Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಸುರಪುರ | ಸಾರ್ವಜನಿಕ ರಸ್ತೆ ಒತ್ತುವರಿ...

ಸುರಪುರ | ಸಾರ್ವಜನಿಕ ರಸ್ತೆ ಒತ್ತುವರಿ ತೆರವಿಗೆ ಆಗ್ರಹಿಸಿ ನಗರಸಭೆ ಎದುರು ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ6 July 2026 6:01 PM IST
share
ಸುರಪುರ | ಸಾರ್ವಜನಿಕ ರಸ್ತೆ ಒತ್ತುವರಿ ತೆರವಿಗೆ ಆಗ್ರಹಿಸಿ ನಗರಸಭೆ ಎದುರು ಪ್ರತಿಭಟನೆ

ಸುರಪುರ : ಪಟ್ಟಣದ ದಿವಳಗುಡ್ಡದ ವಾರ್ಡ್ ಸಂಖ್ಯೆ 29ರಲ್ಲಿ ಖಾಸಗಿ ವ್ಯಕ್ತಿಯೊಬ್ಬ ಸಾರ್ವಜನಿಕ ರಸ್ತೆಯನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಜಯ ಕರ್ನಾಟಕ ರಕ್ಷಣಾ ಸೇನೆ ತಾಲೂಕು ಹಾಗೂ ನಗರ ಘಟಕದ ಪದಾಧಿಕಾರಿಗಳು ನಗರಸಭೆ ಕಚೇರಿ ಎದುರು ಪ್ರತಿಭಟನೆ ನಡೆಸಿ, ಒತ್ತುವರಿ ತೆರವುಗೊಳಿಸುವಂತೆ ಆಗ್ರಹಿಸಿದರು.

ಈ ವೇಳೆ ಮಾತನಾಡಿದ ಮುಖಂಡರು, ವಾರ್ಡ್ ಸಂಖ್ಯೆ 29ರಲ್ಲಿ ಸಾರ್ವಜನಿಕ ರಸ್ತೆಯ ಜಾಗವನ್ನು ಕಬಳಿಸಿ ಮನೆಯ ಮುಂದೆ ಕಟ್ಟೆ ನಿರ್ಮಿಸಿರುವುದರಿಂದ ಸಾರ್ವಜನಿಕರು ಹಾಗೂ ವಾಹನಗಳ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದೆ ಎಂದು ಆರೋಪಿಸಿದರು.

ತುರ್ತು ಸೇವೆಗಳಾದ ಅಂಬುಲೆನ್ಸ್ ಮತ್ತು ಅಗ್ನಿಶಾಮಕ ವಾಹನಗಳ ಸಂಚಾರಕ್ಕೂ ಅಡಚಣೆ ಉಂಟಾಗಿದ್ದು, ಶಾಲಾ ವಾಹನಗಳು ಒಳಪ್ರದೇಶಕ್ಕೆ ಪ್ರವೇಶಿಸಲು ಸಾಧ್ಯವಾಗುತ್ತಿಲ್ಲ. ರೈತರು ತಮ್ಮ ಟ್ರ್ಯಾಕ್ಟರ್ ಸೇರಿದಂತೆ ಕೃಷಿ ವಾಹನಗಳನ್ನು ಮನೆಗಳವರೆಗೆ ಕೊಂಡೊಯ್ಯಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ದೂರಿದರು.

ಈ ಬಗ್ಗೆ ಪ್ರಶ್ನಿಸಿದ ಸಾರ್ವಜನಿಕರಿಗೆ ಸಂಬಂಧಪಟ್ಟ ವ್ಯಕ್ತಿ ಬೆದರಿಕೆ ಹಾಕಿ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದಾನೆ ಎಂದು ಆರೋಪಿಸಿದ ಅವರು, ಅಧಿಕಾರಿಗಳು ಕೂಡಲೇ ಸ್ಥಳ ಪರಿಶೀಲನೆ ನಡೆಸಿ ಸಾರ್ವಜನಿಕ ರಸ್ತೆಯ ಮೇಲಿನ ಒತ್ತುವರಿಯನ್ನು ತೆರವುಗೊಳಿಸಬೇಕು ಎಂದು ಒತ್ತಾಯಿಸಿದರು.

ಸಾರ್ವಜನಿಕರಿಗೆ ತೊಂದರೆ ಉಂಟುಮಾಡುತ್ತಿರುವ ಸಂಬಂಧಪಟ್ಟ ವ್ಯಕ್ತಿಯ ವಿರುದ್ಧ ಕಾನೂನುಬದ್ಧ ಕ್ರಮ ಕೈಗೊಂಡು, ಇಂತಹ ಘಟನೆಗಳು ಮರುಕಳಿಸದಂತೆ ಅಗತ್ಯ ಕ್ರಮ ಜರುಗಿಸಬೇಕು ಎಂದು ಜಯ ಕರ್ನಾಟಕ ರಕ್ಷಣಾ ಸೇನೆ ಆಗ್ರಹಿಸಿದೆ.

ನಂತರ ನಗರಸಭೆ ಪೌರಾಯುಕ್ತರಿಗೆ ಬರೆದ ಮನವಿ ವ್ಯವಸ್ಥಾಪಕ ಯಲ್ಲಪ್ಪ ನಾಯಕ ಅವರ ಮೂಲಕ ಸಲ್ಲಿಸಿದರು.

ಸಂಘಟನೆಯ ತಾ.ಅಧ್ಯಕ್ಷ ಮಲ್ಲಪ್ಪ ನಾಯಕ್ ಕಬಾಡಗೇರಾ, ಕಾರ್ಯಾಧ್ಯಕ್ಷ ಶಿವರಾಜ ವಗ್ಗಾರ್, ಕೃಷ್ಣ ಹಾವಿನ್, ಶಿವಕುಮಾರ್, ನಿಂಗಪ್ಪ ವಗ್ಗಾರ್, ಹಣಮಂತ ಶುಕ್ಲ,ವೀರೇಶ್ ರತ್ತಾಳ, ಗೋಣೆಪ್ಪ ಗೌಡ, ನಾಗರಾಜ್ ನಂಬಾ, ನಾಗಲಿಂಗ ಕರೆಗಾರ, ಹಣಮಂತ ಭಂಡಾರಿ, ನಿಂಗಪ್ಪ ಕರೆಗಾರ, ಮಾಳಪ್ಪ ವಗ್ಗಾರ್, ಮೆಹಬೂಬ್ ಖಾನಾಪುರ,ಮಹಮ್ಮದ್ ಖಾನಾಪುರ, ಮರೆಪ್ಪ ಕರೆಗಾರ,ಬಸ್ಸು, ರಂಗಪ್ಪ, ಚನ್ನಬಸವ ಸೇರಿದಂತೆ ಅನೇಕರು ಭಾಗವಹಿಸಿದ್ದರು.

Tags

protestSurapura
share
ವಾರ್ತಾಭಾರತಿ
ವಾರ್ತಾಭಾರತಿ
Next Story
X