Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಸುರಪುರ | ಮಹಿಳೆಯರ ಮೇಲಿನ ದೌರ್ಜನ್ಯದ...

ಸುರಪುರ | ಮಹಿಳೆಯರ ಮೇಲಿನ ದೌರ್ಜನ್ಯದ ವಿರುದ್ಧ ಪುರುಷರೂ ಧ್ವನಿ ಎತ್ತಬೇಕು : ಮಹಾದೇವಮ್ಮ ಬೇವಿನಾಳಮಠ

ವಾರ್ತಾಭಾರತಿವಾರ್ತಾಭಾರತಿ15 Oct 2026 5:36 PM IST
share
ಸುರಪುರ | ಮಹಿಳೆಯರ ಮೇಲಿನ ದೌರ್ಜನ್ಯದ ವಿರುದ್ಧ ಪುರುಷರೂ ಧ್ವನಿ ಎತ್ತಬೇಕು : ಮಹಾದೇವಮ್ಮ ಬೇವಿನಾಳಮಠ

ಸುರಪುರ: ಇಂದು ಮಹಿಳೆ ಎಲ್ಲ ರಂಗಗಳಲ್ಲೂ ಪುರುಷರಿಗೆ ಸಮಾನವಾಗಿ ನಿಂತಿದ್ದಾಳೆ. ಮಹಿಳೆಗೆ ಪ್ರಶಸ್ತಿಗಳಿಗಿಂತ ಎಲ್ಲರ ಬೆಂಬಲ ಮುಖ್ಯವಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಮಹಿಳಾ ಘಟಕದ ರಾಜ್ಯ ಉಪಾಧ್ಯಕ್ಷೆ ಮಹಾದೇವಮ್ಮ ಬೇವಿನಾಳಮಠ ಹೇಳಿದರು.

ಪಟ್ಟಣದ ರಂಗಂಪೇಟೆಯ ಕನ್ನಡ ಸಾಹಿತ್ಯ ಸಂಘದ ಭವನದಲ್ಲಿ ನಡೆದ 84ನೇ ನಾಡಹಬ್ಬದ ಮೂರನೇ ದಿನದ ಮಹಿಳಾ ವಿಶೇಷ ಕಾರ್ಯಕ್ರಮದಲ್ಲಿ ಉಪನ್ಯಾಸಕರಾಗಿ ಭಾಗವಹಿಸಿ, ‘ಸಮಾಜದಲ್ಲಿ ಮಹಿಳೆಯರ ಪಾತ್ರ’ ವಿಷಯದ ಕುರಿತು ಅವರು ಮಾತನಾಡಿದರು.

‘ಯತ್ರ ನಾರ್ಯಸ್ತು ಪೂಜ್ಯಂತೆ ರಮಂತೆ ತತ್ರ ದೇವತಾ’ ಎಂದು ಎಲ್ಲರೂ ಹೇಳುತ್ತಾರೆ. ಆದರೆ, ಮಹಿಳೆಯರ ಮೇಲಿನ ದೌರ್ಜನ್ಯ ಇನ್ನೂ ನಿಂತಿಲ್ಲ. ಇದರ ವಿರುದ್ಧ ಕೇವಲ ಮಹಿಳೆಯರು ಮಾತ್ರವಲ್ಲದೆ, ಪುರುಷರೂ ಧ್ವನಿ ಎತ್ತಿ ಪ್ರತಿಭಟಿಸಬೇಕು ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಉಪನ್ಯಾಸಕರಾಗಿ ಭಾಗವಹಿಸಿದ್ದ ಡಾ. ಶಂಕರಮ್ಮ ಪಾಟೀಲ್ ಅವರು, ‘ಸಾಮಾಜಿಕ ಜಾಲತಾಣಗಳ ಪ್ರಭಾವದ ನಡುವೆ ಮಕ್ಕಳಿಗೆ ಕನ್ನಡ ಕಲಿಕೆಯ ಅವಶ್ಯಕತೆ’ ವಿಷಯದ ಕುರಿತು ಮಾತನಾಡಿದರು. ನಾಡು-ನುಡಿಯ ಸೇವೆಯನ್ನು ಎಲ್ಲರೂ ಮಾಡಬೇಕು. ಈ ನಾಡಿನ ಅನೇಕ ಕವಿ-ಸಾಹಿತಿಗಳು ತಮ್ಮ ಉಸಿರಿನಲ್ಲೂ ಕನ್ನಡವನ್ನು ತುಂಬಿಕೊಂಡಿದ್ದರು. ಕನ್ನಡ ಸಾಹಿತ್ಯ ಸಂಘವು ಎಂಟು ದಶಕಗಳಿಂದ ಕನ್ನಡ ನಾಡು-ನುಡಿಯ ಸೇವೆ ಮಾಡಿಕೊಂಡು ಬರುತ್ತಿರುವುದು ಮಾದರಿ ಕಾರ್ಯವಾಗಿದೆ ಎಂದರು.

