Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಅಕ್ರಮ ಮರಳುಗಾರಿಕೆ, ಓವರ್‌ಲೋಡ್...

ಅಕ್ರಮ ಮರಳುಗಾರಿಕೆ, ಓವರ್‌ಲೋಡ್ ತಡೆಯದಿದ್ದರೆ ಟಿಪ್ಪರ್‌ಗಳಿಗೆ ಬೆಂಕಿ : ಶಾಸಕ ಕಂದಕೂರ

ವಾರ್ತಾಭಾರತಿವಾರ್ತಾಭಾರತಿ7 Oct 2026 7:59 PM IST
share
ಅಕ್ರಮ ಮರಳುಗಾರಿಕೆ, ಓವರ್‌ಲೋಡ್ ತಡೆಯದಿದ್ದರೆ ಟಿಪ್ಪರ್‌ಗಳಿಗೆ ಬೆಂಕಿ : ಶಾಸಕ ಕಂದಕೂರ

ಯಾದಗಿರಿ: ಗುರುಮಠಕಲ್ ವಿಧಾನಸಭಾ ಕ್ಷೇತ್ರದಲ್ಲಿ ಅಕ್ರಮ ಮರಳುಗಾರಿಕೆ ತಡೆಯಬೇಕು ಹಾಗೂ ಓವರ್‌ಲೋಡ್ ವಾಹನಗಳ ಸಂಚಾರಕ್ಕೆ ಕೂಡಲೇ ಕಡಿವಾಣ ಹಾಕಬೇಕು. ಅಧಿಕಾರಿಗಳಿಂದ ಸಾಧ್ಯವಾಗದಿದ್ದರೆ ನಾನೇ ಅವುಗಳಿಗೆ ಬೆಂಕಿ ಹಚ್ಚಿ ಸುಡುತ್ತೇನೆ. ಬಳಿಕ ನನ್ನ ವಿರುದ್ಧ ಯಾವುದೇ ಕಾನೂನು ಕ್ರಮ ಕೈಗೊಂಡರೂ ಎದುರಿಸುತ್ತೇನೆ ಎಂದು ಶಾಸಕ ಶರಣಗೌಡ ಕಂದಕೂರ ಗುಡುಗಿದ ಪ್ರಸಂಗ ಬುಧವಾರ ಇಲ್ಲಿನ ಜಿಲ್ಲಾ ಪಂಚಾಯಿತಿ ಸಿಇಒ ಅವರ ಕೊಠಡಿಯಲ್ಲಿ ಜಿಲ್ಲಾಧಿಕಾರಿ ರಾಹುಲ್ ಪಾಂಡ್ವೆ ಅವರ ಎದುರೇ ನಡೆಯಿತು.

ತಮ್ಮ ಕ್ಷೇತ್ರ ಗುರುಮಠಕಲ್‌ನಲ್ಲಿ ನಡೆಯುತ್ತಿರುವ ಅಕ್ರಮ ಮರಳು ಮಾರಾಟ ಹಾಗೂ ಕಡೆಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದ ಕೆಮಿಕಲ್ ಕಂಪನಿಗಳಿಂದ ಸುತ್ತಮುತ್ತಲಿನ ಗ್ರಾಮಗಳ ಕುಡಿಯುವ ನೀರಿನ ಮೇಲೆ ಉಂಟಾಗುತ್ತಿರುವ ಪರಿಣಾಮದ ಕುರಿತು ಸಾಕ್ಷ್ಯ, ದಾಖಲೆಗಳೊಂದಿಗೆ ಆಗಮಿಸಿದ್ದ ಶಾಸಕ ಕಂದಕೂರ, ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆಗಳನ್ನು ಎಳೆಎಳೆಯಾಗಿ ಬಿಚ್ಚಿಟ್ಟರು.

