ಸುರಪುರ | ನ.30ರವರೆಗೆ ಕೃಷ್ಣಾ ಕಾಲುವೆಗಳಿಗೆ ನೀರು ಹರಿಸಲು ಸಿಎಂ ಡಿಕೆಶಿಗೆ ಮನವಿ

ಸುರಪುರ: ಕೃಷ್ಣಾ ಎಡದಂಡೆ ಮತ್ತು ಬಲದಂಡೆ ಕಾಲುವೆಗಳಿಗೆ ನವೆಂಬರ್ 30ರವರೆಗೆ ನೀರು ಹರಿಸಲು ಕ್ರಮ ಕೈಗೊಳ್ಳುವಂತೆ ಸುರಪುರ ಶಾಸಕ ರಾಜಾ ವೇಣುಗೋಪಾಲ ನಾಯಕ ಅವರು ಇತರ ಸಚಿವರು ಹಾಗೂ ಶಾಸಕರೊಂದಿಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಕೃಷ್ಣಾ ಅಚ್ಚುಕಟ್ಟು ಪ್ರದೇಶದ ರೈತರ ಹಿತದೃಷ್ಟಿಯಿಂದ ನವೆಂಬರ್ 30ರವರೆಗೆ ಕಾಲುವೆಗಳಿಗೆ ನಿರಂತರವಾಗಿ ನೀರು ಹರಿಸಬೇಕು. ರೈತರ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಹಾಗೂ ಬೆಳೆಗಳಿಗೆ ಸಮರ್ಪಕವಾಗಿ ನೀರು ದೊರೆಯುವಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಲಾಗಿದೆ ಎಂದು ಶಾಸಕ ರಾಜಾ ವೇಣುಗೋಪಾಲ ನಾಯಕ ತಿಳಿಸಿದರು.
ಈ ಸಂದರ್ಭದಲ್ಲಿ ಸಚಿವ ಡಾ. ಅಜಯ್ ಸಿಂಗ್, ಮಾಜಿ ಸಚಿವ ಹಾಗೂ ಶಹಾಪುರ ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಮತ್ತು ವಿಧಾನ ಪರಿಷತ್ ಸದಸ್ಯ ರವಿ ಬೋಸರಾಜು ಉಪಸ್ಥಿತರಿದ್ದರು.
Next Story




