Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ವಡಿಗೇರಾ | ಗ್ರಾಮೀಣ ಕೂಲಿ ಕಾರ್ಮಿಕರಿಗೆ...

ವಡಿಗೇರಾ | ಗ್ರಾಮೀಣ ಕೂಲಿ ಕಾರ್ಮಿಕರಿಗೆ ನಿರಂತರ ಉದ್ಯೋಗ ಒದಗಿಸಲು ಆದ್ಯತೆ ನೀಡಿ: ಕಿರಣಬಾಬು

ವಾರ್ತಾಭಾರತಿವಾರ್ತಾಭಾರತಿ21 July 2026 8:27 PM IST
share
ವಡಿಗೇರಾ | ಗ್ರಾಮೀಣ ಕೂಲಿ ಕಾರ್ಮಿಕರಿಗೆ ನಿರಂತರ ಉದ್ಯೋಗ ಒದಗಿಸಲು ಆದ್ಯತೆ ನೀಡಿ: ಕಿರಣಬಾಬು

ವಡಿಗೇರಾ: ಗ್ರಾಮೀಣ ಕೂಲಿ ಕಾರ್ಮಿಕರಿಗೆ ನಿರಂತರ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಜಾರಿಗೊಂಡಿರುವ ವಿಕಸಿತ ಭಾರತ ಫಾರ್ ಗ್ಯಾರಂಟಿ ರೋಜಗಾರ್ ಆ್ಯಂಡ್ ಅಜೀವಿಕ ಮಿಷನ್ (ವಿ.ಬಿ.-ಜಿ ರಾಮ್-ಜಿ) ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಗ್ರಾಮೀಣರಿಗೆ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ ನೀಡಬೇಕು ಎಂದು ಸಹಾಯಕ ನಿರ್ದೇಶಕ (ಗ್ರಾಮೀಣ ಉದ್ಯೋಗ) ಕಿರಣಬಾಬು ಹೇಳಿದರು.

ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜುಲೈ 1ರಿಂದ ಯೋಜನೆ ಜಾರಿಯಾಗಿದ್ದು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು (ಪಿಡಿಒ), ತಾಂತ್ರಿಕ ಸಹಾಯಕರು ಹಾಗೂ ಸಿಬ್ಬಂದಿ ಯೋಜನೆಯ ಯಶಸ್ವಿ ಅನುಷ್ಠಾನಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಸೂಚಿಸಿದರು.

ಈ ಯೋಜನೆಯಡಿ ದಿನಗೂಲಿ ಮೊತ್ತವನ್ನು 382 ರೂ. ಗೆ ಹಾಗೂ ವಾರ್ಷಿಕ ಮಾನವ ದಿನಗಳನ್ನು 125ಕ್ಕೆ ಹೆಚ್ಚಿಸಲಾಗಿದೆ. ಜೊತೆಗೆ 318 ವಿಧದ ಕಾಮಗಾರಿಗಳನ್ನು ಯೋಜನೆಯಡಿ ಸೇರಿಸಲಾಗಿದ್ದು, ಗ್ರಾಮೀಣ ಭಾಗದ ಜನರಿಗೆ ಅನುಕೂಲವಾಗುವ ಕಾಮಗಾರಿಗಳನ್ನು ತ್ವರಿತವಾಗಿ ಆರಂಭಿಸಬೇಕು ಎಂದು ಹೇಳಿದರು.

ನಾಮಕವಸ್ತುವಿನಂತೆ ಕೆಲಸ ಮಾಡದೇ, ಪ್ರತಿಯೊಬ್ಬ ಅಧಿಕಾರಿಯೂ ತನ್ನ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಇ-ಕೆವೈಸಿಯನ್ನು ಶೇ.100ರಷ್ಟು ಪೂರ್ಣಗೊಳಿಸುವುದು, ಪ್ರತಿದಿನ ಎನ್‌ಎಂಆರ್ ದಾಖಲಿಸುವುದು, ಕ್ರಿಯಾ ಯೋಜನೆ ರೂಪಿಸಿ ಕೆಲಸದ ಹಂಚಿಕೆ ಮಾಡುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.

ಮಳೆಯ ಕೊರತೆಯಿಂದ ಗ್ರಾಮೀಣರು ವಲಸೆ ಹೋಗದಂತೆ ತಡೆಯಲು ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಉದ್ಯೋಗ ಖಾತರಿ ಕಾಮಗಾರಿಗಳನ್ನು ಆರಂಭಿಸಬೇಕು. ನಿಯಮಾನುಸಾರ ಕಾರ್ಯನಿರ್ವಹಿಸದ ಅಧಿಕಾರಿಗಳ ವಿರುದ್ಧ ವರದಿ ಸಲ್ಲಿಸಲಾಗುವುದು ಎಂದು ಎಚ್ಚರಿಸಿದರು.

ಗ್ರಾಮೀಣ ಪ್ರದೇಶಗಳಲ್ಲಿ ಯೋಜನೆಯ ಕುರಿತು ವ್ಯಾಪಕ ಜಾಗೃತಿ ಮೂಡಿಸಿ, ಜನರಿಂದ ಕೆಲಸಕ್ಕೆ ಬೇಡಿಕೆ ಅರ್ಜಿಗಳನ್ನು ಸ್ವೀಕರಿಸುವಂತೆ ಗ್ರಾಮ ಕಾಯಕ ಮಿತ್ರರು ಹಾಗೂ ಬಿಎಫ್‌ಟಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಟಿಸಿ ರವೀಂದ್ರ ದೇಸಾಯಿ, ಟಿಐಇಸಿ ದುರ್ಗೇಶ್, ಟಿಎಂಐಎಸ್ ಮಲ್ಲಿಕಾರ್ಜುನ, ಎಡಿಎಮ್ ದೇವಮ್ಮ, ತಾಂತ್ರಿಕ ಸಹಾಯಕರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

Tags

Vadigera taluk
share
ವಾರ್ತಾಭಾರತಿ
ವಾರ್ತಾಭಾರತಿ
Next Story
X