ಜನರ ಸಮಸ್ಯೆಗಳನ್ನು ಬಗೆಹರಿಸಬೇಕಾದ ಜನಪ್ರತಿನಿಧಿಯೇ ಅಧಿಕಾರಿಗಳ ಮುಂದೆ ಸಮಸ್ಯೆಗಳನ್ನು ಹೇಳಿಕೊಂಡು ಕೈಮುಗಿಯುವ ಪರಿಸ್ಥಿತಿ ಬಂದಿರುವುದು ನೋವಿನ ಸಂಗತಿ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಗುರುಮಠಕಲ್, ಸೈದಾಪುರ ಹಾಗೂ ಗ್ರಾಮೀಣ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕ್ಷೇತ್ರದ ಬಹುಪಾಲು ಪ್ರದೇಶ ಬರುತ್ತದೆ. ಈ ಭಾಗದಲ್ಲಿ ಅಕ್ರಮ ಮರಳು ಸಾಗಾಟ ನಿರಂತರವಾಗಿ ನಡೆಯುತ್ತಿದೆ. ಪಾಡಪಲ್ಲಿ, ಕೊಂಕಲ್ ಸೇರಿದಂತೆ ಹಲವು ಕಡೆ ಪ್ರತಿದಿನ 20ರಿಂದ 35 ಟಿಪ್ಪರ್‌ಗಳು ಮರಳು ಸಾಗಿಸುತ್ತಿವೆ. ಕೆಲವು ವಾಹನಗಳಿಗೆ ನಂಬರ್ ಪ್ಲೇಟ್ ಇಲ್ಲದಿರುವುದು ಹಾಗೂ ಓವರ್‌ಲೋಡ್ ವಾಹನಗಳು ಸಂಚರಿಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬರುತ್ತಿವೆ ಎಂದು ಹೇಳಿದರು.

ಕ್ಷೇತ್ರದ ಗ್ರಾಮೀಣ ಪ್ರದೇಶಗಳಲ್ಲಿ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿರುವ ರಸ್ತೆಗಳು ಅಕ್ರಮ ಮರಳು ಸಾಗಾಟದ ಭಾರಿ ವಾಹನಗಳ ಸಂಚಾರದಿಂದ ಹಾಳಾಗುತ್ತಿವೆ. ಪಾಡಪಲ್ಲಿ ಭಾಗದಲ್ಲಿ ಇತ್ತೀಚೆಗಷ್ಟೇ ಡಾಂಬರೀಕರಣಗೊಂಡ ರಸ್ತೆಯ ಮೇಲೆಯೇ ನಿರಂತರವಾಗಿ ಟಿಪ್ಪರ್‌ಗಳು ಸಂಚರಿಸುತ್ತಿವೆ. ದಿನಕ್ಕೆ 20–30ಕ್ಕೂ ಹೆಚ್ಚು ಟಿಪ್ಪರ್‌ಗಳು ಓಡಾಡಿದರೆ ಹೊಸ ರಸ್ತೆ ಎಷ್ಟು ದಿನ ಉಳಿಯಲು ಸಾಧ್ಯ ಎಂದು ಪ್ರಶ್ನಿಸಿದರು.

ಸರ್ಕಾರಿ ಹಣದಿಂದ ರಸ್ತೆ ನಿರ್ಮಿಸಿ, ಅದೇ ರಸ್ತೆಯನ್ನು ಅಕ್ರಮ ಮರಳು ಸಾಗಾಟದಿಂದ ಹಾಳುಮಾಡುವ ಪರಿಸ್ಥಿತಿ ಮುಂದುವರಿದರೆ ಸಾರ್ವಜನಿಕರ ತೆರಿಗೆ ಹಣ ವ್ಯರ್ಥವಾಗುತ್ತದೆ. ರಸ್ತೆ ಹಾಳಾದ ಬಳಿಕ ಮತ್ತೆ ದುರಸ್ತಿಗೆ ಸರ್ಕಾರವೇ ಹಣ ಖರ್ಚು ಮಾಡಬೇಕಾಗುತ್ತದೆ. ಇದನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಬೇಕು ಎಂದರು.

