Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಸುರಪುರ | ಮನೆ, ಸಮಾಜದಲ್ಲಿ...

ಸುರಪುರ | ಮನೆ, ಸಮಾಜದಲ್ಲಿ ಸಂಸ್ಕಾರ-ಸಂಸ್ಕೃತಿ ಉಳಿದಿರುವುದು ಮಹಿಳೆಯರಿಂದ: ದಿನೇಶ ಪೂಜಾರಿ

ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ: ಸೌಲಭ್ಯಗಳ ಪತ್ರ ವಿತರಣೆ

ವಾರ್ತಾಭಾರತಿವಾರ್ತಾಭಾರತಿ26 Sept 2026 5:49 PM IST
share
ಸುರಪುರ | ಮನೆ, ಸಮಾಜದಲ್ಲಿ ಸಂಸ್ಕಾರ-ಸಂಸ್ಕೃತಿ ಉಳಿದಿರುವುದು ಮಹಿಳೆಯರಿಂದ: ದಿನೇಶ ಪೂಜಾರಿ

ಸುರಪುರ: ಇಂದು ಮನೆ ಮತ್ತು ಸಮಾಜದಲ್ಲಿ ಸಂಸ್ಕಾರ ಹಾಗೂ ಸಂಸ್ಕೃತಿ ಉಳಿದಿರುವುದು ಮಹಿಳೆಯರಿಂದಲೇ ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ಬಿಸಿ ಟ್ರಸ್ಟ್) ಪ್ರಾದೇಶಿಕ ನಿರ್ದೇಶಕ ದಿನೇಶ ಪೂಜಾರಿ ಹೇಳಿದರು.

ಪಟ್ಟಣದ ರಂಗಂಪೇಟೆಯ ವೀರಶೈವ ಲಿಂಗಾಯತ ಕಲ್ಯಾಣ ಮಂಟಪದಲ್ಲಿ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಸ್ಥೆಯಲ್ಲಿ ಶೇ.50ಕ್ಕಿಂತ ಹೆಚ್ಚು ಮಹಿಳೆಯರಿದ್ದು, ಅತಿ ಹೆಚ್ಚು ಮಹಿಳಾ ಸ್ವಸಹಾಯ ಗುಂಪುಗಳೂ ಕಾರ್ಯನಿರ್ವಹಿಸುತ್ತಿವೆ. ಜ್ಞಾನ ವಿಕಾಸ ಯೋಜನೆಯಡಿ ಸರ್ಕಾರದ ಸೌಲಭ್ಯಗಳು, ಮಕ್ಕಳ ಆರೈಕೆ, ಆರ್ಥಿಕ ಸ್ವಾವಲಂಬನೆ ಸೇರಿದಂತೆ ಅನೇಕ ವಿಷಯಗಳ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಪ್ರಸ್ತುತ 6,200 ಕೇಂದ್ರಗಳಲ್ಲಿ 32 ಸಾವಿರ ಮಹಿಳೆಯರು ಕಾರ್ಯನಿರ್ವಹಿಸುತ್ತಿದ್ದು, ಮಹಿಳೆಯರು ಇಂತಹ ವಿಚಾರಗೋಷ್ಠಿ ಹಾಗೂ ಜಾಗೃತಿ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಕರೆ ನೀಡಿದರು.

“ಮಹಿಳೆ ಇಲ್ಲದ ಮನೆ ಸ್ಮಶಾನದಂತೆ. ರೈತ ಕುಟುಂಬದಲ್ಲಿ ಮಹಿಳೆಯೇ ಹೆಚ್ಚು ಶ್ರಮಿಸುತ್ತಾಳೆ. ಅದಕ್ಕಾಗಿಯೇ ನಮ್ಮ ಸಂಸ್ಥೆಯ ಹೇಮಾವತಿ ಅಮ್ಮನವರು ಮಹಿಳೆಯರಿಗಾಗಿ ಈ ಕಾರ್ಯಕ್ರಮವನ್ನು ಆರಂಭಿಸಿದ್ದಾರೆ” ಎಂದು ದಿನೇಶ ಪೂಜಾರಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ವಿಜಯಪುರದ ಗಿರಿಜಾ ಸಂತೋಷ ಪಾಟೀಲ್ ಅವರು “ಸ್ವಸ್ಥ ಕುಟುಂಬ ಮತ್ತು ಸಮಾಜ ನಿರ್ಮಾಣದಲ್ಲಿ ಮಹಿಳೆಯರ ಪಾತ್ರ” ವಿಷಯದ ಕುರಿತು ಮಾತನಾಡಿ, ಹೆಣ್ಣು ಮಕ್ಕಳ ನೋವು-ನಲಿವಿಗೆ ಸ್ಪಂದಿಸುವ ಸಂಸ್ಥೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಾಗಿದೆ. ಸಂಸ್ಥೆಯ ಸೌಲಭ್ಯಗಳನ್ನು ಪಡೆದು ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು ಎಂದರು.

