಕ ಹೇಳಿದರು.

ಕಸದ ರಾಶಿಯಿಂದ ಸಾರ್ವಜನಿಕರಿಗೆ ತೊಂದರೆ :

ಎರಡು ದಿನಗಳಿಂದ ಕಸ ವಿಲೇವಾರಿ ವಾಹನಗಳ ಚಾಲಕರು ಕೆಲಸದಿಂದ ದೂರ ಉಳಿದಿರುವುದರಿಂದ ಸುರಪುರ ಮತ್ತು ರಂಗಂಪೇಟೆಯ ಹಲವು ಕಡೆಗಳಲ್ಲಿ ಕಸದ ರಾಶಿ ಬಿದ್ದಿದೆ. ದೀಪಾವಳಿ ಹಬ್ಬದ ಸಂದರ್ಭದಲ್ಲಿ ನಗರಸಭೆಯ ಕಸ ಸಂಗ್ರಹಣೆ ವಾಹನಗಳು ಬಾರದ ಕಾರಣ ಎಲ್ಲೆಡೆ ಕಸ ಸಂಗ್ರಹವಾಗಿ ದುರ್ವಾಸನೆ ಹರಡುತ್ತಿದೆ. ಇದರಿಂದ ಸಾರ್ವಜನಿಕರು ನಗರಸಭೆಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಬ್ಬದ ಸಂದರ್ಭದಲ್ಲಿ ನಗರಸಭೆ ನಿರ್ಲಕ್ಷ್ಯ ತೋರಿರುವುದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದೆ. ಕೂಡಲೇ ಪಟ್ಟಣದ ಎಲ್ಲೆಡೆ ಸಂಗ್ರಹವಾಗಿರುವ ಕಸವನ್ನು ತೆರವುಗೊಳಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Tags

civic workersSurapura
share
ವಾರ್ತಾಭಾರತಿ
ವಾರ್ತಾಭಾರತಿ
Next Story
X