Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಸುರಪುರ | ಮತದಾರರ ಪಟ್ಟಿಯಲ್ಲಿ ಹೆಸರು...

ಸುರಪುರ | ಮತದಾರರ ಪಟ್ಟಿಯಲ್ಲಿ ಹೆಸರು ಖಚಿತಪಡಿಸಿಕೊಳ್ಳಿ: ಬಸವರಾಜ ಸಜ್ಜನ್

ವಾರ್ತಾಭಾರತಿವಾರ್ತಾಭಾರತಿ11 July 2026 5:28 PM IST
share
ಸುರಪುರ | ಮತದಾರರ ಪಟ್ಟಿಯಲ್ಲಿ ಹೆಸರು ಖಚಿತಪಡಿಸಿಕೊಳ್ಳಿ: ಬಸವರಾಜ ಸಜ್ಜನ್
ಅರಕೇರಾ (ಕೆ) ಗ್ರಾಮದಲ್ಲಿ ಎಸ್‌ಐಆರ್ ಜಾಗೃತಿ ಜಾಥಾ, ಮೇಣದಬತ್ತಿ ಮೆರವಣಿಗೆ, ಮಾನವ ಸರಪಳಿ

ಸುರಪುರ : ಮತದಾರರ ಪಟ್ಟಿಯಲ್ಲಿ ಪ್ರತಿಯೊಬ್ಬ ಅರ್ಹ ಮತದಾರರು ತಮ್ಮ ಹೆಸರು ಇರುವುದನ್ನು ಕಡ್ಡಾಯವಾಗಿ ಖಚಿತಪಡಿಸಿಕೊಳ್ಳಬೇಕು ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಎಸ್‌ಐಆರ್ ಸ್ವೀಪ್ ಸಮಿತಿ ಅಧ್ಯಕ್ಷ ಬಸವರಾಜ ಸಜ್ಜನ್ ಹೇಳಿದರು.

ತಾಲೂಕಿನ ಅರಕೇರಾ (ಕೆ) ಗ್ರಾಮದಲ್ಲಿ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಕುರಿತು ಹಮ್ಮಿಕೊಂಡಿದ್ದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ಅರ್ಹ ಮತದಾರರ ಭಾಗವಹಿಸುವಿಕೆ ಅತ್ಯಂತ ಮಹತ್ವದ್ದಾಗಿದೆ. ಆದ್ದರಿಂದ ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಸಾರ್ವಜನಿಕರು ಸಕ್ರಿಯವಾಗಿ ಪಾಲ್ಗೊಂಡು ತಮ್ಮ ಹೆಸರು ಮತ್ತು ವಿವರಗಳನ್ನು ಪರಿಶೀಲಿಸಿಕೊಳ್ಳಬೇಕು ಎಂದು ತಿಳಿಸಿದರು.

ಎಸ್‌ಐಆರ್ ವಿಶೇಷ ತೀವ್ರ ಪರಿಷ್ಕರಣೆ ಕುರಿತು ಸಾರ್ವಜನಿಕರಲ್ಲಿ ವ್ಯಾಪಕ ಜಾಗೃತಿ ಮೂಡಿಸುವ ಉದ್ದೇಶದಿಂದ ಅರಕೇರಾ (ಕೆ) ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮೇಣದಬತ್ತಿ ಮೆರವಣಿಗೆ ಹಾಗೂ ಮಾನವ ಸರಪಳಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸಾರ್ವಜನಿಕರು, ಯುವಕರು, ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ಸ್ಥಳೀಯರು ಉತ್ಸಾಹದಿಂದ ಭಾಗವಹಿಸಿ ಮಾನವ ಸರಪಳಿ ನಿರ್ಮಿಸುವ ಮೂಲಕ ಮತದಾರರ ಪಟ್ಟಿ ಪರಿಷ್ಕರಣೆಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸಿದರು.

ಬಳಿಕ ಮೇಣದಬತ್ತಿ ಮೆರವಣಿಗೆ ನಡೆಸಿ, ಅರ್ಹ ನಾಗರಿಕರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರುವುದನ್ನು ಪರಿಶೀಲಿಸಿಕೊಳ್ಳುವುದು ಹಾಗೂ ಅಗತ್ಯವಿದ್ದರೆ ನಿಗದಿತ ಅವಧಿಯೊಳಗೆ ಸಂಬಂಧಪಟ್ಟ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುವಂತೆ ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅಧಿಕಾರಿಗಳು ಹಾಗೂ ಸಾರ್ವಜನಿಕರು, ಪ್ರತಿಯೊಬ್ಬ ಅರ್ಹ ಮತದಾರರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರುವುದನ್ನು ಖಚಿತಪಡಿಸಿಕೊಂಡು ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಕರೆ ನೀಡಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಸಿಬ್ಬಂದಿಗಳು, ಅಂಗನವಾಡಿ ಆಶಾ ಕಾರ್ಯಕರ್ತೆಯರು ಸಂಘ ಸಂಸ್ಥೆಗಳ ಮುಖಂಡರು ಭಾಗವಹಿಸಿದ್ದರು.

Tags

Surapura
share
ವಾರ್ತಾಭಾರತಿ
ವಾರ್ತಾಭಾರತಿ
Next Story
X