Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಸುರಪುರ | ಶರಣರ ಕಾಯಕ ತತ್ವ ಸಮಾನತೆಯ...

ಸುರಪುರ | ಶರಣರ ಕಾಯಕ ತತ್ವ ಸಮಾನತೆಯ ಪ್ರಮುಖ ಅಸ್ತ್ರ: ಪ್ರಭುಲಿಂಗ ಮಹಾಸ್ವಾಮೀಜಿ

ವಾರ್ತಾಭಾರತಿವಾರ್ತಾಭಾರತಿ25 Aug 2026 6:58 PM IST
share
ಸುರಪುರ | ಶರಣರ ಕಾಯಕ ತತ್ವ ಸಮಾನತೆಯ ಪ್ರಮುಖ ಅಸ್ತ್ರ:  ಪ್ರಭುಲಿಂಗ ಮಹಾಸ್ವಾಮೀಜಿ

ಸುರಪುರ: ಶರಣರ ಕಾಯಕ ತತ್ವವು ಸಮಾಜದಲ್ಲಿನ ಲಿಂಗ ಅಸಮಾನತೆ, ಮೇಲು-ಕೀಳು ಹಾಗೂ ಜಾತಿ ಆಧಾರಿತ ತಾರತಮ್ಯವನ್ನು ಹೋಗಲಾಡಿಸಿ ಸಂಪೂರ್ಣ ಸಮಾನತೆಯನ್ನು ಸ್ಥಾಪಿಸುವ ಪ್ರಮುಖ ಅಸ್ತ್ರವಾಗಿತ್ತು ಎಂದು ಶ್ರೀ ಪ್ರಭುಲಿಂಗ ಮಹಾಸ್ವಾಮೀಜಿ ಹೇಳಿದರು.

ಪಟ್ಟಣದ ಶ್ರೀ ನಿಷ್ಠಿ ಕಡ್ಲಪ್ಪನವರ ವಿರಕ್ತಮಠದಲ್ಲಿ ನಡೆದ ಶ್ರಾವಣ ಶಿವಾನುಭವ ಚಿಂತನ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಜಾತಿ, ವರ್ಗ ಹಾಗೂ ಧರ್ಮಗಳ ತಾರತಮ್ಯವನ್ನು ನಿರಾಕರಿಸುವ ಶರಣರ ಕಾಯಕ ತತ್ವದಲ್ಲಿ ಶ್ರಮದ ಗೌರವ, ಸಾಮಾಜಿಕ ಮತ್ತು ಆರ್ಥಿಕ ಸಮಾನತೆ, ಆಧ್ಯಾತ್ಮಿಕತೆ ಹಾಗೂ ದಾಸೋಹದಂತಹ ಮೌಲ್ಯಗಳು ಅಡಕವಾಗಿವೆ ಎಂದರು.

‘ಕಾಯಕ ತತ್ವದಲ್ಲಿ ಸಮನ್ವಯತೆ’ ವಿಷಯದ ಕುರಿತು ಶಿವಾನುಭವ ಚಿಂತನೆ ಮಂಡಿಸಿದ ಸಗರ ಗ್ರಾಮದ ಸರ್ಕಾರಿ ಪಿಯು ಕಾಲೇಜಿನ ಉಪನ್ಯಾಸಕ ಭೀಮರೆಡ್ಡಿ ಪೊಲೀಸ್ ಪಾಟೀಲ್, ಕಾಯಕವು ಮನುಷ್ಯನ ಜೀವಾಳವಾಗಿದ್ದು, ಕಾಯಕ ತತ್ವದಲ್ಲಿ ಲಿಂಗ, ಜಾತಿ ಹಾಗೂ ವರ್ಣಭೇದಕ್ಕೆ ಅವಕಾಶವಿಲ್ಲ. ಎಲ್ಲ ಕಾಯಕಗಳಿಗೂ ಸಮಾನ ಗೌರವವಿದ್ದು, ಮಾಡುವ ಕೆಲಸ ಸಣ್ಣದು-ದೊಡ್ಡದು ಎಂದು ಪರಿಗಣಿಸದೆ ಸಮರ್ಪಣಾ ಭಾವದಿಂದ ನಿರ್ವಹಿಸಬೇಕು ಎಂದರು.

