Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಸುರಪುರ | ಕರವೇ ಸ್ವಾಭಿಮಾನಿ ಬಣ...

ಸುರಪುರ | ಕರವೇ ಸ್ವಾಭಿಮಾನಿ ಬಣ ವಿದ್ಯಾರ್ಥಿಗಳ ಸಮಸ್ಯೆಗೆ ಸದಾ ಸ್ಪಂದಿಸಲಿದೆ : ಸಚಿನ್ ಕುಮಾರ ನಾಯಕ

ವಾರ್ತಾಭಾರತಿವಾರ್ತಾಭಾರತಿ22 Sept 2026 6:46 PM IST
share
ಸುರಪುರ | ಕರವೇ ಸ್ವಾಭಿಮಾನಿ ಬಣ ವಿದ್ಯಾರ್ಥಿಗಳ ಸಮಸ್ಯೆಗೆ ಸದಾ ಸ್ಪಂದಿಸಲಿದೆ : ಸಚಿನ್ ಕುಮಾರ ನಾಯಕ

ಸುರಪುರ: ವಿದ್ಯಾರ್ಥಿಗಳ ಯಾವುದೇ ಸಮಸ್ಯೆ ಇರಲಿ, ಅದನ್ನು ಪರಿಹರಿಸಲು ಕರ್ನಾಟಕ ರಕ್ಷಣಾ ವೇದಿಕೆ (ಸ್ವಾಭಿಮಾನಿ ಬಣ) ಸದಾ ಸ್ಪಂದಿಸಲಿದೆ ಎಂದು ಸಂಘಟನೆಯ ತಾಲೂಕು ಅಧ್ಯಕ್ಷ ಸಚಿನ್ ಕುಮಾರ ನಾಯಕ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಗರ ವಿದ್ಯಾರ್ಥಿ ಘಟಕದ ಪದಾಧಿಕಾರಿಗಳ ಆಯ್ಕೆಗಾಗಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನೆಲ, ಜಲ ಹಾಗೂ ಭಾಷೆಯ ರಕ್ಷಣೆ ಜೊತೆಗೆ ಅನ್ಯಾಯ, ಅಕ್ರಮ, ಅವ್ಯವಹಾರ ಮತ್ತು ಭ್ರಷ್ಟಾಚಾರದ ವಿರುದ್ಧ ಸಂಘಟನೆ ನಿರಂತರವಾಗಿ ಧ್ವನಿ ಎತ್ತುತ್ತಿದ್ದು, ವಿದ್ಯಾರ್ಥಿಗಳ ಸಮಸ್ಯೆಗಳಿಗೂ ಸದಾ ಬೆಂಬಲವಾಗಿ ನಿಲ್ಲಲಿದೆ ಎಂದು ತಿಳಿಸಿದರು. ನೂತನ ಪದಾಧಿಕಾರಿಗಳು ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸ್ಪಂದಿಸಿ ಅವರ ಪರವಾಗಿ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.

ಸಂಘಟನೆ ಈಗಾಗಲೇ ಜನಪರ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದು, ಮುಂದೆಯೂ ಜನರ ಪರವಾಗಿ ಕಾನೂನುಬದ್ಧ ಹೋರಾಟ ಮುಂದುವರಿಸಲಾಗುವುದು ಎಂದರು.

ಆಂಗ್ಲ ಪದಗಳ ಅನಗತ್ಯ ಬಳಕೆ ಬಿಟ್ಟು ಕನ್ನಡ ಪದಗಳನ್ನು ಬಳಸುವ ಮೂಲಕ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸಬೇಕು. ಸಂಘಟನೆಯ ಹುದ್ದೆ ಲಾಭದಾಯಕವಲ್ಲ, ಅದು ಸಾಮಾಜಿಕ ಜವಾಬ್ದಾರಿ ಎಂಬುದನ್ನು ಅರಿತು ಸಮಾಜಮುಖಿ ಕಾರ್ಯಗಳಲ್ಲಿ ಎಲ್ಲರೂ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ತಾಲೂಕು ಉಪಾಧ್ಯಕ್ಷ ಗುರುನಾಥ ರೆಡ್ಡಿ ಮಾತನಾಡಿ, ವಿದ್ಯಾರ್ಥಿಗಳು ಮೊಬೈಲ್ ಬಳಕೆಯನ್ನು ಕಡಿಮೆ ಮಾಡಿ ವಿದ್ಯಾಭ್ಯಾಸದ ಕಡೆ ಹೆಚ್ಚಿನ ಗಮನ ಹರಿಸಬೇಕು. ಉತ್ತಮ ಪ್ರಜೆಗಳಾಗಿ ರೂಪುಗೊಳ್ಳುವುದರ ಜೊತೆಗೆ ಸಾಮಾಜಿಕ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಹೇಳಿದರು.

ಕಾರ್ಯಾಧ್ಯಕ್ಷ ಬಸವರಾಜ ಬಡಿಗೇರ ಹಾಗೂ ಸಹ ಕಾರ್ಯದರ್ಶಿ ಕಲ್ಯಾಣರಾವ್ ಕುಲಕರ್ಣಿ ಮಾತನಾಡಿದರು.

ಸಭೆಯಲ್ಲಿ ನಗರ ವಿದ್ಯಾರ್ಥಿ ಘಟಕದ ಅಧ್ಯಕ್ಷರಾಗಿ ಚಂದ್ರಶೇಖರ ನಾಯಕ ಪ್ಯಾಪ್ಲಿ ಹಾಗೂ ಉಪಾಧ್ಯಕ್ಷರಾಗಿ ಭೀಮರಾಯ (ಅಪ್ಪು) ಪೂಜಾರಿ ಅವರನ್ನು ಆಯ್ಕೆ ಮಾಡಲಾಯಿತು.

ಸಭೆಯಲ್ಲಿ ಮುಖಂಡರಾದ ಚಂದ್ರು ಪ್ರಧಾನಿ, ರಾಯಪ್ಪ ಅಮ್ಮಾಪೂರ, ವೆಂಕಟೇಶ ನಾಯಕ ಪೂಜಾರಿ, ಸುನಿಲ್, ಭೀಮರಾಯ ಮತ್ತು ಕಾಶಿನಾಥ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಆದರ್ಶ ದೇವಕೇರಾ ನಿರೂಪಿಸಿದರು. ಮಹೇಶ್ ವಂದಿಸಿದರು.

Tags

studentsSurapura
share
ವಾರ್ತಾಭಾರತಿ
ವಾರ್ತಾಭಾರತಿ
Next Story
X