Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ ಜಿಲ್ಲಾ ವಾಣಿಜ್ಯ ಮತ್ತು...

ಯಾದಗಿರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ, ಜಿಲ್ಲಾ ಟ್ಯಾಕ್ಸ್ ಬಾರ್ ಅಸೋಸಿಯೇಷನ್ ಸಭೆ

ನೂತನ ಆದಾಯ ತೆರಿಗೆ ಕಾಯ್ದೆ ಚಾರ್ಟರ್ಡ್ ಅಕೌಂಟೆಂಟರಿಗೆ ಮಾರಕ: ಸಂಸದ ಜಿ ಕುಮಾರ ನಾಯಕ

ವಾರ್ತಾಭಾರತಿವಾರ್ತಾಭಾರತಿ26 July 2025 8:47 PM IST
share
ಯಾದಗಿರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ, ಜಿಲ್ಲಾ ಟ್ಯಾಕ್ಸ್ ಬಾರ್ ಅಸೋಸಿಯೇಷನ್ ಸಭೆ

ಯಾದಗಿರಿ: ಕೇಂದ್ರ ಸರ್ಕಾರ ಪ್ರಸ್ತುತ ಅಸ್ತಿತ್ವದಲ್ಲಿರುವ ಆದಾಯ ತೆರಿಗೆ ಕಾಯ್ದೆಗೆ, ತಿದ್ದುಪಡಿಯ ನೂತನ ಆದಾಯ ತೆರಿಗೆ ಕಾಯ್ದೆ-2025 ಜಾರಿ ಸಿದ್ಧತೆ ನಡೆಸಿದೆ. ಕೇಂದ್ರ ಜಾರಿಗೊಳಿಸಲುದ್ದೇಶಿತ ನೂತನ ಆದಾಯ ತೆರಿಗೆ ಕಾಯ್ದೆ ಚಾರ್ಟರ್ಡ್ ಅಕೌಂಟೆಂಟ್ ಸೇವೆಗೆ ಮಾರಕವಾಗಿದೆ. ಡಿಜಿಟಲ್ ಡಿವೈಸ್ ತಂತ್ರಜ್ಞಾನ ವ್ಯಾಪಾರಿಗಳ ಖಾಸಗಿ ಜೀವನಕ್ಕೆ ಸಂಚಕಾರವಾಗಿದೆ. ಇಂತಹ ಮಹತ್ವದ ಕಾಯ್ದೆ ಜಾರಿ ಪೂರ್ವ ಇದರ ಎಲ್ಲಾ ಅಂಶಗಳ ಬಗ್ಗೆ ನೂತನ ಆದಾಯ ತೆರಿಗೆ ಕಾಯ್ದೆ ಜಾರಿಗೆ ಪೂರ್ವ ಚರ್ಚೆ ಅಗತ್ಯವಾಗಿತ್ತು. ಈ ಹಿಂದೆ ವಿರೋಧ ಪಕ್ಷಗಳ ಒತ್ತಾಯದಿಂದ ವಕ್ಫ್ ತಿದ್ದುಪಡೆ ಕಾಯ್ದೆ ಚರ್ಚೆಗೆ ಅವಕಾಶ ಮಾಡಿಕೊಡಲಾಗಿತ್ತು ಎಂದು ಸಂಸದ ಜಿ ಕುಮಾರ ನಾಯಕ ಹೇಳಿದರು.

ನಗರದ ಎಸ್ ಡಿ ಎನ್ ಹೋಟೆಲ್ ಸಭಾಂಗಣದಲ್ಲಿ ಯಾದಗಿರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ, ಮತ್ತು ಯಾದಗಿರಿ ಚಾರ್ಟೆಡ್ ಅಕೌಂಟ್ ಅಸೋಸಿಯೇಷನ್ ಜಂಟಿಯಾಗಿ ಆಯೋಜಿಸಿದ್ದ ನೂತನ ಆದಾಯ ತೆರಿಗೆ ಕಾಯ್ದೆ 2025ರ ಚರ್ಚೆಯಲ್ಲಿ ರಾಯಚೂರು ಯಾದಗಿರಿ ಲೋಕಸಭಾ ಕ್ಷೇತ್ರದ ಸಂಸದ ಜಿ.ಕುಮಾರ ನಾಯಕರವರು ಪಾಲ್ಗೊಂಡು ಮಾತನಾಡಿದರು.

