Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಸುರಪುರ | ಸಹಕಾರ ರಂಗದಲ್ಲಿ ಯುವಜನತೆ...

ಸುರಪುರ | ಸಹಕಾರ ರಂಗದಲ್ಲಿ ಯುವಜನತೆ ಸಕ್ರಿಯವಾಗಿ ಪಾಲ್ಗೊಳ್ಳಬೇಕು : ವಿರುಪಾಕ್ಷಿ

ಸಹಕಾರ ಕ್ಷೇತ್ರದಲ್ಲಿ ಯುವಜನರ ಪಾತ್ರ ಕುರಿತು ಕ್ಲಸ್ಟರ್ ತರಬೇತಿ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ7 Sept 2026 7:10 PM IST
share
ಸುರಪುರ | ಸಹಕಾರ ರಂಗದಲ್ಲಿ ಯುವಜನತೆ ಸಕ್ರಿಯವಾಗಿ ಪಾಲ್ಗೊಳ್ಳಬೇಕು : ವಿರುಪಾಕ್ಷಿ

ಸುರಪುರ : ಸಹಕಾರ ಕ್ಷೇತ್ರದ ಅಭಿವೃದ್ಧಿಯಲ್ಲಿ ಯುವಜನರ ಪಾತ್ರ ಮಹತ್ವದ್ದಾಗಿದ್ದು, ಯುವಕರು ಮತ್ತು ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಸಹಕಾರ ಚಟುವಟಿಕೆಗಳಲ್ಲಿ ಪಾಲ್ಗೊಂಡು ಆರ್ಥಿಕವಾಗಿ ಸಬಲರಾಗಬೇಕು ಎಂದು ಶ್ರೀ ಪ್ರಭು ಮಹಾವಿದ್ಯಾಲಯದ ಪ್ರಾಂಶುಪಾಲ ವಿರುಪಾಕ್ಷಿ ಹೇಳಿದರು.

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ, ಬೆಂಗಳೂರು, ಯಾದಗಿರಿ ಜಿಲ್ಲಾ ಸಹಕಾರ ಒಕ್ಕೂಟ, ಸಹಕಾರ ಇಲಾಖೆ ಹಾಗೂ ಶ್ರೀ ಪ್ರಭು ಪದವಿ ಮಹಾವಿದ್ಯಾಲಯದ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ‘ಸಹಕಾರ ಕ್ಷೇತ್ರದಲ್ಲಿ ಯುವಜನತೆಯ ಪಾತ್ರ’ ವಿಷಯದ ಕ್ಲಸ್ಟರ್ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಹಕಾರ ರಂಗದಲ್ಲಿ ಯುವಕರ ಪಾಲ್ಗೊಳ್ಳುವಿಕೆ ಹೆಚ್ಚಿದರೆ ಆರ್ಥಿಕ ಸ್ವಾವಲಂಬನೆ ಸಾಧಿಸುವುದರ ಜೊತೆಗೆ ಉದ್ಯೋಗಾವಕಾಶಗಳಿಗೂ ದಾರಿ ತೆರೆದುಕೊಳ್ಳುತ್ತದೆ. ವಿದ್ಯಾರ್ಥಿಗಳು ಸ್ಥಳೀಯ ಸಹಕಾರ ಸಂಘಗಳಲ್ಲಿ ಸದಸ್ಯತ್ವ ಪಡೆದು ಸಹಕಾರ ಚಳವಳಿಯ ಭಾಗವಾಗಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ಸಾಯಿಬಣ್ಣ ಮುಡಬೂಳ ಮಾತನಾಡಿ, ಕೃಷಿ, ಕೌಶಲ್ಯಾಭಿವೃದ್ಧಿ, ಸಣ್ಣ ಕೈಗಾರಿಕೆ, ವ್ಯಾಪಾರ ಮತ್ತು ಉದ್ಯಮಗಳ ಬೆಳವಣಿಗೆಯಲ್ಲಿ ಸಹಕಾರ ಕ್ಷೇತ್ರ ಪ್ರಮುಖ ಪಾತ್ರ ವಹಿಸುತ್ತಿದೆ. ವಿದ್ಯಾರ್ಥಿಗಳು ಇಂತಹ ತರಬೇತಿಗಳ ಮೂಲಕ ಸಹಕಾರ ವ್ಯವಸ್ಥೆಯ ಮಹತ್ವವನ್ನು ಅರಿತುಕೊಳ್ಳಬೇಕು ಎಂದು ತಿಳಿಸಿದರು.

ಯಾದಗಿರಿ ಜಿಲ್ಲಾ ಸಹಕಾರ ಒಕ್ಕೂಟದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಜಾತ ಮಠ ಅವರು ಸಹಕಾರ ಕ್ಷೇತ್ರದಲ್ಲಿ ಯುವಜನರ ಪಾತ್ರ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಇದೇ ವೇಳೆ ಅವರು ಅತಿಥಿಗಳನ್ನು ಸ್ವಾಗತಿಸಿ ವಂದಿಸಿದರು.

ಕಾರ್ಯಕ್ರಮದಲ್ಲಿ ನಿಂಗಯ್ಯ ಪೂಜಾರಿ, ರಮೇಶ್ ಶಹಾಪುರಕರ್ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು. ಮಲ್ಲಾರಾವ್ ಕುಲಕರ್ಣಿ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿಗಳು ಹಾಗೂ ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Tags

Surapura
share
ವಾರ್ತಾಭಾರತಿ
ವಾರ್ತಾಭಾರತಿ
Next Story
X