Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಸುರಪುರ | ಡಿಸೆಂಬರ್ ಅಂತ್ಯದವರೆಗೆ...

ಸುರಪುರ | ಡಿಸೆಂಬರ್ ಅಂತ್ಯದವರೆಗೆ ಕೃಷ್ಣಾ ಕಾಲುವೆಗಳಿಗೆ ನೀರು ಹರಿಸಿ: ಶ್ರೀನಿವಾಸ ಜಾಲವಾದಿ

ಶರಬು ಬಿ.ನಾಟೇಕಾರ್ ಯಾದಗಿರಿ/ವಾರ್ತಾಭಾರತಿಶರಬು ಬಿ.ನಾಟೇಕಾರ್ ಯಾದಗಿರಿ/ವಾರ್ತಾಭಾರತಿ15 Nov 2026 5:49 PM IST
share
ಸುರಪುರ | ಡಿಸೆಂಬರ್ ಅಂತ್ಯದವರೆಗೆ ಕೃಷ್ಣಾ ಕಾಲುವೆಗಳಿಗೆ ನೀರು ಹರಿಸಿ: ಶ್ರೀನಿವಾಸ ಜಾಲವಾದಿ

ಸುರಪುರ: ಮಳೆ ಕೊರತೆಯಿಂದ ಈಗಾಗಲೇ ಸಂಕಷ್ಟದಲ್ಲಿರುವ ರೈತರ ಬೆಳೆಗಳು ಕಟಾವಿನ ಹಂತದಲ್ಲಿ ಒಣಗುವ ಭೀತಿ ಎದುರಿಸುತ್ತಿವೆ. ಈ ಹಿನ್ನೆಲೆಯಲ್ಲಿ ಸರ್ಕಾರ ಡಿಸೆಂಬರ್ ಅಂತ್ಯದವರೆಗೆ ಕೃಷ್ಣಾ ಎಡ ಮತ್ತು ಬಲದಂಡೆ ಕಾಲುವೆಗಳಿಗೆ ನೀರು ಹರಿಸುವ ವ್ಯವಸ್ಥೆ ಮಾಡಬೇಕು. ಇಲ್ಲವಾದಲ್ಲಿ ರೈತರ ಪರವಾಗಿ ಸಾಹಿತಿಗಳು, ಕವಿಗಳು, ಲೇಖಕರು ಹಾಗೂ ಕಲಾವಿದರು ಬೀದಿಗಿಳಿದು ಹೋರಾಟ ಆರಂಭಿಸಬೇಕಾಗುತ್ತದೆ ಎಂದು ಗಮಕ ಕಲಾ ಪರಿಷತ್ ಜಿಲ್ಲಾಧ್ಯಕ್ಷ ಶ್ರೀನಿವಾಸ ಜಾಲವಾದಿ ಎಚ್ಚರಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೃಷ್ಣಾ ಎಡ ಮತ್ತು ಬಲದಂಡೆ ಕಾಲುವೆಗಳಿಗೆ ನೀರು ಹರಿಸುವುದರ ಜೊತೆಗೆ ಮಧ್ಯದಲ್ಲಿ ಹತ್ತು ದಿನಗಳ ವಿರಾಮ ನೀಡಿ, ಆರು ದಿನಗಳ ವಾರಾಬಂದಿ ವ್ಯವಸ್ಥೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ನೀರಿಗಾಗಿ ಯಾದಗಿರಿ ಜಿಲ್ಲೆಯ ಸುರಪುರ, ಶಹಾಪುರ, ಹುಣಸಗಿ, ಕೊಡೇಕಲ್, ನಾರಾಯಣಪುರ ಹಾಗೂ ಯಾದಗಿರಿ ಸೇರಿದಂತೆ ವಿವಿಧ ಭಾಗಗಳಲ್ಲಿ ರೈತರು ಸರಣಿ ಹೋರಾಟ, ಸಭೆ, ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ, ರಸ್ತೆ ತಡೆ, ಬಂದ್ ಹಾಗೂ ರ‍್ಯಾಲಿಗಳನ್ನು ನಡೆಸುತ್ತಿದ್ದಾರೆ. ರೈತರ ಸಂಕಷ್ಟದ ಕುರಿತು ಜಿಲ್ಲೆಯ ರಾಜಕೀಯ ಮುಖಂಡರು ಹಲವು ಬಾರಿ ಸಂಬಂಧಪಟ್ಟವರಿಗೆ ಮನವಿ ಸಲ್ಲಿಸಿದ್ದಾರೆ.

