Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಸುರಪುರ | ಸಂಗೀತ ಮನುಷ್ಯನಿಗೆ ದೇವರು...

ಸುರಪುರ | ಸಂಗೀತ ಮನುಷ್ಯನಿಗೆ ದೇವರು ನೀಡಿದ ವರ: ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ

ಜ್ಞಾನ ಸಿಂಚನ ಪ್ರಶಸ್ತಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ27 Aug 2026 5:11 PM IST
share
ಸುರಪುರ | ಸಂಗೀತ ಮನುಷ್ಯನಿಗೆ ದೇವರು ನೀಡಿದ ವರ: ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ

ಸುರಪುರ: ಸಂಗೀತ ಎನ್ನುವುದು ಮನುಷ್ಯನಿಗೆ ದೇವರು ನೀಡಿದ ವರ. ಸಂಗೀತ ಆಲಿಸುವುದರಿಂದ ಮನಸ್ಸಿಗೆ ಸಂತೋಷ ಹಾಗೂ ನೆಮ್ಮದಿ ದೊರೆಯುತ್ತದೆ ಎಂದು ದೇವಾಪುರ ಜಡಿಶಾಂತಲಿಂಗೇಶ್ವರ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಪಟ್ಟಣದ ಮಾತಾಶ್ರಮದಲ್ಲಿ ಶ್ರೀ ರೇಣುಕಾ ಮಾತಾಶ್ರಮ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಶ್ರೀ ರೇಣುಕಾ ಮಾತಾ 10ನೇ ವರ್ಷದ ಆರಾಧನಾಮಹೋತ್ಸವ ಹಾಗೂ ಶ್ರೀ ರೇಣುಕಾ ಮಾತಾ ಜ್ಞಾನ ಸಿಂಚನ ಪ್ರಶಸ್ತಿ ಪ್ರದಾನ ಸಮಾರಂಭದ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಾನಿಧ್ಯ ವಹಿಸಿ ಅವರು ಮಾತನಾಡಿದರು.

ಶ್ರೀ ರೇಣುಕಾ ಮಾತಾ ಟ್ರಸ್ಟ್ ವತಿಯಿಂದ ಪ್ರತಿವರ್ಷ ಸಂಗೀತ ಕಾರ್ಯಕ್ರಮ ಹಾಗೂ ಪ್ರಶಸ್ತಿ ಪ್ರದಾನ ಮಾಡುತ್ತಿರುವುದು ಹೊಸ ಕಲಾವಿದರಿಗೆ ಪ್ರೋತ್ಸಾಹ ನೀಡುತ್ತಿದೆ. ಬದುಕು ನೋಟ್ ಪುಸ್ತಕದಂತೆ. ಅದರ ಮೊದಲ ಹಾಗೂ ಕೊನೆಯ ಪುಟಗಳು ಮುದ್ರಣವಾಗಿರುತ್ತವೆ. ಆದರೆ ಮಧ್ಯದಲ್ಲಿರುವ ಖಾಲಿ ಪುಟಗಳಲ್ಲಿ ಸುಂದರವಾದ ಅಕ್ಷರಗಳನ್ನು ಬರೆದಂತೆ ಮನುಷ್ಯನ ಜೀವನವೂ ಅರ್ಥಪೂರ್ಣವಾಗಿರಬೇಕು ಎಂದು ಹೇಳಿದರು.

ಶ್ರೀ ರೇಣುಕಾ ಮಾತಾ ಜ್ಞಾನ ಸಿಂಚನ ಪ್ರಶಸ್ತಿ ಪುರಸ್ಕೃತ ಗಾಯಕ ಬಸವರಾಜ ಬಂಟನೂರ ಮಾತನಾಡಿ, ಸಂಗೀತ ವೇದಿಕೆಯ ಭೂಷಣವಾಗಿದ್ದು, ಭಗವಂತನನ್ನು ಕಾಣಲು ಹತ್ತಿರದ ಮಾರ್ಗವಾಗಿದೆ. ಸ್ವರಸಿದ್ಧಿಗಾಗಿ ಒಂದು ಸ್ವರವನ್ನು 40 ದಿನಗಳ ಕಾಲ ಅಭ್ಯಾಸ ಮಾಡಬೇಕು. ಇದರಿಂದ ಜನ್ಮದುದ್ದಕ್ಕೂ ಸ್ವರಸಿದ್ಧಿ ದೊರೆಯಲಿದೆ ಎಂದು ಪಂಡಿತ ಪುಟ್ಟರಾಜರು ಹೇಳುತ್ತಿದ್ದರು ಎಂದು ಸ್ಮರಿಸಿದರು.