ಒಂದು ದೇಶ ಮತ್ತು ಸಮಾಜದ ಅಭಿವೃದ್ಧಿಯಲ್ಲಿ ಮಹಿಳೆಯ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಒಂದು ಕುಟುಂಬ ಉಳಿಯಲು ಮತ್ತು ಬೆಳೆಯಲು ಮಹಿಳೆ ಕರ್ಪೂರದಂತೆ ತನ್ನನ್ನು ತಾನು ತ್ಯಾಗಮಾಡುತ್ತಾಳೆ. ಮಹಿಳೆ ಸಹನಶೀಲಳು, ಎಲ್ಲ ಕಷ್ಟಗಳನ್ನು ತಾಳುವ ಶಕ್ತಿ ಹೆಣ್ಣಿಗಿದೆ. ಅದಕ್ಕಾಗಿಯೇ ಸ್ವಾಮಿ ವಿವೇಕಾನಂದರು “ಭಾರತ ದೇಶವನ್ನು ವಿಜಯಶಾಲಿಯನ್ನಾಗಿಸಲು ಐನೂರು ಮಹಿಳೆಯರನ್ನು ಕೊಡಿ” ಎಂದು ಹೇಳಿದ್ದರು ಎಂದು ಅವರು ಉಲ್ಲೇಖಿಸಿದರು.

ತಮ್ಮ 60ನೇ ವಯಸ್ಸಿನಲ್ಲಿ ಮ್ಯಾರಥಾನ್ ಓಟದಲ್ಲಿ ಗೆದ್ದ ಲತಾ ಭಗನಾವ್ಕರಿ ಅವರಂತಹ ಮಹಿಳೆಯರು ಎಲ್ಲರಿಗೂ ಮಾದರಿಯಾಗಬೇಕು. ಇಂದಿನ ಆಧುನಿಕ ಸಮಾಜದಲ್ಲಿ ಮಹಿಳೆಯರು ಮನೆಯ ಹೊರಗೂ ಬಂದು ವಿವಿಧ ಕ್ಷೇತ್ರಗಳಲ್ಲಿ ಸಕ್ರಿಯರಾಗಬೇಕು. ಸಾವಿರಾರು ಕಷ್ಟಗಳನ್ನು ಸಹಿಸಿಕೊಂಡು ಮನೆ ಮತ್ತು ಸಮಾಜದ ಅಭಿವೃದ್ಧಿಗೆ ಶ್ರಮಿಸುವವಳು ಮಹಿಳೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಜನಜಾಗೃತಿ ವೇದಿಕೆ ಕೋಶಾಧಿಕಾರಿ ಸೂಗುರೇಶ ವಾರದ ಮಾತನಾಡಿ, ಧರ್ಮಸ್ಥಳ ಸಂಸ್ಥೆಯ ಚಟುವಟಿಕೆಗಳಿಂದ ಮಹಿಳೆಯರು ಮನೆಯಿಂದ ಹೊರಬಂದು ಆರ್ಥಿಕ ಹಾಗೂ ಸಾಮಾಜಿಕವಾಗಿ ಸ್ವಾವಲಂಬಿಗಳಾಗಲು ಸಾಧ್ಯವಾಗಿದೆ. ಮಕ್ಕಳ ಶಿಕ್ಷಣ, ಕೃಷಿ ಅಭಿವೃದ್ಧಿ, ಪಶುಸಂಗೋಪನೆ ಸೇರಿದಂತೆ ಹಲವು ಯೋಜನೆಗಳ ಮೂಲಕ ಸಂಘ ಮಹಿಳೆಯರ ಬದುಕಿಗೆ ಬೆಂಬಲ ನೀಡುತ್ತಿದೆ ಎಂದು ತಿಳಿಸಿದರು.

ಸೂಲಗಿತ್ತಿ ಶಕುಂತಲಾ ಆನಂದರಾವ್ ಜಿನಗಾರ ಕಾರ್ಯಕ್ರಮ ಉದ್ಘಾಟಿಸಿದರು. ಜಿಲ್ಲಾ ಜನಜಾಗೃತಿ ವೇದಿಕೆ ಉಪಾಧ್ಯಕ್ಷ ಪ್ರಕಾಶ ಅಂಗಡಿ ಕನ್ನೆಳ್ಳಿ, ಆರ್ಟ್ ಆಫ್ ಲಿವಿಂಗ್‌ನ ಮಾಧುರಿ ಕಲ್ಕುಂಡಿ, ಸ್ತ್ರೀರೋಗ ತಜ್ಞೆ ಡಾ. ಪ್ರಿಯಾಂಕ ಭಂಗಾರಿ ಹಾಗೂ ಮುಖಂಡ ಶಿವಶರಣಪ್ಪ ಹೆಡಗಿನಾಳ ಮಾತನಾಡಿದರು.