ಅಕ್ರಮ ಮರಳು ಸಾಗಾಟಕ್ಕೆ ನಕಲಿ ರಾಯಲ್ಟಿ ಬಳಸುತ್ತಿರುವ ಬಗ್ಗೆ ಮಾಹಿತಿ ಹಾಗೂ ದಾಖಲೆಗಳನ್ನು ಅಧಿಕಾರಿಗಳಿಗೆ ನೀಡಲಾಗಿದೆ ಎಂದು ಕಂದಕೂರ ಹೇಳಿದರು. ಸೈದಾಪುರದಲ್ಲಿ ಪೊಲೀಸರು ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಪರಿಶೀಲನೆ ನಡೆಸಿದಾಗ ನಕಲಿ ರಾಯಲ್ಟಿ ಕುರಿತು ಮಾಹಿತಿ ಲಭ್ಯವಾಗಿತ್ತು. ಆದರೆ ಈ ಪ್ರಕರಣದ ಹಿಂದೆ ಯಾರಿದ್ದಾರೆ ಎಂಬುದರ ಕುರಿತು ಸಮಗ್ರ ತನಿಖೆ ನಡೆದಿಲ್ಲ ಎಂದು ಆರೋಪಿಸಿದರು.

ನಕಲಿ ರಾಯಲ್ಟಿ ಸಿದ್ಧಪಡಿಸುವವರು, ಮರಳು ಸಾಗಿಸುವವರು, ಖರೀದಿಸುವವರು ಹಾಗೂ ಅಕ್ರಮ ಸಾಗಾಟಕ್ಕೆ ಸಹಕರಿಸುವವರ ಜಾಲವನ್ನು ಪತ್ತೆಹಚ್ಚಬೇಕು. ಕೇವಲ ಟಿಪ್ಪರ್ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿ ಪ್ರಕರಣ ಮುಗಿಸಬಾರದು ಎಂದು ಒತ್ತಾಯಿಸಿದರು.

ಅಕ್ರಮ ಮರಳು ಸಾಗಾಟದ ವಿಚಾರದಲ್ಲಿ ತಮ್ಮ ವಿರುದ್ಧವೂ ಆರೋಪಗಳು ಕೇಳಿಬರುತ್ತಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಕಂದಕೂರ, ‘ನಾನು ಪೊಲೀಸರಿಂದ ಒಂದು ರೂಪಾಯಿಯನ್ನೂ ಲಂಚವಾಗಿ ಪಡೆದಿಲ್ಲ. ಅಕ್ರಮ ಚಟುವಟಿಕೆಗಳಿಂದ ನನಗೆ ಯಾವುದೇ ಸಂಬಂಧವಿಲ್ಲ. ಇದನ್ನು ಸಾಬೀತುಪಡಿಸಲು ಯಾವುದೇ ತನಿಖೆಗೂ ಸಿದ್ಧ’ ಎಂದು ಸ್ಪಷ್ಟಪಡಿಸಿದರು.

ಅಕ್ರಮ ಚಟುವಟಿಕೆಗಳನ್ನು ನಿಲ್ಲಿಸುವಂತೆ ಕೇಳುತ್ತಿರುವ ಜನಪ್ರತಿನಿಧಿಯನ್ನೇ ಜನರು ಪ್ರಶ್ನಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಕ್ಷೇತ್ರದ ಜನರಿಗೆ ನಾನು ಉತ್ತರ ಕೊಡಬೇಕಾಗಿದೆ ಎಂದರು.

