Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಸುರಪುರ | ನ.30ರವರೆಗೆ ನೀರು...

ಸುರಪುರ | ನ.30ರವರೆಗೆ ನೀರು ಹರಿಸದಿದ್ದರೆ ಬಸವಸಾಗರ ಜಲಾಶಯಕ್ಕೆ ಮುತ್ತಿಗೆ : ರಾಜುಗೌಡ ಎಚ್ಚರಿಕೆ

ರಾಜ್ಯ ಹೆದ್ದಾರಿ ಬಂದ್ ಮಾಡಿ ಬೃಹತ್ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ24 Oct 2026 6:47 PM IST
share
ಸುರಪುರ | ನ.30ರವರೆಗೆ ನೀರು ಹರಿಸದಿದ್ದರೆ ಬಸವಸಾಗರ ಜಲಾಶಯಕ್ಕೆ ಮುತ್ತಿಗೆ : ರಾಜುಗೌಡ ಎಚ್ಚರಿಕೆ

ಸುರಪುರ: ಎಕರೆಗೆ ಸಾವಿರಾರು ರೂಪಾಯಿ ಖರ್ಚು ಮಾಡಿ ಭತ್ತ, ಹತ್ತಿ ಹಾಗೂ ಮೆಣಸಿನಕಾಯಿ ಬೆಳೆದಿರುವ ರೈತರಿಗೆ ಬೆಳೆ ಕಟಾವಿನ ಹಂತದಲ್ಲಿ ನೀರು ಹರಿಸದೆ ಇರುವುದರಿಂದ ಭಾರಿ ನಷ್ಟ ಉಂಟಾಗುತ್ತಿದೆ. ನ.30ರವರೆಗೆ ನೀರು ಹರಿಸುವುದಾಗಿ ಎರಡು ದಿನಗಳೊಳಗೆ ಸರ್ಕಾರ ಘೋಷಿಸದಿದ್ದರೆ ನಾರಾಯಣಪುರದ ಬಸವಸಾಗರ ಜಲಾಶಯಕ್ಕೆ ರೈತರೊಂದಿಗೆ ಮುತ್ತಿಗೆ ಹಾಕಲಾಗುವುದು ಎಂದು ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ನರಸಿಂಹ ನಾಯಕ (ರಾಜುಗೌಡ) ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಸಾಮೂಹಿಕ ಸಂಘಟನೆಗಳ ಸಹಭಾಗಿತ್ವದಲ್ಲಿ ತಾಲೂಕಿನ ದೇವಪುರ ಕ್ರಾಸ್‌ನಲ್ಲಿ ರೈತರೊಂದಿಗೆ ರಾಜ್ಯ ಹೆದ್ದಾರಿ ಬಂದ್ ಮಾಡಿ ಬೃಹತ್ ಪ್ರತಿಭಟನೆ ನಡೆಸಿ ಅವರು ಮಾತನಾಡಿದರು.

ಈ ಭಾಗದ ಸಚಿವರು ಮತ್ತು ಶಾಸಕರು ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ರೈತರ ಪರವಾಗಿ ಮಾತನಾಡದೆ ಮೌನವಾಗಿ ಕುಳಿತಿದ್ದರಿಂದ ಇಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು. ಮುಂಗಾರು ಹಂಗಾಮಿನಲ್ಲಿ ಈ ಹಿಂದೆ ವಾರಬಂಧಿ ಜಾರಿಗೊಳಿಸಿರಲಿಲ್ಲ. ಆದರೆ, ಈ ಬಾರಿ ಜಲಾಶಯಗಳಲ್ಲಿ ನೀರು ಲಭ್ಯವಿದ್ದರೂ ವಾರಬಂಧಿ ಜಾರಿಗೊಳಿಸುವ ಮೂಲಕ ರೈತರು ಬೆಳೆದ ಬೆಳೆ ಕೈಗೆ ಬಾರದಂತೆ ಮಾಡಲು ಸರ್ಕಾರ ಮುಂದಾಗಿದೆ ಎಂದು ದೂರಿದರು.