ನೂತನ ಆದಾಯ ತೆರಿಗೆ ಕಾಯ್ದೆ ಸಾಧಕ-ಬಾಧಕಗಳ ಬಗ್ಗೆ ಚಾರ್ಟರ್ಡ್ ಅಕೌಂಟೆಂಟ್ ಕೂಲಂಕುಶ ಅಧ್ಯಯನ ಮಾಡಿ ಕೇಂದ್ರ ಸರ್ಕಾರದ ಗಮನಕ್ಕೆ ತರುವ ಅಂಶಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದರೆ ಲೋಕಸಭೆ ಅಧಿವೇಶನದಲ್ಲಿ ಈ ಬಗ್ಗೆ ಸರ್ಕಾರದ ಮುಂದೆ ಸವಾಲಿನ ಪ್ರಶ್ನೆ ಮಂಡಿಸಿ ವಿವರಣೆ ಪಡೆಯಲು ಸಾಧ್ಯವಾಗುತ್ತದೆ ಎಂದರು.

ಈ ಚರ್ಚಾ ಸಭೆಯಲ್ಲಿ ಪಾಲ್ಗೊಂಡಿದ್ದ ಅನೇಕ ಚಾರ್ಟರ್ಡ್ ಅಕೌಂಟೆಂಟ್ ಅವರು, ಡಿಜಿಟಲ್ ತಂತ್ರಜ್ಞಾನ ವೈಯಕ್ತಿಕ ಜೀವನಕ್ಕೆ ಬಾಧಕವಾಗದಂತೆ ಗಮನಿಸಬೇಕು ಮತ್ತು ಚಾರ್ಟರ್ಡ್ ಅಕೌಂಟೆಂಟ್ ವೃತ್ತಿ ಜೀವನದ ಮೇಲೆ ಯಾವುದೇ ಪ್ರಹಾರ ಮಾಡದಂತೆ ತಿದ್ದುಪಡಿ ಪರಿಷ್ಕರಿಸಬೇಕು ಎಂದು ಧ್ವನಿ ಎತ್ತಿದರು.

ಸಭೆಯಲ್ಲಿ ಪಾಲ್ಗೊಂಡಿದ್ದ ಅನೇಕರು ಮಹತ್ವದ ಸಲಹೆಗಳನ್ನು ನೀಡಿದರು. ಕೇಂದ್ರ ಸರ್ಕಾರದ ಮುಂದೆ ಮಂಡಿಸುವ 5 ಪ್ರಶ್ನೆಗಳ ಬಗ್ಗೆ ಈ ಸಭೆಯಲ್ಲಿ ಸುದೀರ್ಘ ಚರ್ಚೆ ಮತ್ತು ಅದಕ್ಕೆ ಪೂರಕ ಮಾಹಿತಿ ಒದಗಿಸಲಾಯಿತು.

ಈ ಕಾರ್ಯಕ್ರಮದ ವೇದಿಕೆಯಲ್ಲಿ ಅಧ್ಯಕ್ಷರಾದ ದಿನೇಶ್ ಕುಮಾರ ಜೈನ್, ವೆಂಕಟ ಕೃಷ್ಣ, ವಿವೇಕ್ ಎಂ ಮತ್ತು ಕಾರ್ಯದರ್ಶಿಗಳಾದ ಮಲ್ಲಿಕಾರ್ಜುನ್ ಅಕ್ಕಿ ಹಾಗೂ ಯಾದಗಿರಿ ಜಿಲ್ಲೆಯ YDCCI ಸದಸ್ಯರು, ಚಾರ್ಟೆಡ್ ಅಕೌಂಟೆಂಟ್ಸ್ ಗಳು,ವಾಣಿಜ್ಯ ವ್ಯಾಪಾರ ಮಳಿಗೆಯ ವ್ಯಾಪಾರಸ್ಥರು, ಸಾರ್ವಜನಿಕರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X