ಜಿಲ್ಲೆಯ ಪೊಲೀಸ್ ಠಾಣೆಗಳಲ್ಲಿ ಬಡವರು ಯಾವುದೇ ಪ್ರಭಾವ, ಶಿಫಾರಸು ಅಥವಾ ಮಧ್ಯವರ್ತಿಗಳಿಲ್ಲದೆ ನ್ಯಾಯ ಪಡೆಯುವಂತಾಗಬೇಕು. ಪೊಲೀಸ್ ಠಾಣೆಗೆ ಬಂದ ಬಡ ವ್ಯಕ್ತಿ ತನ್ನ ಸಮಸ್ಯೆಗೆ ನ್ಯಾಯ ಪಡೆಯಲು ರಾಜಕೀಯ ನಾಯಕರ ದೂರವಾಣಿ, ಪ್ರಭಾವಿ ವ್ಯಕ್ತಿಗಳ ಶಿಫಾರಸು ಅಥವಾ ಸಂಘಟನೆಗಳ ಹೋರಾಟದ ಅವಶ್ಯಕತೆ ಇರಬಾರದು ಎಂದು ಕಂದಕೂರ ಹೇಳಿದರು.

ದುಡ್ಡು ಕೊಡದೇ ಯಾವುದೇ ಕೆಲಸಗಳು ಆಗುತ್ತಿಲ್ಲ ಎಂಬ ಭಾವನೆ ಜನರಲ್ಲಿ ಮೂಡಬಾರದು. ಪೊಲೀಸ್ ಇಲಾಖೆ ಜನರ ವಿಶ್ವಾಸ ಗಳಿಸಬೇಕು. ಯಾವುದೇ ಅಕ್ರಮ ಚಟುವಟಿಕೆಗಳ ಬಗ್ಗೆ ಮಾಹಿತಿ ಬಂದಾಗ ಪಕ್ಷಪಾತವಿಲ್ಲದೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು ಎಂದರು.

ಮರಳು ಸಾಗಾಟ ತಡೆಯುವಲ್ಲಿ ಅಧಿಕಾರಿಗಳು ವಿಫಲವಾದರೆ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಬಹುದು. ಕ್ಷೇತ್ರದಲ್ಲಿ ಅಕ್ರಮ ಚಟುವಟಿಕೆಗಳನ್ನು ನಿಲ್ಲಿಸುವಂತೆ ತಾವು ಶಾಂತಿಯುತವಾಗಿ ಹಾಗೂ ಗೌರವದಿಂದ ಮನವಿ ಮಾಡುತ್ತಿದ್ದೇವೆ. ಅಧಿಕಾರಿಗಳು ಈ ಮನವಿಯನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಅಕ್ರಮ ಮರಳು ಸಾಗಾಟ ತಡೆಯುವ ಜವಾಬ್ದಾರಿ ಪೊಲೀಸ್, ಕಂದಾಯ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆಗಳ ಮೇಲಿದೆ. ಪರಸ್ಪರ ಆರೋಪ ಮಾಡುವ ಬದಲು ಜಂಟಿ ಕಾರ್ಯಾಚರಣೆ ನಡೆಸಿ ಅಕ್ರಮದ ಮೂಲವನ್ನು ಪತ್ತೆಹಚ್ಚಬೇಕು ಎಂದು ಆಗ್ರಹಿಸಿದರು.

ಕಡೆಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದ ಕೆಮಿಕಲ್ ಕಂಪನಿಗಳಿಂದ ಹೊರಬರುವ ತ್ಯಾಜ್ಯದಿಂದ ಸುತ್ತಮುತ್ತಲಿನ ಗ್ರಾಮಗಳ ನೀರಿನ ಗುಣಮಟ್ಟದ ಮೇಲೆ ಪರಿಣಾಮ ಬೀರುತ್ತಿದೆ ಎಂಬ ಆರೋಪಗಳಿವೆ. ಕೆಲವು ಗ್ರಾಮಗಳಲ್ಲಿ ಬೋರ್‌ವೆಲ್‌ಗಳಿಂದ ಬರುತ್ತಿರುವ ನೀರಿನ ಬಗ್ಗೆ ಗ್ರಾಮಸ್ಥರು ಆತಂಕ ವ್ಯಕ್ತಪಡಿಸುತ್ತಿದ್ದಾರೆ.