ಆರಂಭದಲ್ಲಿಯೇ ಈ ಬಾರಿ ನೀರು ನೀಡುವುದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದ್ದರೆ ರೈತರು ಕೃಷಿ ಚಟುವಟಿಕೆಗಳಿಗೆ ಹಣ ಹೂಡುತ್ತಿರಲಿಲ್ಲ. ಆದರೆ, ನೀರು ನೀಡುವುದಾಗಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ರೈತರು ಭತ್ತದ ಬೆಳೆಗೆ ಎಕರೆಗೆ ಸಾವಿರಾರು ರೂಪಾಯಿ ಹಾಗೂ ಮೆಣಸಿನಕಾಯಿ ಬೆಳೆಗೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿದ್ದಾರೆ. ಈಗ ಬೆಳೆ ಕಟಾವಿಗೆ ಬರುವ ಹಂತದಲ್ಲಿ ವಾರಬಂಧಿ ಹೆಸರಿನಲ್ಲಿ ನೀರು ಸ್ಥಗಿತಗೊಳಿಸುವುದು ರೈತರಿಗೆ ದ್ರೋಹ ಬಗೆದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾಲುವೆಗಳ ಕೊನೆಯ ಭಾಗದ ರೈತರಿಗೆ ನೀರು ತಲುಪುವುದೇ ಕಷ್ಟವಾಗಿದೆ. ಆದ್ದರಿಂದ ಸರ್ಕಾರ ಈಗ ಘೋಷಿಸಿರುವ ವಾರಬಂಧಿ ನಿಯಮವನ್ನು ರದ್ದುಗೊಳಿಸಿ, ನವೆಂಬರ್ 30ರವರೆಗೆ ಯಾವುದೇ ವಾರಬಂಧಿ ಇಲ್ಲದೆ ಎಡದಂಡೆ ಮತ್ತು ಬಲದಂಡೆ ಕಾಲುವೆಗಳಿಗೆ ನೀರು ಹರಿಸಬೇಕು ಎಂದು ಆಗ್ರಹಿಸಿದರು. ಅಕ್ಟೋಬರ್ 26ರಿಂದ ನೀರು ಹರಿಸುವುದನ್ನು ಸ್ಥಗಿತಗೊಳಿಸಿದರೆ ರೈತರೊಂದಿಗೆ ಜಲಾಶಯಕ್ಕೆ ಮುತ್ತಿಗೆ ಹಾಕಲಾಗುವುದು. ಅಗತ್ಯಬಿದ್ದರೆ ಗೇಟ್‌ಗಳನ್ನು ಮುರಿದಾದರೂ ನೀರು ಹರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಬಹುದು. ಈ ಬಗ್ಗೆ ಸರ್ಕಾರ ಎಚ್ಚರ ವಹಿಸಬೇಕು ಎಂದು ರಾಜುಗೌಡ ಎಚ್ಚರಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ರೈತ ಹಾಗೂ ಕನ್ನಡಪರ ಸಂಘಟನೆಗಳ ಮುಖಂಡರು, ಜಲಾಶಯಗಳಲ್ಲಿ ನೀರು ಲಭ್ಯವಿದ್ದರೂ ರೈತರ ಬೆಳೆಗಳಿಗೆ ನೀರು ಹರಿಸದೆ, ರಾತ್ರೋರಾತ್ರಿ ನದಿಯ ಮೂಲಕ ತೆಲಂಗಾಣಕ್ಕೆ ನೀರು ಬಿಡಲಾಗುತ್ತಿದೆ ಎಂದು ಆರೋಪಿಸಿದರು. ಇದು ರೈತರಿಗೆ ಸರ್ಕಾರ ಮಾಡುತ್ತಿರುವ ಮೋಸವಾಗಿದೆ ಎಂದು ದೂರಿದರು.

ನೀರಾವರಿ ಸಲಹಾ ಸಮಿತಿ ಸಭೆಗೆ ತೆರಳುವ ಶಾಸಕರು ರೈತರ ಸಮಸ್ಯೆಗಳ ಬಗ್ಗೆ ಚರ್ಚಿಸದೆ ಕೇವಲ ಚಹಾ, ಬಿಸ್ಕತ್ ಸೇವಿಸಿ ಹಿಂದಿರುಗಿದಂತಿದೆ ಎಂದು ಟೀಕಿಸಿದರು. ವಿಜಯಪುರ ಜಿಲ್ಲೆಯ ಸಚಿವರು ಮತ್ತು ಶಾಸಕರು ತಮ್ಮ ಜಿಲ್ಲೆಗಳಿಗೆ 30 ಟಿಎಂಸಿ ನೀರು ಬೇಕೆಂದು ಪಡೆದುಕೊಳ್ಳುತ್ತಾರೆ. ಆದರೆ, ನಾರಾಯಣಪುರ ಜಲಾಶಯದ ಕೆಳಭಾಗದ ರೈತರಿಗೆ ಅಗತ್ಯ ಪ್ರಮಾಣದ ನೀರು ಹರಿಸಲಾಗುತ್ತಿಲ್ಲ. ಇದಕ್ಕೆ ಸ್ಥಳೀಯ ಸಚಿವರು ಮತ್ತು ಶಾಸಕರ ಮೌನವೇ ಕಾರಣ ಎಂದು ಆರೋಪಿಸಿದರು.