ಸೇವಾ ಪ್ರತಿನಿಧಿ ನಿರ್ಮಲಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಿದ್ದಮ್ಮ ಹಾಗೂ ತಂಡ ಪ್ರಾರ್ಥನೆ ಸಲ್ಲಿಸಿದರು. ಯೋಜನಾಧಿಕಾರಿ ನಾಗೇಶ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ನೂರಾರು ಮಹಿಳೆಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಕಾರ್ಯಕ್ರಮದ ಅಂಗವಾಗಿ 27 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಲಾಯಿತು. ಜ್ಞಾನದೀಪ ಯೋಜನೆಯಡಿ ನಾಲ್ಕು ಶಾಲೆಗಳಿಗೆ ನೇಮಕಗೊಂಡ ಶಿಕ್ಷಕರಿಗೆ ಮಂಜೂರಾತಿ ಪತ್ರ ನೀಡಲಾಯಿತು. ಆರೋಗ್ಯ ಚಿಕಿತ್ಸೆಗೆ ವಿಮಾ ಧನ ಸಹಾಯ ವಿತರಣೆ, ಕಕ್ಕೇರಾ ಗ್ರಾಮದ ಮಹಿಳೆಯೊಬ್ಬರಿಗೆ ವಾತ್ಸಲ್ಯ ಮನೆ ಹಸ್ತಾಂತರ, ವಿಶೇಷಚೇತನರಿಗೆ ತ್ರಿಚಕ್ರ ವಾಹನ ವಿತರಣೆ ಹಾಗೂ ವಯೋವೃದ್ಧ ಮಹಿಳೆಯರಿಗೆ ಮಾಸಾಶನ ಮಂಜೂರಾತಿ ಪತ್ರ ವಿತರಿಸಲಾಯಿತು.

ಇದೇ ವೇಳೆ ಮಹಿಳಾ ಪೊಲೀಸ್ ಪೇದೆಯರನ್ನು ಸನ್ಮಾನಿಸಲಾಯಿತು. ನಾಲ್ವರು ಸೂಲಗಿತ್ತಿ ಮಹಿಳೆಯರಾದ ಶಕುಂತಲಾ ಆನಂದರಾವ್ ಸೇರಿದಂತೆ ಸಂಜೀವಿನಿ ಯೋಜನೆಯಡಿ ವೈದ್ಯರಾದ ಡಾ. ವಿಜಯ ಸಾಲಿ ಹಾಗೂ ಸ್ತ್ರೀರೋಗ ತಜ್ಞೆ ಡಾ. ಪ್ರಿಯಾಂಕ ಭಂಗಾರಿ ಅವರಿಂದ ಆರೋಗ್ಯ ತಪಾಸಣೆ ನಡೆಸಲಾಯಿತು. ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ವೀರೇಂದ್ರ ಹೆಗ್ಗಡೆ ಅವರು ನೇರವಾಗಿ ಸಾಲ ಕೊಡುವುದಿಲ್ಲ. ಸಮಾಜದ ಜನರಿಗೆ ಅನುಕೂಲವಾಗುವ ವಿವಿಧ ಸೌಲಭ್ಯಗಳನ್ನು ಕಲ್ಪಿಸುತ್ತಾರೆ. ಬ್ಯಾಂಕ್‌ಗಳೊಂದಿಗೆ ಸಂಸ್ಥೆ ಒಪ್ಪಂದ ಮಾಡಿಕೊಂಡಿದ್ದು, ಬ್ಯಾಂಕ್‌ಗಳ ಮೂಲಕವೇ ಜನರಿಗೆ ಸಾಲ ನೀಡಲಾಗುತ್ತದೆ. ಈ ಬಗ್ಗೆ ಮಾಡಲಾಗುತ್ತಿರುವ ಆರೋಪಗಳು ಸುಳ್ಳು.

-ದಿನೇಶ ಪೂಜಾರಿ, ಪ್ರಾದೇಶಿಕ ನಿರ್ದೇಶಕ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ಬಿಸಿ ಟ್ರಸ್ಟ್)

Tags

womenSocietyCultureSurapura
share
ವಾರ್ತಾಭಾರತಿ
ವಾರ್ತಾಭಾರತಿ
Next Story
X