ಶೆಟ್ಟಳ್ಳಿ ಸೇರಿದಂತೆ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಜನರು ಕುಡಿಯುವ ನೀರಿನ ಸಮಸ್ಯೆ ಹೇಳಿಕೊಂಡಿದ್ದಾರೆ. ಬೋರ್‌ವೆಲ್ ಕೊರೆದಾಗಲೂ ನೀರಿನ ಗುಣಮಟ್ಟದ ಬಗ್ಗೆ ಅನುಮಾನ ಮೂಡುತ್ತಿದೆ. ಜನರು ಆ ನೀರು ಕುಡಿದರೆ ಆರೋಗ್ಯ ಸಮಸ್ಯೆಯಾಗಬಹುದು ಎಂಬ ಆತಂಕ ವ್ಯಕ್ತಪಡಿಸುತ್ತಿದ್ದಾರೆ ಎಂದು ಕಂದಕೂರ ಹೇಳಿದರು.

ಕೈಗಾರಿಕೆಗಳಲ್ಲಿ ಉತ್ಪತ್ತಿಯಾಗುವ ಕೆಮಿಕಲ್ ತ್ಯಾಜ್ಯವನ್ನು ಎಲ್ಲಿ ಸಂಗ್ರಹಿಸಲಾಗುತ್ತದೆ, ಯಾವ ರೀತಿಯಲ್ಲಿ ಸಂಸ್ಕರಿಸಲಾಗುತ್ತದೆ ಹಾಗೂ ಅಂತಿಮವಾಗಿ ಎಲ್ಲಿಗೆ ವಿಲೇವಾರಿ ಮಾಡಲಾಗುತ್ತದೆ ಎಂಬುದರ ಬಗ್ಗೆ ಅಧಿಕಾರಿಗಳು ಪರಿಶೀಲಿಸಬೇಕು. ಸಾಮಾನ್ಯ ತ್ಯಾಜ್ಯ ಸಂಸ್ಕರಣಾ ಘಟಕಗಳೊಂದಿಗೆ ಕಂಪನಿಗಳು ಅಗತ್ಯ ಒಪ್ಪಂದ ಮಾಡಿಕೊಂಡಿವೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಹೇಳಿದರು.

ಮಾಲಿನ್ಯ ನಿಯಂತ್ರಣ ಮಂಡಳಿ ನೀಡಿರುವ ನೋಟಿಸ್‌ಗಳು, ಕಂಪನಿಗಳ ಅನುಮತಿಗಳು, ತ್ಯಾಜ್ಯ ನಿರ್ವಹಣಾ ವ್ಯವಸ್ಥೆ ಹಾಗೂ ನೀರಿನ ಮಾದರಿ ಪರೀಕ್ಷೆಯ ವರದಿಗಳನ್ನು ಪರಿಶೀಲಿಸಿ ಸಾರ್ವಜನಿಕರ ಮುಂದಿಡಬೇಕು ಎಂದು ಆಗ್ರಹಿಸಿದರು.

ಕೈಗಾರಿಕಾ ಪ್ರದೇಶದ ಕಂಪನಿಯೊಂದರಲ್ಲಿ ಮೂವರು ಮೃತಪಟ್ಟ ಘಟನೆ ಕುರಿತು ಕೂಡ ಕಂದಕೂರ ಪ್ರಶ್ನೆ ಎತ್ತಿದರು. ಘಟನೆಯ ನಿಖರ ಕಾರಣ ಪತ್ತೆಹಚ್ಚಬೇಕು. ಕಂಪನಿಯ ನಿರ್ವಹಣಾ ವ್ಯವಸ್ಥೆಯಲ್ಲಿ ಯಾರಿಗೆ ಯಾವ ಜವಾಬ್ದಾರಿ ಇತ್ತು ಎಂಬುದನ್ನು ಪರಿಶೀಲಿಸಬೇಕು. ಸುರಕ್ಷತಾ ನಿಯಮ ಉಲ್ಲಂಘನೆಯಾಗಿದ್ದರೆ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಯಾರ ಮೇಲಾದರೂ ಪ್ರಕರಣ ದಾಖಲಿಸಬೇಕು ಎನ್ನುವುದು ತಮ್ಮ ಉದ್ದೇಶವಲ್ಲ. ಆದರೆ ತಪ್ಪಿತಸ್ಥರು ತಪ್ಪಿಸಿಕೊಂಡರೆ ಇಂತಹ ಘಟನೆಗಳು ಮತ್ತೆ ನಡೆಯುವ ಅಪಾಯವಿದೆ. ಜನರ ಸುರಕ್ಷತೆ ಮುಖ್ಯ ಎಂದು ಹೇಳಿದರು.

