Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಸುರಪುರ | ಕುಡಿಯುವ ನೀರಿನ ಕುರಿತು...

ಸುರಪುರ | ಕುಡಿಯುವ ನೀರಿನ ಕುರಿತು ಟಾಸ್ಕ್ ಫೋರ್ಸ್ ಸಭೆ

ವಾರ್ತಾಭಾರತಿವಾರ್ತಾಭಾರತಿ8 March 2026 11:40 PM IST
share
ಸುರಪುರ | ಕುಡಿಯುವ ನೀರಿನ ಕುರಿತು ಟಾಸ್ಕ್ ಫೋರ್ಸ್ ಸಭೆ

ಸುರಪುರ: ತಾಲೂಕಿನಾದ್ಯಂತ ಬೇಸಿಗೆ ವೇಳೆ ಎಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಧಿಕಾರಿಗಳು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಶಾಸಕ ರಾಜಾ ವೇಣುಗೋಪಾಲ್ ನಾಯಕ್ ಸೂಚಿಸಿದರು.

ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಬೇಸಿಗೆ ಕುಡಿಯುವ ನೀರಿನ ಕುರಿತು ನಡೆದ ಟಾಸ್ಕ್ ಫೋರ್ಸ್ ಸಭೆಗೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಈಗಾಗಲೇ ಬೇಸಿಗೆ ಆರಂಭಗೊಂಡಿರುವುದರಿಂದ ಮುಂಬರುವ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಾಣಿಸಿಕೊಳ್ಳದಂತೆ ಪಟ್ಟಣ ಸೇರಿದಂತೆ ತಾಲೂಕಿನ ಎಲ್ಲಾ ಗ್ರಾಮಗಳಲ್ಲಿ ಈಗಿನಿಂದಲೇ ಪರಿಶೀಲನೆ ನಡೆಸಬೇಕು. ಬೋರ್‌ವೆಲ್‌ಗಳ ದುರಸ್ತಿ, ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ವಹಣೆ ಹಾಗೂ ತೀವ್ರ ಸಮಸ್ಯೆ ಉಂಟಾಗುವ ಸ್ಥಳಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಮುಂಚಿತವಾಗಿ ಕ್ರಮ ಕೈಗೊಳ್ಳದೇ ನಂತರ ಸಮಸ್ಯೆ ಕಂಡುಬಂದಲ್ಲಿ ಅದಕ್ಕೆ ಸಂಬಂಧಿಸಿದ ಅಧಿಕಾರಿಗಳೇ ನೇರ ಹೊಣೆಗಾರರಾಗುತ್ತಾರೆ ಎಂದು ಎಚ್ಚರಿಕೆ ನೀಡಿದರು. ಬೋರ್‌ವೆಲ್ ರಿಫ್ರೆಶಿಂಗ್ ಮಾಡಿಸುವುದು, ನೀರು ಸರಬರಾಜು ಮಾಡುವ ಗುಮ್ಮಿಗಳನ್ನು ಸ್ವಚ್ಛಗೊಳಿಸುವುದು ಹಾಗೂ ನೀರಿನ ಟ್ಯಾಂಕರ್ ಅಥವಾ ಬೋರ್‌ವೆಲ್ ದುರಸ್ತಿ ಅಗತ್ಯವಿದ್ದರೆ ಈಗಲೇ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಹಣಮಂತ್ರಾಯ ಪಾಟೀಲ ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಈಗಾಗಲೇ ಎಲ್ಲ ರೀತಿಯ ಎಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ತಾಲೂಕಿನಲ್ಲಿ 29 ಗ್ರಾಮಗಳಲ್ಲಿ ಸಮಸ್ಯೆ ಉಂಟಾಗುವ ಸಾಧ್ಯತೆ ಇದ್ದು, ಅದನ್ನು ತಡೆಯಲು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಬೇಸಿಗೆ ಸಮಯದಲ್ಲಿ ನದಿಗೆ ನೀರು ಹರಿಸಲು ಕ್ರಮ ಕೈಗೊಳ್ಳುವಂತೆ ಶಾಸಕರಿಗೆ ಮನವಿ ಮಾಡಿದರು.

ಸಭೆಯಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ. ರಾಜಾ ವೆಂಕಟಪ್ಪ ನಾಯಕ, ಕ್ಷೇತ್ರ ಶಿಕ್ಷಣಾಧಿಕಾರಿ ಯಲ್ಲಪ್ಪ ಕಾಡ್ಲೂರ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ರಾಮನಗೌಡ ಪಾಟೀಲ, ನಗರ ಕುಡಿಯುವ ನೀರು ಸರಬರಾಜು ಇಲಾಖೆಯ ಸಹಾಯಕ ಅಭಿಯಂತರ ಶಂಕರಗೌಡ, ನಗರಸಭೆ ಪೌರಾಯುಕ್ತ ಬಸವರಾಜ ಟಣಕೆದಾರ, ಕೆಂಭಾವಿ ಪುರಸಭೆಯ ಮುಖ್ಯ ಅಧಿಕಾರಿ ಪ್ರಕಾಶ ಹಾಗೂ ಕಕ್ಕೇರಾ ಪುರಸಭೆಯ ಜೆಇ ರೇಣುಕಮ್ಮ ಸೇರಿದಂತೆ ಅಧಿಕಾರಿಗಳು ಬೇಸಿಗೆ ನಿರ್ವಹಣೆ ಕುರಿತು ಮಾಹಿತಿ ನೀಡಿದರು.

ಸಭೆಯಲ್ಲಿ ಉಪಸ್ಥಿತರಿದ್ದ ತಹಸಿಲ್ದಾರ್ ಹುಸೇನ ಸಾಬ್ ಎ ಸರಕಾವಸ್, ಹುಣಸಗಿ ತಹಸಿಲ್ದಾರ್ ಬಸವರಾಜ, ತಾಲೂಕ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಸಜ್ಜನ್ ಮಾತನಾಡಿದರು. ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

Tags

Surapura
share
ವಾರ್ತಾಭಾರತಿ
ವಾರ್ತಾಭಾರತಿ
Next Story
X