Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಸುರಪುರ | ಗುಣಮಟ್ಟದ ರಸ್ತೆ, ಚರಂಡಿ...

ಸುರಪುರ | ಗುಣಮಟ್ಟದ ರಸ್ತೆ, ಚರಂಡಿ ನಿರ್ಮಾಣಕ್ಕೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ29 July 2026 6:40 PM IST
share
ಸುರಪುರ | ಗುಣಮಟ್ಟದ ರಸ್ತೆ, ಚರಂಡಿ ನಿರ್ಮಾಣಕ್ಕೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ
ಕಳಪೆ ಕಾಮಗಾರಿ ಆರೋಪ; ಜಿಲ್ಲಾಧಿಕಾರಿಗಳಿಗೆ ಮನವಿ

ಸುರಪುರ: ಪಟ್ಟಣದ ಸರ್ಕಾರಿ ಬಾಲಕರ ಪ್ರೌಢಶಾಲೆಯ ಹಿಂಭಾಗದಲ್ಲಿರುವ ರಸ್ತೆಯನ್ನು ಉತ್ತಮ ಗುಣಮಟ್ಟದಲ್ಲಿ ನಿರ್ಮಿಸಿ, ರಸ್ತೆ ಬದಿಯಲ್ಲಿ ಚರಂಡಿ ಕಾಮಗಾರಿ ಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾರಿ ಬಣ) ವತಿಯಿಂದ ಬುಧವಾರ ಮಹಾತ್ಮ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಮಾತನಾಡಿದ ಸಂಘಟನೆಯ ರಾಜ್ಯ ಸಂಘಟನಾ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ, ಸರ್ಕಾರಿ ಬಾಲಕರ ಪ್ರೌಢಶಾಲೆಯ ಹಿಂಭಾಗದಲ್ಲಿರುವ ಸಾಹೇಬಣ್ಣ ಅಂಗಡಿಯಿಂದ ಬುಧವಾರದವರೆಗೆ ಕನಿಷ್ಠ 15ರಿಂದ 20 ಅಡಿ ಅಗಲದ ಸಿಸಿ ರಸ್ತೆ ನಿರ್ಮಿಸಬೇಕು. ರಸ್ತೆ ಎರಡೂ ಬದಿಗಳಲ್ಲಿ ಸಮರ್ಪಕ ಚರಂಡಿ ವ್ಯವಸ್ಥೆ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಈ ಹಿಂದೆ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು ಈ ರಸ್ತೆಗೆ ಅನುದಾನ ಮಂಜೂರು ಮಾಡಿದ್ದರು. ಆದರೆ ಪ್ರಸ್ತುತ ನಡೆಯುತ್ತಿರುವ ಕಾಮಗಾರಿ ಅದೇ ಅನುದಾನದಲ್ಲಿ ನಡೆಯುತ್ತಿದೆಯೇ ಎಂಬ ಕುರಿತು ಯಾವುದೇ ಮಾಹಿತಿ ನೀಡಲಾಗುತ್ತಿಲ್ಲ. ನಿರ್ಮಿತಿ ಕೇಂದ್ರ ಹಾಗೂ ಕರ್ನಾಟಕ ಭೂಸೇನಾ ನಿಗಮಕ್ಕೆ ಕಾಮಗಾರಿ ನೀಡಲಾಗಿದ್ದು, ನಿರ್ಮಿತಿ ಕೇಂದ್ರದಿಂದ ನಡೆಯುತ್ತಿರುವ ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿದ್ದು, ಚರಂಡಿಯನ್ನೂ ನಿರ್ಮಿಸಲಾಗಿಲ್ಲ ಎಂದು ಆರೋಪಿಸಿದರು.

ಅಂಬೇಡ್ಕರ್ ನಗರ ಸೇರಿದಂತೆ ಇತರೆ ಪ್ರದೇಶಗಳಲ್ಲಿಯೂ ರಸ್ತೆ ನಿರ್ಮಾಣ ಅಗತ್ಯವಿದ್ದು, ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಬಳಿಕ ಜಿಲ್ಲಾಧಿಕಾರಿಗಳಿಗೆ ಉದ್ದೇಶಿಸಿದ ಮನವಿ ಪತ್ರವನ್ನು ನಿರ್ಮಿತಿ ಕೇಂದ್ರದ ಕಿರಿಯ ಅಭಿಯಂತರ ಪವನ್ ನಾಗನಹಳ್ಳಿ ಅವರ ಮೂಲಕ ಸಲ್ಲಿಸಿದರು. ನಂತರ ಪ್ರತಿಭಟನಾಕಾರರು ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ, ಕಾಮಗಾರಿ ಗುಣಮಟ್ಟದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ಪ್ರತಿಭಟನೆ ವೇಳೆ ಪಿಎಸ್‌ಐ ಕೃಷ್ಣ ಸುಬೇದಾರ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಉಪಾಸಕ ಭೀಮರಾಯ ಸಿಂದಗೇರಿ, ಮಾನು ಗುರಿಕಾರ, ಆನಂದ ಹೇಮನೂರ, ಮೂರ್ತಿ ಬೊಮ್ಮನಹಳ್ಳಿ, ಚಂದ್ರಶೇಖರ ಕಟ್ಟಿಮನಿ, ಸಿದ್ದಪ್ಪ ಸುರಪುರಕರ್, ಖಾಜಾ ಹುಸೇನ ಗುಡಗುಂಟಿ, ರಾಮಣ್ಣ ಶೆಳ್ಳಗಿ, ಬಸವರಾಜ ಶೆಳ್ಳಗಿ, ಮಾನಪ್ಪ ಶೆಳ್ಳಗಿ, ಮಹೇಶ ಸುಂಗಲಕರ, ಗಣಪತಿ ದೇವಿಕೇರ ಸೇರಿದಂತೆ ಅನೇಕರು ಭಾಗವಹಿಸಿದ್ದರು.

Tags

protestDalit Sangharsha SamitiSurapura
share
ವಾರ್ತಾಭಾರತಿ
ವಾರ್ತಾಭಾರತಿ
Next Story
X