ಕೆಮಿಕಲ್ ಕೈಗಾರಿಕೆಗಳಿಂದ ನೀರಿನ ಗುಣಮಟ್ಟದ ಮೇಲೆ ಪರಿಣಾಮ ಬೀರುತ್ತಿರುವ ಕುರಿತು ಸ್ಪಷ್ಟತೆ ಬರುವವರೆಗೆ ಬಾಧಿತ ಗ್ರಾಮಗಳಿಗೆ ಸುರಕ್ಷಿತ ಕುಡಿಯುವ ನೀರು ಪೂರೈಸಬೇಕು. ಆರ್‌ಡಬ್ಲ್ಯುಎಸ್, ಕೆಕೆಆರ್‌ಡಿಬಿ, ಕೆಐಡಿಬಿ ಹಾಗೂ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ ಶಾಶ್ವತ ಕುಡಿಯುವ ನೀರಿನ ಯೋಜನೆ ರೂಪಿಸಬೇಕು ಎಂದು ಮನವಿ ಮಾಡಿದರು.

ಭೀಮಾ ನದಿಯಿಂದ ಕೈಗಾರಿಕಾ ಪ್ರದೇಶಕ್ಕೆ ತೆರಳುವ ಪೈಪ್‌ಲೈನ್‌ನಿಂದ ಅಗತ್ಯವಿರುವ ಕಡೆ ಕುಡಿಯುವ ನೀರಿನ ಸಂಪರ್ಕ ಕಲ್ಪಿಸುವ ಸಾಧ್ಯತೆಯನ್ನು ಪರಿಶೀಲಿಸಬೇಕು. ಜನರಿಗೆ ಪರ್ಯಾಯ ನೀರು ಒದಗಿಸುವ ಜವಾಬ್ದಾರಿಯನ್ನು ಸರ್ಕಾರ ಹಾಗೂ ಸಂಬಂಧಪಟ್ಟ ಕೈಗಾರಿಕೆಗಳು ವಹಿಸಬೇಕು ಎಂದರು.

ಕೈಗಾರಿಕೆಗಳು ಬೇಕು. ಅಭಿವೃದ್ಧಿಯೂ ಬೇಕು. ಆದರೆ ಕೈಗಾರಿಕೆಗಳ ಹೆಸರಿನಲ್ಲಿ ಜನರ ಆರೋಗ್ಯ ಹಾಗೂ ಕುಡಿಯುವ ನೀರಿನೊಂದಿಗೆ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ. ಇಂದಿನ ಸಮಸ್ಯೆಯನ್ನು ನಿರ್ಲಕ್ಷಿಸಿದರೆ ಮುಂದಿನ ಪೀಳಿಗೆಗೆ ನಾವೇ ಅನ್ಯಾಯ ಮಾಡಿದಂತಾಗುತ್ತದೆ. ಸರ್ಕಾರ ಮತ್ತು ಜನಪ್ರತಿನಿಧಿಗಳೇ ಜನರಿಗೆ ವಿಷ ನೀಡಿದಂತಾಗುವ ಪರಿಸ್ಥಿತಿ ಬರಬಾರದು ಎಂದು ಕಂದಕೂರ ಹೇಳಿದರು.