ಇತ್ತೀಚೆಗೆ ರೈತರು ಸಚಿವ ವಿಜಯಾನಂದ ಕಾಶಪ್ಪನವರ ಅವರ ಸ್ವಗ್ರಾಮಕ್ಕೆ ತೆರಳಿ ನೀರು ಹರಿಸುವಂತೆ ಮನವಿ ಸಲ್ಲಿಸಿದ್ದಾರೆ. ಶಾಸಕರು, ಮಾಜಿ ಸಚಿವರು ಹಾಗೂ ರೈತ ಮುಖಂಡರು ನಿರಂತರ ಪ್ರಯತ್ನ ನಡೆಸುತ್ತಿದ್ದರೂ ಸಮಸ್ಯೆಗೆ ಇನ್ನೂ ಪರಿಹಾರ ದೊರೆತಿಲ್ಲ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಈಗಾಗಲೇ ಮಳೆಯಿಲ್ಲದೆ ಕೃಷಿ ಚಟುವಟಿಕೆಗಳು ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಎಲ್ಲೆಡೆ 1972ರ ಬರದ ಭೀತಿ ಆವರಿಸಿದೆ. ಬೆಳೆಗಳು ಕಟಾವಿನ ಹಂತಕ್ಕೆ ಬಂದಿರುವ ಸಂದರ್ಭದಲ್ಲಿ ನೀರಿನ ಕೊರತೆಯಾದರೆ ರೈತರು ಸಂಪೂರ್ಣ ನಷ್ಟ ಅನುಭವಿಸಬೇಕಾಗುತ್ತದೆ. ಬೆಲೆ ಏರಿಕೆಯಿಂದ ಸಾಮಾನ್ಯ ಜನರು ತತ್ತರಿಸಿರುವ ಸಂದರ್ಭದಲ್ಲಿ ಸರ್ಕಾರ ನೀರು ಹರಿಸಲು ವಿಫಲವಾದರೆ ರೈತರ ಗಾಯದ ಮೇಲೆ ಬರೆ ಎಳೆದಂತಾಗುತ್ತದೆ. ‘ಒಕ್ಕಲಿಗ ಬಿಕ್ಕಿದರೆ ಜಗವೆಲ್ಲ ಮಣ್ಣು ಮುಕ್ಕುವುದು’ ಎಂಬ ಮಾತನ್ನು ಸರ್ಕಾರ ಮರೆಯಬಾರದು ಎಂದು ಹೇಳಿದ್ದಾರೆ.

ರೈತ ಮುಖಂಡ ಮಲ್ಲಿಕಾರ್ಜುನ ಸತ್ಯಂಪೇಟೆ ಸೇರಿದಂತೆ ವಿವಿಧ ರೈತ ಸಂಘಟನೆಗಳ ಮುಖಂಡರು ನಡೆಸುತ್ತಿರುವ ಹೋರಾಟಕ್ಕೆ ಸಾಹಿತಿಗಳ ಬಳಗದ ಸಂಪೂರ್ಣ ಬೆಂಬಲವಿದೆ. ಸರ್ಕಾರ ತಕ್ಷಣ ಮಧ್ಯಪ್ರವೇಶಿಸಿ ಕೃಷ್ಣಾ ನದಿ ಪಾತ್ರದ ರೈತರ ನೆರವಿಗೆ ಧಾವಿಸಬೇಕು. ನೀರಾವರಿ ಮತ್ತು ರೈತರ ವಿಚಾರ ಬಂದಾಗ ಅದು ಕೇವಲ ಕಾವೇರಿ ನದಿ ಪಾತ್ರಕ್ಕೆ ಸೀಮಿತವಲ್ಲ; ಕೃಷ್ಣಾ ನದಿ ಪಾತ್ರದ ರೈತರ ಹಿತವೂ ಅಷ್ಟೇ ಮುಖ್ಯ. ಕಾವೇರಿ ಮತ್ತು ಕೃಷ್ಣಾ ನದಿ ಪಾತ್ರದ ವಿಚಾರದಲ್ಲಿ ಹಿಂದಿನಿಂದಲೂ ಸರ್ಕಾರಗಳು ತಾರತಮ್ಯದ ನೀತಿ ಅನುಸರಿಸುತ್ತಿವೆ. ದಕ್ಷಿಣ ಕರ್ನಾಟಕಕ್ಕೆ ಹೋಲಿಸಿದರೆ ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದ ಸಮಸ್ಯೆಗಳ ಕಡೆಗೆ ನಿರ್ಲಕ್ಷ್ಯ ತೋರುತ್ತಿರುವುದು ಖಂಡನೀಯ ಎಂದು ಅವರು ತಿಳಿಸಿದ್ದಾರೆ.