ವಾರಬಂಧಿ ಜಾರಿಗೊಳಿಸಿದರೆ ಸಚಿವರು ಮತ್ತು ಶಾಸಕರನ್ನು ಪ್ರತಿಭಟನಾ ಸ್ಥಳಕ್ಕೆ ಕರೆತಂದು ಪ್ರಶ್ನಿಸಲಾಗುವುದು ಎಂದು ಎಚ್ಚರಿಸಿದ ಮುಖಂಡರು, ರಾಜುಗೌಡ ನಿಜವಾದ ರೈತ ನಾಯಕರಾಗಿದ್ದು, ಅವರ ನೇತೃತ್ವದಲ್ಲಿ ರೈತರು ತೀವ್ರ ಹೋರಾಟ ನಡೆಸಬೇಕು ಎಂದು ಕರೆ ನೀಡಿದರು. ಮುಖ್ಯಮಂತ್ರಿ ಹಾಗೂ ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ವಾರಬಂಧಿ ಕೈಬಿಟ್ಟು ನಿರಂತರವಾಗಿ ನೀರು ಹರಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ರೈತ ಸಂಘಟನೆಯ ಮುಖಂಡರಾದ ಅಯ್ಯಣ್ಣ ಹಾಲಭಾವಿ, ಮಸ್ತಾನ ನಾಯಕ, ಕರವೇ ಜಿಲ್ಲಾಧ್ಯಕ್ಷ ಟಿ.ಎನ್. ಭೀಮು ನಾಯಕ, ಎಚ್.ಸಿ. ಪಾಟೀಲ, ಯಲ್ಲಪ್ಪ ಕುರಕುಂದಿ, ಶ್ರವಣಕುಮಾರ ನಾಯಕ, ಗುರುನಾಥ ರೆಡ್ಡಿ, ಸಿದ್ದನಗೌಡ ಕರಿಭಾವಿ ಸೇರಿದಂತೆ ಹಲವರು ಮಾತನಾಡಿದರು.

ಮುಖ್ಯಮಂತ್ರಿಗಳಿಗೆ ಬರೆದ ಮನವಿಯನ್ನು ಜಿಲ್ಲಾಧಿಕಾರಿ ರಾಹುಲ್ ತುಕಾರಾಂ ಪಾಂಡ್ವೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್, ತಹಶೀಲ್ದಾರ್ ಹುಸೇನ ಸಾಬ್ ಹಾಗೂ ಕೆಬಿಜೆಎನ್‌ಎಲ್ ಅಧಿಕಾರಿಗಳ ಮೂಲಕ ಸಲ್ಲಿಸಲಾಯಿತು.

ಪ್ರತಿಭಟನಾ ವೇದಿಕೆಯಲ್ಲಿ ಡಾ. ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ, ಬಿಜೆಪಿ ಮಂಡಲ ಅಧ್ಯಕ್ಷ ವೇಣು ಮಾಧವ ನಾಯಕ, ಸಂಗಣ್ಣ ವೈಲಿ, ಬಲಭೀಮ ನಾಯಕ ಬೈರಿಮಡ್ಡಿ, ಡಾ. ಸುರೇಶ್ ಸಜ್ಜನ್, ಶರಣು ನಾಯಕ ಬೇರಿಮಡ್ಡಿ, ಲಕ್ಷ್ಮೀಕಾಂತ ದೇವರಗೋನಾಲ, ವೇಣುಗೋಪಾಲ ನಾಯಕ ಜೇವರ್ಗಿ, ಕರವೇ ಅಧ್ಯಕ್ಷ ವೆಂಕಟೇಶ ನಾಯಕ ಬೈರಿಮಡ್ಡಿ, ರಮೇಶ, ನಿಂಗಪ್ಪ ನಾಯಕ ಬಿಜಾಸಪುರ, ಶಂಕರ ನಾಯಕ, ಶ್ರೀನಿವಾಸ ನಾಯಕ, ಚೆನ್ನಬಸವ ವಾಲಿ, ರಂಗನಾಥ ನಾಯಕ, ಜಕರಸೇನೆ ಅಧ್ಯಕ್ಷ ಮಲ್ಲಪ್ಪ ನಾಯಕ, ಮಲ್ಲು ವಿಷ್ಣುಸೇನಾ, ಶರಣು ನಾಯಕ ಹಾಗೂ ಮಲ್ಲು ದಂಡಿನ್ ಸೇರಿದಂತೆ ಮೂರು ಸಾವಿರಕ್ಕೂ ಹೆಚ್ಚು ರೈತರು ಭಾಗವಹಿಸಿದ್ದರು.

