Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ವಡಿಗೇರಾ | ಗ್ರಾಮೀಣರಿಗೆ ನಿರಂತರ ಕೂಲಿ...

ವಡಿಗೇರಾ | ಗ್ರಾಮೀಣರಿಗೆ ನಿರಂತರ ಕೂಲಿ ಕೆಲಸ, ಗುಣಮಟ್ಟದ ಆಸ್ತಿ ಸೃಜನೆಗೆ ಆದ್ಯತೆ: ಸಿ.ಬಿ.ದೇವರಮನೆ

ವಾರ್ತಾಭಾರತಿವಾರ್ತಾಭಾರತಿ3 Sept 2026 7:29 PM IST
share
ವಡಿಗೇರಾ | ಗ್ರಾಮೀಣರಿಗೆ ನಿರಂತರ ಕೂಲಿ ಕೆಲಸ, ಗುಣಮಟ್ಟದ ಆಸ್ತಿ ಸೃಜನೆಗೆ ಆದ್ಯತೆ: ಸಿ.ಬಿ.ದೇವರಮನೆ

ವಡಿಗೇರಾ: ಗ್ರಾಮೀಣ ಭಾಗದಲ್ಲಿ ನಿರಂತರ ಅಕುಶಲ ಕೂಲಿ ಕೆಲಸ ಒದಗಿಸುವ ಉದ್ದೇಶದಿಂದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್‌ಗಾರ್ ಆ್ಯಂಡ್ ಅಜೀವಿಕ ಮಿಷನ್ (ವಿಬಿ-ಜಿ ರಾಮ್-ಜಿ) ಯೋಜನೆಯಡಿ ಸಾವಿರಾರು ಜನರು ಕೂಲಿ ಕೆಲಸ ಮಾಡುತ್ತಿದ್ದಾರೆ. ಸರ್ಕಾರ ನಿಗದಿಪಡಿಸಿರುವ ಕಾಮಗಾರಿಗಳಲ್ಲಿ ಗುಣಮಟ್ಟದ ಆಸ್ತಿ ಸೃಜನೆಗೆ ಎಲ್ಲರೂ ಸಹಕರಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಸಿ.ಬಿ. ದೇವರಮನೆ ಹೇಳಿದರು.

ತಾಲೂಕಿನ ತುಮಕೂರು, ಬಿಳ್ಹಾರ ಹಾಗೂ ಐಕೂರು ಗ್ರಾಮಗಳ ಹೊರವಲಯದಲ್ಲಿ ವಿಬಿ-ಜಿ ರಾಮ್-ಜಿ ಯೋಜನೆಯಡಿ ಕೈಗೊಂಡಿರುವ ಗೋ ಕಟ್ಟೆ ಹಾಗೂ ಟ್ರಂಚೆಸ್ ಕಾಮಗಾರಿ ಸ್ಥಳಗಳಿಗೆ ಭೇಟಿ ನೀಡಿದ ಅವರು, ಅನುಮೋದಿತ ಕಾಮಗಾರಿಗಳ ತಾಂತ್ರಿಕ ಮಾನದಂಡಗಳನ್ನು ಪರಿಶೀಲಿಸಿದರು. ನಿಯಮಾನುಸಾರ ಕಾಮಗಾರಿಯ ಗುಣಮಟ್ಟ, ಅಳತೆ ಹಾಗೂ ಕಾರ್ಮಿಕರ ಹಾಜರಾತಿಯನ್ನು ಪರಿಶೀಲಿಸಿ, ಕಾರ್ಮಿಕರು ನಿಗದಿತ ಮಾಪನದಂತೆ ಕೆಲಸ ನಿರ್ವಹಿಸುವ ಮೂಲಕ ಕಾಮಗಾರಿಯ ಭೌತಿಕ ಗುಣಮಟ್ಟ ಕಾಪಾಡಬೇಕು ಎಂದು ಸೂಚಿಸಿದರು.

ಈಗಾಗಲೇ ಬರ ಪರಿಸ್ಥಿತಿ ಆವರಿಸಿರುವ ಹಿನ್ನೆಲೆಯಲ್ಲಿ ಗ್ರಾಮೀಣರಿಗೆ ನಿರಂತರ ಕೆಲಸ ಒದಗಿಸಲು ಇಲಾಖೆ ಸಿದ್ಧವಿದೆ. ಕಾರ್ಮಿಕರು ನಿರ್ಲಕ್ಷ್ಯ ವಹಿಸದೆ ನಿಗದಿತ ಸಮಯಕ್ಕೆ ಬೆಳಿಗ್ಗೆ ಕೆಲಸಕ್ಕೆ ಹಾಜರಾಗಿ, ತಾಂತ್ರಿಕ ಮಂಜೂರಾತಿಯಂತೆ ಕಾಮಗಾರಿ ನಿರ್ವಹಿಸಬೇಕು ಎಂದರು.

ಬಿಳ್ಹಾರ ಗ್ರಾಮದ ಅರಣ್ಯ ಪ್ರದೇಶದಲ್ಲಿ ನಡೆಯುತ್ತಿದ್ದ ಟ್ರಂಚೆಸ್ ಕಾಮಗಾರಿಯ ಸ್ಥಳಕ್ಕೆ ಭೇಟಿ ನೀಡಿದ ಅವರು, ಜಾಬ್ ಕಾರ್ಡ್ ಮೇಳ ಅಭಿಯಾನದಲ್ಲೂ ಭಾಗವಹಿಸಿದರು. ಆ.15ರಿಂದ ಸೆ.15ರವರೆಗೆ ನಡೆಯುತ್ತಿರುವ ಜಾಬ್ ಕಾರ್ಡ್ ಮೇಳದ ಸದುಪಯೋಗವನ್ನು ಗ್ರಾಮೀಣರು ಪಡೆದುಕೊಳ್ಳಬೇಕು. ಇದುವರೆಗೆ ