Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ವಡಗೇರಾ | ಕೃಷ್ಣವೇಣಿ ಸಂಗಮದ ಸಂಗಮೇಶ್ವರ...

ವಡಗೇರಾ | ಕೃಷ್ಣವೇಣಿ ಸಂಗಮದ ಸಂಗಮೇಶ್ವರ ದೇವಸ್ಥಾನದಲ್ಲಿ ಕುಡಿಯುವ ನೀರಿನ ಸಮಸ್ಯೆ : ಮಂಜುನಾಥ ರೆಡ್ಡಿ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ12 Oct 2026 7:57 PM IST
share
ವಡಗೇರಾ | ಕೃಷ್ಣವೇಣಿ ಸಂಗಮದ ಸಂಗಮೇಶ್ವರ ದೇವಸ್ಥಾನದಲ್ಲಿ ಕುಡಿಯುವ ನೀರಿನ ಸಮಸ್ಯೆ : ಮಂಜುನಾಥ ರೆಡ್ಡಿ ಆಕ್ರೋಶ

ವಡಗೇರಾ: ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಹಾಗೂ ಪ್ರವಾಸಿ ತಾಣವಾದ ಕೃಷ್ಣವೇಣಿ ಸಂಗಮದ ಸಂಗಮೇಶ್ವರ ದೇವಸ್ಥಾನದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದ್ದು, ದೇವಸ್ಥಾನಕ್ಕೆ ಆಗಮಿಸುವ ಭಕ್ತರು ಪರದಾಡುವಂತಾಗಿದೆ. ಬೋರ್‌ವೆಲ್ ಮತ್ತು ಕುಡಿಯುವ ನೀರಿನ ಶುದ್ಧೀಕರಣ ಘಟಕ ಕೆಟ್ಟು ಹಲವು ದಿನಗಳು ಕಳೆದಿದ್ದರೂ ದುರಸ್ತಿಗೆ ಕ್ರಮ ಕೈಗೊಳ್ಳದಿರುವುದಕ್ಕೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಕೋಡಿಹಳ್ಳಿ ಬಣ) ಜಿಲ್ಲಾ ಕಾರ್ಯಾಧ್ಯಕ್ಷ ಮಂಜುನಾಥ ರೆಡ್ಡಿ ಚೆನ್ನೂರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಸುಮಾರು ಎರಡು ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಸಂಗಮೇಶ್ವರ ದೇವಸ್ಥಾನಕ್ಕೆ ಕರ್ನಾಟಕ ಸೇರಿದಂತೆ ತೆಲಂಗಾಣ ಮತ್ತು ಆಂಧ್ರಪ್ರದೇಶದ ವಿವಿಧ ಭಾಗಗಳಿಂದ ಭಕ್ತರು ಆಗಮಿಸುತ್ತಾರೆ. ವಿಶೇಷವಾಗಿ ಅಮಾವಾಸ್ಯೆ ಸೇರಿದಂತೆ ವಿವಿಧ ಧಾರ್ಮಿಕ ದಿನಗಳಲ್ಲಿ ನೂರಾರು ಭಕ್ತರು ಸಂಗಮಕ್ಕೆ ಭೇಟಿ ನೀಡುತ್ತಾರೆ. ಆದರೆ, ಇಲ್ಲಿನ ಕುಡಿಯುವ ನೀರಿನ ಸಮಸ್ಯೆಯಿಂದ ಭಕ್ತರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ದೇವಸ್ಥಾನದಲ್ಲಿ ಕುಡಿಯುವ ನೀರಿನ ಸೌಲಭ್ಯ ಇಲ್ಲದ ಕಾರಣ ಭಕ್ತರು ನದಿಯ ನೀರನ್ನೇ ಅವಲಂಬಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ನದಿ ನೀರು ಕುಡಿಯಲು ಯೋಗ್ಯವಲ್ಲದ ಕಾರಣ ಕೆಲವರು ಮನೆಯಿಂದಲೇ ಕುಡಿಯುವ ನೀರನ್ನು ತರುವಂತಾಗಿದೆ. ನೀರಿನ ಸಮಸ್ಯೆಯಿಂದ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರ ಸಂಖ್ಯೆಯೂ ಕಡಿಮೆಯಾಗುತ್ತಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಕುಡಿಯುವ ನೀರಿನ ಸಮಸ್ಯೆ ಕುರಿತು ಗೋನಾಲ ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾಗಿರುವ ಕೃಷ್ಣವೇಣಿ ಸಂಗಮಕ್ಕೆ ಅಗತ್ಯ ಮೂಲಸೌಕರ್ಯ ಕಲ್ಪಿಸುವಲ್ಲಿ ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಬಾರದು ಎಂದು ಮಂಜುನಾಥ ರೆಡ್ಡಿ ಒತ್ತಾಯಿಸಿದ್ದಾರೆ.

ಜಿಲ್ಲಾಡಳಿತ ಕೂಡಲೇ ಮಧ್ಯಪ್ರವೇಶಿಸಿ ಕೆಟ್ಟು ನಿಂತಿರುವ ಬೋರ್‌ವೆಲ್ ದುರಸ್ತಿಗೊಳಿಸಬೇಕು. ಕುಡಿಯುವ ನೀರಿನ ಶುದ್ಧೀಕರಣ ಘಟಕವನ್ನು ಸರಿಪಡಿಸಿ, ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ ಶುದ್ಧ ಕುಡಿಯುವ ನೀರು ಒದಗಿಸಬೇಕು. ಈ ಸಮಸ್ಯೆಯನ್ನು ತ್ವರಿತವಾಗಿ ಪರಿಹರಿಸದಿದ್ದರೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಉಗ್ರ ಹೋರಾಟ ನಡೆಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

Tags

templedrinking waterVadagera
share
ವಾರ್ತಾಭಾರತಿ
ವಾರ್ತಾಭಾರತಿ
Next Story
X