ಪ್ರತಿಭಟನೆಯ ವೇಳೆ ಸುರಪುರ ಶಾಸಕ ರಾಜಾ ವೇಣುಗೋಪಾಲ ನಾಯಕ ವಿರುದ್ಧ ವಾಗ್ದಾಳಿ ನಡೆಸಿದ ನರಸಿಂಹ ನಾಯಕ (ರಾಜುಗೌಡ), ರೈತರಿಗೆ ಮೊದಲು ನೀರು ಹರಿಸುವ ಕೆಲಸ ಮಾಡಿ. ಬರೀ ಮರಳು ಸರಬರಾಜು ಮಾಡಲು ಶಾಸಕರಾಗಿದ್ದೀರಾ ಎಂದು ಪ್ರಶ್ನಿಸಿದರು.

“ನಾನು ಬೆಂಗಳೂರಿನಲ್ಲಿ ಬಿಸಿನೆಸ್ ಮಾಡಲು ಇದ್ದೇನೆ ಎಂದು ಮಾತನಾಡುತ್ತೀರಿ. ಆದರೆ, ನಿಮ್ಮಂತೆ ಅಕ್ರಮವಾಗಿ ಮರಳು ಸರಬರಾಜು ಮಾಡುತ್ತಿಲ್ಲ. ನಿಮ್ಮ ಹೆಸರು ವೇಣುಗೋಪಾಲ ಎಂದಿದೆ. ನೀವು ಮರಳು ಸರಬರಾಜು ಮಾಡುತ್ತಿಲ್ಲ ಎಂದು ವೇಣುಗೋಪಾಲ ಸ್ವಾಮಿ ದೇವಸ್ಥಾನದಲ್ಲಿ ಪ್ರಮಾಣ ಮಾಡಲು ಬನ್ನಿ; ನಾನು ಬರಲು ಸಿದ್ಧನಿದ್ದೇನೆ. ರೈತರು ಕರೆ ಮಾಡಿದರೆ ನಾನೇ ಬಂದು ಗೇಟ್ ತೆರೆಯಬೇಕಾ ಎಂದು ಕೇಳುತ್ತೀರಿ. ಶಾಸಕರಾಗಿ ರೈತರಿಗೆ ನೀರು ಕೊಡದಿದ್ದರೆ ಅವರ ಆಕ್ರೋಶಕ್ಕೆ ಗುರಿಯಾಗಬೇಕಾಗುತ್ತದೆ. ಜನರು ಇನ್ನು ಮುಂದೆ ಎಲ್ಲಿಯಾದರೂ ನಂಬರ್ ಪ್ಲೇಟ್ ಇಲ್ಲದ ಮರಳಿನ ಟಿಪ್ಪರ್‌ಗಳನ್ನು ಕಂಡರೆ ಮುಲಾಜಿಲ್ಲದೆ ತಡೆಯಬೇಕು” ಎಂದು ರಾಜುಗೌಡ ಹೇಳಿದರು.

ಶನಿವಾರ ಬೆಳಗ್ಗೆ 10 ಗಂಟೆಯಿಂದ ರಾಜ್ಯ ಹೆದ್ದಾರಿಯನ್ನು ಸಂಪೂರ್ಣ ಬಂದ್ ಮಾಡಿದ್ದರಿಂದ ವಾಹನ ಸವಾರರು ಪರದಾಡಿದರು. ಪಿಐ ಉಮೇಶ ಎಂ.ನಾಯಕ ನೇತೃತ್ವದಲ್ಲಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.

Tags

Surapura
share
ವಾರ್ತಾಭಾರತಿ
ವಾರ್ತಾಭಾರತಿ
Next Story
X