ಮರಳು ದಂಧೆ, ಓವರ್‌ಲೋಡ್ ವಾಹನಗಳು ಹಾಗೂ ಕೈಗಾರಿಕಾ ಮಾಲಿನ್ಯದ ಕುರಿತು ಜಿಲ್ಲಾಡಳಿತ ತಕ್ಷಣ ಸಮಗ್ರ ಪರಿಶೀಲನೆ ನಡೆಸಬೇಕು. ತಪ್ಪಿತಸ್ಥರು ಯಾರೇ ಆಗಿದ್ದರೂ ಕಾನೂನು ಕ್ರಮ ಕೈಗೊಳ್ಳಬೇಕು. ಜತೆಗೆ ಬಾಧಿತ ಗ್ರಾಮಗಳಿಗೆ ಸುರಕ್ಷಿತ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವ ಮೂಲಕ ಜನರ ಆತಂಕ ನಿವಾರಿಸಬೇಕು ಎಂದು ಆಗ್ರಹಿಸಿದರು.

ಗುರುಮಠಕಲ್ ಮತಕ್ಷೇತ್ರ ಸೇರಿದಂತೆ ಇಡೀ ಜಿಲ್ಲೆಯಲ್ಲಿ ಅಕ್ರಮ ಮರಳು ದಂಧೆ ಎಗ್ಗಿಲ್ಲದೆ ನಡೆದಿದೆ. ಈ ಕುರಿತು ಸಾಕ್ಷ್ಯ ಸಮೇತ ಮಾಹಿತಿ ನೀಡಿ ಮಾತನಾಡಿದರೂ ಎಸ್‌ಪಿ ಅವರು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಕಂದಕೂರ ಅಸಮಾಧಾನ ವ್ಯಕ್ತಪಡಿಸಿದರು.

‘ಅವರವರ ಜಾಗದಲ್ಲಿ ಏನು ಬೇಕಾದರೂ ಮಾಡಿಕೊಳ್ಳಿ, ನನ್ನ ತಂಟೆಗೆ ಮಾತ್ರ ಬರಬೇಡಿ’ ಎಂದು ಹೇಳುವ ಧಾಟಿಯಲ್ಲಿ ಅವರ ಕೆಲಸದ ವರ್ತನೆ ಇದೆ. ಇದು ಅವರ ಸ್ಥಾನಕ್ಕೆ ಶೋಭೆ ತರುವುದಿಲ್ಲ ಎಂದು ಅವರು ಹೇಳಿದರು.

ಡಿಸಿ ಕಚೇರಿ ಮುಂದಿನ ರಸ್ತೆಯಲ್ಲಿ ನಂಬರ್ ಪ್ಲೇಟ್ ಇಲ್ಲದ ಅಕ್ರಮ ಮರಳು ಸಾಗಿಸುವ ಟಿಪ್ಪರ್ ತೆರಳುತ್ತಿರುವ ಫೋಟೋವನ್ನು ಜಿಲ್ಲಾಧಿಕಾರಿ ರಾಹುಲ್ ಪಾಂಡ್ವೆ ಅವರಿಗೆ ತೋರಿಸಿದಾಗ ಅವರು ಕೆಲಕಾಲ ಗಲಿಬಿಲಿಗೊಂಡರು ಎಂದು ಕಂದಕೂರ ತಿಳಿಸಿದರು.

ಶಾಸಕ ಕಂದಕೂರ ಅವರು ಪ್ರಸ್ತಾಪಿಸಿದ ಮಹತ್ವದ ಬೇಡಿಕೆಗಳನ್ನು ಶಾಂತಚಿತ್ತದಿಂದ ಆಲಿಸಿದ ಜಿಲ್ಲಾಧಿಕಾರಿ ರಾಹುಲ್ ಪಾಂಡ್ವೆ, ಎಲ್ಲ ಬೇಡಿಕೆಗಳ ಕುರಿತು ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಎಡಿಸಿ ರಮೇಶ ಕೋಲಾರ ಉಪಸ್ಥಿತರಿದ್ದರು.

Tags

KandakurTipper
share
ವಾರ್ತಾಭಾರತಿ
ವಾರ್ತಾಭಾರತಿ
Next Story
X