ಕರವೇ ಹುಣಸಗಿ ತಾಲೂಕು ಪ್ರಧಾನ ಕಾರ್ಯದರ್ಶಿಯಾಗಿ ಉಸ್ಮಾನ ಪಟೇಲ ಬಿರದಾರ ಆಯ್ಕೆ

ಹುಣಸಗಿ: ಕರ್ನಾಟಕ ರಕ್ಷಣಾ ವೇದಿಕೆಯ ಹುಣಸಗಿ ತಾಲೂಕು ಘಟಕದ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಉಸ್ಮಾನ ಪಟೇಲ ಬಿರದಾರ ಅವರನ್ನು ಆಯ್ಕೆ ಮಾಡಲಾಗಿದೆ.
ಜಿಲ್ಲಾಧ್ಯಕ್ಷ ಟಿ.ಎನ್. ಭೀಮುನಾಯಕ ಅವರ ನೇತೃತ್ವದಲ್ಲಿ, ತಾಲೂಕು ಅಧ್ಯಕ್ಷ ಬಸವರಾಜ ಚನ್ನೂರ ಅವರ ಆದೇಶದ ಮೇರೆಗೆ ಕರವೇ ಕಾರ್ಯಕರ್ತರ ಸಮ್ಮುಖದಲ್ಲಿ ಉಸ್ಮಾನ ಪಟೇಲ ಬಿರದಾರ ಅವರಿಗೆ ಪ್ರಧಾನ ಕಾರ್ಯದರ್ಶಿಯ ಜವಾಬ್ದಾರಿ ವಹಿಸಲಾಯಿತು.
ಈ ಆಯ್ಕೆಯ ಮೂಲಕ ತಾಲೂಕು ಮಟ್ಟದಲ್ಲಿ ಸಂಘಟನೆಯ ಚಟುವಟಿಕೆಗಳನ್ನು ಬಲಪಡಿಸುವುದರ ಜೊತೆಗೆ ಕನ್ನಡ ನಾಡು, ನುಡಿ, ನೆಲ ಮತ್ತು ಜಲದ ರಕ್ಷಣೆಗೆ ಶ್ರಮಿಸುವ ಜವಾಬ್ದಾರಿ ಅವರಿಗೆ ದೊರೆತಿದೆ.
ನೂತನ ಪ್ರಧಾನ ಕಾರ್ಯದರ್ಶಿ ಉಸ್ಮಾನ ಪಟೇಲ ಬಿರದಾರ ಅವರಿಗೆ ಕರವೇ ಕಾರ್ಯಕರ್ತರು ಶುಭಾಶಯಗಳನ್ನು ಕೋರಿದ್ದಾರೆ.
Next Story