ಶರಣರು ಹಾಗೂ ವಚನಕಾರರು ತಮ್ಮ ಕಾಯಕದಲ್ಲಿ ತೊಡಗಿಸಿಕೊಂಡು ಕಾಯಕಕ್ಕೆ ನ್ಯಾಯ ಒದಗಿಸುವ ಮೂಲಕ ಸಮಾಜಕ್ಕೆ ಸಮನ್ವಯತೆಯ ಸಂದೇಶ ನೀಡಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕರಬ ಕ್ಷೇಮಾಭಿವೃದ್ಧಿ ಸಂಘದ ಉಪಾಧ್ಯಕ್ಷ ಬಸವರಾಜ ಜಾಲಹಳ್ಳಿ ಉಪಸ್ಥಿತರಿದ್ದರು. ತಾಲೂಕು ಕಸಾಪ ಗೌರವ ಕಾರ್ಯದರ್ಶಿ ಎಚ್.ವೈ. ರಾಠೋಡ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕ ವೆಂಕಟೇಶ್ ಪಾಟೀಲ್ ಸ್ವಾಗತಿಸಿದರು. ಜಗದೀಶ್ ಮಾನು ಪ್ರಾರ್ಥಿಸಿದರು.

ಕಾರ್ಯಕ್ರಮದ ಆರಂಭದಲ್ಲಿ ಹಿರಿಯ ಸಂಗೀತ ಕಲಾವಿದರಾದ ಮೋಹನರಾವ್ ಮಾಳದಕರ್, ಉಮೇಶ್ ಯಾದವ್, ರಮೇಶ್ ಕುಲಕರ್ಣಿ, ಸುರೇಶ್ ಅಂಬುರೆ, ಶರಣಬಸವ ಕೊಂಗಂಡಿ ಸೇರಿದಂತೆ ಹಲವರು ಸಂಗೀತ ಸೇವೆ ಸಲ್ಲಿಸಿದರು. ಮಾನಪ್ಪ ಭಜಂತ್ರಿ ಅವರ ಕೊಳಲು ವಾದನ, ಉಮೇಶ್ ಯಾದವ್ ಅವರ ಹಾರ್ಮೋನಿಯಂ ಹಾಗೂ ರಮೇಶ್ ಕುಲಕರ್ಣಿ ಅವರ ತಬಲಾ ಜುಗಲ್‌ಬಂದಿ ಗಮನ ಸೆಳೆಯಿತು.

ಕಾರ್ಯಕ್ರಮದಲ್ಲಿ ಪ್ರಮುಖರಾದ ವೀರೇಶ ನಿಷ್ಟಿ ದೇಶಮುಖ, ತಾಲೂಕ ಕಸಾಪ ಅಧ್ಯಕ್ಷ ಶರಣಬಸಪ್ಪ ಯಾಳವಾರ, ರಸ್ತಾಪುರದ ಬಸವರಾಜಗೌಡ ಬ್ಯಾಲಾಳ್, ಶಿವಕುಮಾರ ಮಸ್ಕಿ, ಸಂಗಮೇಶ ಗುಳಗಿ, ಸುಭಾಷ್ ಹೂಗಾರ್, ಉಪನ್ಯಾಸಕರಾದ ದೇವು ಹೆಬ್ಬಾಳ್, ವಿಜಯಕುಮಾರ ಬಣಗಾರ, ಮಾನಪ್ಪ ಹೂಗಾರ, ಮಹೇಂದ್ರ ಅಂಗಡಿ, ಶಿವುಕುಮಾರ್ ಮಸ್ಕಿ, ಡಾ.ಶರಣಬಸವ ಹೂಗಾರ, ಬಸವರಾಜ್ ಗೋಗಿ, ಬಸವಲಿಂಗಯ್ಯ ಸ್ವಾಮಿ,ಶರಣಪ್ಪ ಮಗಲಿ, ಭೀಮಾಶಂಕರ್ ಕಳಿಮನಿ,ಶೇಖರ ಕುಂಬಾರ, ಕೊಟ್ರಯ್ಯ ಸ್ವಾಮಿ ಕೊಟ್ರಯ್ಯ ಮಠ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags

Surpur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X