Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಸುರಪುರ | ನಕಲಿ ದಾಖಲೆ ನೀಡಿ ನೌಕರಿ ಪಡೆದ...

ಸುರಪುರ | ನಕಲಿ ದಾಖಲೆ ನೀಡಿ ನೌಕರಿ ಪಡೆದ ಆರೋಪ; ಇಬ್ಬರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲು

ವಾರ್ತಾಭಾರತಿವಾರ್ತಾಭಾರತಿ9 Oct 2026 6:41 PM IST
share
ಸುರಪುರ | ನಕಲಿ ದಾಖಲೆ ನೀಡಿ ನೌಕರಿ ಪಡೆದ ಆರೋಪ; ಇಬ್ಬರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲು

ಸುರಪುರ: ನಕಲಿ ದಾಖಲೆಗಳನ್ನು ಸೃಷ್ಟಿಸಿ ಸರಕಾರಕ್ಕೆ ನೀಡಿ ನೌಕರಿ ಪಡೆದು ವಂಚಿಸಿದ್ದ ಇಬ್ಬರೂ ಆರೋಪಿಗಳ ವಿರುದ್ಧ ಸುರಪುರ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ.

ತಾಲೂಕ ಆರೋಗ್ಯ ಅಧಿಕಾರಿಗಳು ಹಾಗೂ ಸುರಪುರದ ಸರ್ಕಾರಿ ಆಸ್ಪತ್ರೆ ಹಾಗೂ ಯಮನೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ರಭಾರ ಮುಖ್ಯ ವೈದ್ಯಾಧಿಕಾರಿಗಳು ಆಗಿರುವ ಡಾ. ರಾಜಾ ವೆಂಕಪ್ಪ ನಾಯಕ ಅವರು ಸುರಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಕಲಬುರ್ಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಚಿಂಚೋಳಿ ಗ್ರಾಮದ ಜಗದೀಶ್ ಗುತ್ತೇದಾರ ಹಾಗೂ ಸುರಪುರ ತಾಲೂಕಿನ ಕವಡಿಮಟ್ಟಿಯ ಸುರೇಶ ಗುತ್ತೇದಾರ ಇಬ್ಬರು ಎಸ್ ಎಸ್ ಎಲ್ ಸಿ ಯ ನಕಲಿ ಅಂಕಪಟ್ಟಿಯನ್ನು ತಯಾರಿಸಿ ಆರೋಗ್ಯ ಇಲಾಖೆಯ ನಿರ್ದೇಶಕರ ಕಚೇರಿಗೆ ನಕಲಿ ದಾಖಲಾತಿಗಳನ್ನು ಸಲ್ಲಿಸಿ ಡಿ ದರ್ಜೆಯ ನೌಕರಿ ಪಡೆದುಕೊಂಡು ಕಳೆದ ಹತ್ತು ವರ್ಷಗಳಿಂದ ಕೆಲಸ ಮಾಡುತ್ತಿದ್ದು. ಈಗ ಈ ವಿಷಯ ಆರೋಗ್ಯ ಇಲಾಖೆಯ ಗಮನಕ್ಕೆ ಬಂದು ಇವರ ಅಂಕಪಟ್ಟಿಗಳನ್ನು ಎಸ್ ಎಸ್ ಎಲ್ ಸಿ ಮಂಡಳಿ ಪರಿಶೀಲನೆ ನಡೆಸಿದಾಗ ನಕಲಿ ಎಂದು ಗೊತ್ತಾಗಿದ್ದರಿಂದ ಇಬ್ಬರನ್ನು ಇಲಾಖೆ ಸೇವೆಯಿಂದ ಅಮಾನತುಗೊಳಿಸಿದೆ.

ಆರೋಪಿಗಳ ವಿರುದ್ಧ ವಿರುದ್ಧ ಗುನ್ನೆ ನಂ. 250/2026 ಕಲಂ 336(2),336(3),318(4) ಬಿಎನ್‌ಎಸ್ -2023ರ ಅಡಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Tags

SurapuraFraud
share
ವಾರ್ತಾಭಾರತಿ
ವಾರ್ತಾಭಾರತಿ
Next Story
X