ಸನ್ಮಾನ ಸ್ವೀಕರಿಸಿದ ತಕ್ಷಶಿಲಾ ಇಂಟರ್‌ನ್ಯಾಷನಲ್ ಸ್ಕೂಲ್ ಸಂಸ್ಥೆಯ ಅಧ್ಯಕ್ಷೆ ಅಂಬಿಕಾ ಯನಗುಂಟಿ ಮಾತನಾಡಿ, ಮಹಿಳೆಯರಲ್ಲಿ ಒಗ್ಗಟ್ಟು ಬಹಳ ಮುಖ್ಯವಾಗಿದೆ. ಸಂಘದ ಮಹಿಳಾ ಘಟಕದ ಮೂಲಕ ಅಂತಹ ಒಗ್ಗಟ್ಟನ್ನು ಪ್ರದರ್ಶಿಸುತ್ತಿರುವುದು ಸಂತೋಷದ ಸಂಗತಿಯಾಗಿದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನಿರ್ಮಲಾ ಸೂಗೂರೇಶ ವಾರದ ಮಾತನಾಡಿ, ಕನ್ನಡ ಸಾಹಿತ್ಯ ಸಂಘವು ಕೇವಲ ಸಾಹಿತ್ಯಕ್ಕೆ ಸೀಮಿತವಾಗದೆ, ಕಲೆ, ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸಿ ಬೆಳೆಸುವ ಕಾರ್ಯ ಮಾಡುತ್ತಿರುವುದು ಅಭಿಮಾನದ ಸಂಗತಿಯಾಗಿದೆ ಎಂದರು.

ಮುಖ್ಯ ಅತಿಥಿ ನಂದಿನಿ ಪ್ರಕಾಶ ಅಂಗಡಿ ಮಾತನಾಡಿ, ನವದುರ್ಗೆಯರ ಪೂಜೆಯನ್ನು ಮಾತ್ರ ನೋಡಿದ್ದೇವೆ. ಆದರೆ, ನಾಡಹಬ್ಬದ ಆಚರಣೆಯ ಮೂಲಕ ಎಲ್ಲರಿಗೂ ನಾಡು-ನುಡಿಯ ಸೇವೆ ಮಾಡಲು ಅವಕಾಶ ಕಲ್ಪಿಸಲಾಗಿದೆ. ಇದಕ್ಕಾಗಿ ಸಂಘಕ್ಕೆ ಎಲ್ಲರೂ ಧನ್ಯವಾದ ಸಲ್ಲಿಸಬೇಕು ಎಂದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಗೌರವಾಧ್ಯಕ್ಷೆ ಶಿವಲೀಲಾ ಸುರೇಶ್ ಸಜ್ಜನ್ ಮಾತನಾಡಿದರು. ಬಳಿಕ ಸಾಧಕ ಮಹಿಳೆಯರಾದ ಲಕ್ಷ್ಮೀ ಸಿದ್ದಯ್ಯ ಮಠ, ಶಿಲ್ಪಾ ಆವಂಟಿ, ರಾಜೇಶ್ವರಿ ಶೆಟ್ಟಿ ಹಾಗೂ ಅಂಬಿಕಾ ಯನಗುಂಟಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ವೇದಿಕೆಯಲ್ಲಿ ರಾಜೇಶ್ವರಿ ಗೋಲಗೇರಿ ಹಾಗೂ ಸಂಘದ ಮಹಿಳಾ ಘಟಕದ ಅಧ್ಯಕ್ಷೆ ಮಾಧುರಿ ಕಲಕುಂಡಿ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಸಂಘದ ಮಹಿಳಾ ಘಟಕದ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಸ್ನೇಹಾ ಶಹಾಬಾದಿ ಸನ್ಮಾನಿತರನ್ನು ಪರಿಚಯಿಸಿದರು. ಸುನಂದಾ ನಾಲವಾರ ಸ್ವಾಗತಿಸಿದರು. ಉಮಾಶ್ರೀ ಮೇಟಿ ನಿರೂಪಿಸಿದರು.

Tags

womenSurapura
share
ವಾರ್ತಾಭಾರತಿ
ವಾರ್ತಾಭಾರತಿ
Next Story
X