ಕಲೆ, ಸಂಗೀತ, ಸಾಹಿತ್ಯ ಹಾಗೂ ಸಂಸ್ಕೃತಿಯ ಪೋಷಣೆಯನ್ನು ದೇವಾಪುರ ಮಠದಲ್ಲಿ ಶ್ರೀಗಳು ಮಾಡುತ್ತಿದ್ದಾರೆ. ಸಂಗೀತ ಸಾಹಿತಿಗಳನ್ನು ಪೋಷಿಸಿದ ನಾಡು ಸುರಪುರ. ಸಂಗೀತ ಸಾಧನೆಯೊಂದಿಗೆ ಆರಾಧನೆಯನ್ನೂ ಮಾಡಬೇಕು ಎಂದು ಹೇಳಿದರು.

ಮುಖ್ಯ ಅತಿಥಿಯಾಗಿದ್ದ ಪಿಎಸ್‌ಐ ಕೃಷ್ಣಾ ಸುಬೇದಾರ ಮಾತನಾಡಿ, ಒತ್ತಡದ ಬದುಕಿನಲ್ಲಿ ಸಂಗೀತ ಅತ್ಯಂತ ಅಗತ್ಯವಾಗಿದೆ. ಇಂತಹ ಕಾರ್ಯಕ್ರಮಗಳು ಎಲ್ಲೆಡೆ ನಡೆಯುವುದರಿಂದ ಸಮಾಜದಲ್ಲಿ ಶಾಂತಿ ನೆಲೆಸಲು ಸಹಕಾರಿಯಾಗುತ್ತದೆ. ಕಲೆ, ಸಾಹಿತ್ಯ ಹಾಗೂ ಸಂಗೀತಕ್ಕೆ ಹೆಚ್ಚಿನ ಮಹತ್ವ ನೀಡಿದ ಭೂಮಿ ಸುರಪುರವಾಗಿದೆ ಎಂದರು.

ನೀಟ್ ಸಾಧಕಿ ಸೌಮ್ಯಗೆ ಸನ್ಮಾನ :

ನೀಟ್ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು ಎಂ.ಬಿ.ಬಿ.ಎಸ್. ಪದವಿಗೆ ಆಯ್ಕೆಯಾದ ವಿದ್ಯಾರ್ಥಿನಿ ಸೌಮ್ಯ ಗೋಪಾಲ ಚಿನ್ನಾಕಾರ ಅವರನ್ನು ಶ್ರೀ ರೇಣುಕಾ ಮಾತಾ ಟ್ರಸ್ಟ್ ವತಿಯಿಂದ ವಿಶೇಷವಾಗಿ ಸನ್ಮಾನಿಸಿ ಗೌರವಿಸಲಾಯಿತು.

ಇದೇ ಸಂದರ್ಭದಲ್ಲಿ ಸಂಗೀತ ಕಲಾವಿದರಾದ ಬಸವರಾಜ ಬಂಟನೂರ, ಭೀಮಾಶಂಕರ ಬಿದನೂರ, ರವಿಕುಮಾರ ಆಳಂದ, ಮಲ್ಲಯ್ಯ ಹಿರೇಮಠ, ನೇಹಾ ಸುರಪುರ, ಮೇಘ, ಸಾವಿತ್ರಿ ಗಾಳಿ, ರವಿ ರಾಜನಕೊಳೂರ ಸೇರಿದಂತೆ ಮಾತಾಶ್ರಮದ ಮಕ್ಕಳಿಂದ ಸಂಗೀತ ಕಾರ್ಯಕ್ರಮ ನೆರವೇರಿತು.

ವೇದಿಕೆಯಲ್ಲಿ ನಿವೃತ್ತ ಕೃಷಿ ಅಧಿಕಾರಿ ವೆಂಕಟೇಶ ದೇಸಾಯಿ, ಪತ್ರಕರ್ತ ಗಿರೀಶ್ ಶಾಬಾದಿ, ಸಾಹಿತಿ ಜಾವೇದ್ ಹುಸೇನ ಹವಾಲ್ದಾರ್ ಉಪಸ್ಥಿತರಿದ್ದರು. ಟ್ರಸ್ಟ್ ಕಾರ್ಯದರ್ಶಿ ಜಯರಾಮ್ ಎಸ್.ಕಟ್ಟಿಮನಿ ಅಧ್ಯಕ್ಷತೆ ವಹಿಸಿದ್ದರು. ವಂದೀತಾ ಪಿ.ಕಟ್ಟಿಮನಿ ಪ್ರಾರ್ಥಿಸಿದರು, ಯುವ ಸಾಹಿತಿ ಸಿದ್ದಣ್ಣ ಪೂಜಾರಿ, ಮಾಧವ ಸಿದ್ದಾಪೂರ ನಿರೂಪಿಸಿದರು, ಪ್ರಹ್ಲಾದ್ ಕಟ್ಟಿಮನಿ ವಂದಿಸಿದರು. ನೂರಾರು ಜನ ಸಂಗೀತ ಅಭಿಮಾನಿಗಳು ಭಾಗವಹಿಸಿದ್ದರು.

Tags

musicSurapura
share
ವಾರ್ತಾಭಾರತಿ
ವಾರ್ತಾಭಾರತಿ
Next Story
X