Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಸುರಪುರ | ಪ್ರಿಯಾಂಕ್ ಖರ್ಗೆ ವಿರುದ್ಧ...

ಸುರಪುರ | ಪ್ರಿಯಾಂಕ್ ಖರ್ಗೆ ವಿರುದ್ಧ ಕುಮಾರಸ್ವಾಮಿ ಹೇಳಿಕೆ ಖಂಡಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ17 Oct 2026 10:40 PM IST
share
ಸುರಪುರ | ಪ್ರಿಯಾಂಕ್ ಖರ್ಗೆ ವಿರುದ್ಧ ಕುಮಾರಸ್ವಾಮಿ ಹೇಳಿಕೆ ಖಂಡಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಸುರಪುರ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ವಿರುದ್ಧ ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಏಕವಚನದಲ್ಲಿ ನಿಂದಿಸಿದ್ದಾರೆ ಎಂದು ಆರೋಪಿಸಿ, ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾರಿ ಬಣ)ದ ಮುಖಂಡರು ಪಟ್ಟಣದ ಮಹಾತ್ಮ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ರಾಜ್ಯ ಸಂಘಟನಾ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ ಮಾತನಾಡಿ, ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ವಿರುದ್ಧ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಏಕವಚನದಲ್ಲಿ ಮಾತನಾಡಿರುವುದು ಖಂಡನೀಯ ಎಂದರು.

ಮೇಲ್ವರ್ಗದವರು ಕೆಳವರ್ಗದವರ ಮೇಲೆ ದೌರ್ಜನ್ಯ ಎಸಗುತ್ತಿರುವುದನ್ನು ಗಮನಿಸಿದರೆ ಸಮಾಜದಲ್ಲಿ ಇನ್ನೂ ಅಸ್ಪೃಶ್ಯತೆ ಜೀವಂತವಾಗಿರುವುದು ಕಂಡುಬರುತ್ತದೆ. ಕೇಂದ್ರ ಸಚಿವರೊಬ್ಬರು ರಾಜ್ಯದ ಗೃಹ ಸಚಿವರ ವಿರುದ್ಧ, ಅದರಲ್ಲೂ ದಲಿತ ಸಮುದಾಯಕ್ಕೆ ಸೇರಿದವರ ಬಗ್ಗೆ ಈ ರೀತಿ ಮಾತನಾಡುವುದು ಸರಿಯಲ್ಲ. ಕೇಂದ್ರ ಸಚಿವರು ತಮ್ಮ ಸ್ಥಾನಮಾನದ ಘನತೆಗೆ ತಕ್ಕಂತೆ ಗೌರವಯುತ ಭಾಷೆಯನ್ನು ಬಳಸಬೇಕು ಎಂದು ಹೇಳಿದರು.

ದಲಿತ ಸಮುದಾಯಕ್ಕೆ ಸೇರಿದವರು ಎಂಬ ಒಂದೇ ಕಾರಣಕ್ಕೆ ಪ್ರಿಯಾಂಕ್ ಖರ್ಗೆ ಅವರ ವಿರುದ್ಧ ಏಕವಚನದಲ್ಲಿ ಮಾತನಾಡುವುದನ್ನು ದಲಿತ ಸಂಘರ್ಷ ಸಮಿತಿ ಖಂಡಿಸುತ್ತದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತಕ್ಷಣ ಎಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಹೋರಾಟ ನಡೆಸುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಸಿದರು.

ನಂತರ ಮುಖ್ಯಮಂತ್ರಿಗಳಿಗೆ ಬರೆದ ಮನವಿಯನ್ನು ಪ್ರತ್ಯೇಕವಾಗಿ ಉಪ ತಹಶೀಲ್ದಾರ್ ಹಾಗೂ ಸಿಪಿಐ ಅವರಿಗೆ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಸಂಘದ ಮುಖಂಡರಾದ ಅಜೀಜ್ ಸಾಬ್ ಐಕೂರ, ಮಾದೇವಪ್ಪ ಬಿಜಾಸಪುರ್, ಹನುಮಂತಪ್ಪ ಮಹಲ್ ರೋಜಾ, ಗುರುಮಠಕಲ್ ತಾಲೂಕು ಸಂಚಾಲಕ ಆನಂದ್ ಭಜಂತ್ರಿ, ಸುರಪುರ ತಾಲೂಕು ಸಂಚಾಲಕ ಬಸವರಾಜ ಶಳ್ಳಿಗಿ, ಮೂರ್ತಿ ಬೊಮ್ನಳ್ಳಿ, ಮಹೇಂದ್ರ ತಾತಳಗೇರ, ಮಹಾದೇವಪ್ಪ ದೇವಿಕೇರ, ರಾಮಣ್ಣ ಬಬಲಾದ್, ರಾಮಣ್ಣ ಶಳ್ಳಿಗಿ, ಮಹೇಶಕುಮಾರ ಸುಂಗಲಕರ್, ಗಣಪತಿ ದೇವಿಕೇರಿ, ಆನಂದ ಜಂಡದಕೇರಿ, ಬಾಲು ಗುಂಡುಗುರ್ತಿ, ಬಾಗಪ್ಪ ದೇವಿಕೇರಿ, ಬಸವರಾಜ ಬೇವಿನಗಿಡ ಸೇರಿದಂತೆ ದೇವಿಕೇರಿ ಗ್ರಾಮದ ನೂರಾರು ಜನರು ಭಾಗವಹಿಸಿದ್ದರು.

Tags

Priyank KhargeKumaraswamyprotestDalit Sangharsha SamitiSurapura
share
ವಾರ್ತಾಭಾರತಿ
ವಾರ್ತಾಭಾರತಿ
Next Story
X