ರೈತರ ಹೋರಾಟಕ್ಕೆ ಸಾಹಿತಿಗಳಾದ ನಬೀಲಾಲ ಮಕಾಂದಾರ, ಪ್ರಕಾಶಚಂದ ಜೈನ್, ನಿವೃತ್ತ ಎಸ್ಪಿ ಸಿ.ಎನ್. ಭಂಡಾರಿ, ಡಾ. ಲಕ್ಷ್ಮಿಕಾಂತ ಮೊಹರೀರ, ಕಲ್ಯಾಣಕುಮಾರ ಸಜನಶೆಟ್ಟಿ, ಚಂದ್ರಕಾಂತ ಮಾರ್ಗೆಲ್, ಶರಣಬಸಪ್ಪ ಯಾಳವಾರ, ಪ್ರಕಾಶ ಬಣಗಾರ, ಮಲ್ಲಿಕಾರ್ಜುನ ಉದ್ಧಾರ, ವಿಶ್ವಪೂರ್ವ ಸತ್ಯಂಪೇಟೆ, ಡಾ. ಸತ್ಯನಾರಾಯಣ ಆಲದರ್ತಿ, ಎಚ್. ರಾಠೋಡ, ಕನಕಪ್ಪ ವಾಗಣಗೇರಿ, ಬಸವರಾಜ ಜಮದ್ರಖಾನಿ, ಯಲ್ಲಪ್ಪ ಹುಲಕಲ್, ಪ್ರಕಾಶ ಅಲಬನೂರ, ಮುದ್ದಪ್ಪ ಅಪ್ಪಾಗೋಳ, ದೇವು ಹೆಬ್ಬಾಳ, ವೆಂಕಟೇಶ ಪಾಟೀಲ, ಜಯಲಲಿತಾ ಪಾಟೀಲ, ಶಕುಂತಲಾ ಜಾಲವಾದಿ, ಜಾವೀದ್ ಹುಸೇನ್, ರಾಘವೇಂದ್ರ ಭಕ್ರಿ ಸೇರಿದಂತೆ ಹಲವರು ಬೆಂಬಲ ವ್ಯಕ್ತಪಡಿಸಿದ್ದಾರೆ.

Tags

canalsSurapura
share
ಶರಬು ಬಿ.ನಾಟೇಕಾರ್ ಯಾದಗಿರಿ/ವಾರ್ತಾಭಾರತಿ
ಶರಬು ಬಿ.ನಾಟೇಕಾರ್ ಯಾದಗಿರಿ/ವಾರ್ತಾಭಾರತಿ

ಶರಬು ಬಿ.ನಾಟೇಕಾರ್ ಅವರು 2018ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಎಂ.ಎ. ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕಳೆದ ಎಂಟು ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಇವರು, ವಿವಿಧ ಪತ್ರಿಕೆಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಪ್ರಸ್ತುತ ವಾರ್ತಾಭಾರತಿ ದಿನಪತ್ರಿಕೆಯ ಯಾದಗಿರಿ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ

Next Story
X