Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಸುರಪುರ | ಕೆಂಭಾವಿ ಪೊಲೀಸ್ ಠಾಣೆ...

ಸುರಪುರ | ಕೆಂಭಾವಿ ಪೊಲೀಸ್ ಠಾಣೆ ವರ್ಗಾವಣೆ ಆದೇಶ ರದ್ದುಗೊಳಿಸಲು ದಲಿತ ಸಂಘರ್ಷ ಸಮಿತಿ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ29 July 2026 6:43 PM IST
share
ಸುರಪುರ | ಕೆಂಭಾವಿ ಪೊಲೀಸ್ ಠಾಣೆ ವರ್ಗಾವಣೆ ಆದೇಶ ರದ್ದುಗೊಳಿಸಲು ದಲಿತ ಸಂಘರ್ಷ ಸಮಿತಿ ಆಗ್ರಹ
ಆ.14ರಂದು ಸುರಪುರ ಬಂದ್ ಎಚ್ಚರಿಕೆ; ಡಿವೈಎಸ್ಪಿ ಮೂಲಕ ಸಿಎಂ, ಗೃಹ ಸಚಿವರಿಗೆ ಮನವಿ

ಸುರಪುರ: ಕೆಂಭಾವಿ ಪೊಲೀಸ್ ಠಾಣೆಯನ್ನು ಹುಣಸಗಿ ವೃತ್ತದಿಂದ ಶಹಾಪುರ ವೃತ್ತಕ್ಕೆ ವರ್ಗಾವಣೆ ಮಾಡುವ ಆದೇಶವನ್ನು ಕೂಡಲೇ ರದ್ದುಗೊಳಿಸಿ, ಠಾಣೆಯನ್ನು ಈಗಿರುವ ಹುಣಸಗಿ ವೃತ್ತದಲ್ಲಿಯೇ ಮುಂದುವರಿಸಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾರಿ ಬಣ) ರಾಜ್ಯ ಸಂಘಟನಾ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ ಆಗ್ರಹಿಸಿದರು.

ಪಟ್ಟಣದ ಸುರಪುರ ಪೊಲೀಸ್ ಉಪ ವಿಭಾಗದ ಡಿವೈಎಸ್ಪಿ ಕಚೇರಿ ಎದುರು ಸಾಂಕೇತಿಕ ಪ್ರತಿಭಟನೆ ನಡೆಸಿ ಮಾತನಾಡಿದ ಅವರು, ಕೆಂಭಾವಿ ಪೊಲೀಸ್ ಠಾಣೆಯನ್ನು ಶಹಾಪುರ ವೃತ್ತಕ್ಕೆ ಸೇರ್ಪಡೆ ಮಾಡಿದರೆ ಠಾಣಾ ವ್ಯಾಪ್ತಿಯ ಹಲವು ಗ್ರಾಮಗಳ ಜನರು ಪೊಲೀಸ್ ಕೆಲಸಗಳಿಗಾಗಿ ಶಹಾಪುರಕ್ಕೆ ತೆರಳಬೇಕಾಗುತ್ತದೆ. ಇದರಿಂದ ಸಾರ್ವಜನಿಕರಿಗೆ ಸುಮಾರು 100 ಕಿಲೋಮೀಟರ್‌ಗಳಷ್ಟು ಹೆಚ್ಚುವರಿ ಪ್ರಯಾಣದ ತೊಂದರೆ ಉಂಟಾಗಲಿದೆ ಎಂದು ಹೇಳಿದರು.

ಆದ್ದರಿಂದ ಯಾವುದೇ ಕಾರಣಕ್ಕೂ ಕೆಂಭಾವಿ ಪೊಲೀಸ್ ಠಾಣೆಯನ್ನು ಶಹಾಪುರ ವೃತ್ತಕ್ಕೆ ವರ್ಗಾವಣೆ ಮಾಡದೆ, ಪ್ರಸ್ತುತ ಇರುವ ಹುಣಸಗಿ ವೃತ್ತದಲ್ಲಿಯೇ ಮುಂದುವರಿಸಬೇಕು. ಈಗಾಗಲೇ ಹೊರಡಿಸಿರುವ ಆದೇಶವನ್ನು ತಕ್ಷಣ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ಸರ್ಕಾರ ಈ ಕುರಿತು ಕ್ರಮ ಕೈಗೊಳ್ಳಲು ವಿಳಂಬ ಮಾಡಿದರೆ ಆಗಸ್ಟ್‌ 14ರಂದು ಸುರಪುರ ಬಂದ್‌ಗೆ ಕರೆ ನೀಡಿ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಬಳಿಕ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರಿಗೆ ಉದ್ದೇಶಿಸಿದ ಮನವಿ ಪತ್ರವನ್ನು ಡಿವೈಎಸ್ಪಿ ಜಾವೇದ್ ಇನಾಂದಾರ್ ಅವರ ಮೂಲಕ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಸಂಘಟನೆಯ ಮುಖಂಡರುಗಳಾದ ಮಾನು ಗುರಿಕಾರ, ಚಂದ್ರಶೇಖರ ಕಟ್ಟಿಮನಿ, ಸಿದ್ದಪ್ಪ ಸುರಪುರಕರ್,ಮೂರ್ತಿ ಬೊಮ್ಮನಹಳ್ಳಿ, ಭೀಮರಾಯ ಸಿಂದಗೇರಿ, ರಾಮಣ್ಣ ಶೆಳ್ಳಗಿ, ನಿಂಗಣ್ಣ ಶೆಳ್ಳಗಿ, ಬಸವರಾಜ ದೊಡ್ಡಮನಿ, ಮಹೇಶ ಸುಂಗಲಕರ್, ಖಾಜಾ ಹುಸೇನ್ ಗುಡಗುಂಟಿ,ಆನಂದ ಹೇಮನೂರ ಸೇರಿದಂತೆ ಅನೇಕರು ಭಾಗವಹಿಸಿದ್ದರು.

Tags

police stationKembhaviDalit Sangharsha SamitiSurapura
share
ವಾರ್ತಾಭಾರತಿ
ವಾರ್ತಾಭಾರತಿ
Next Story
X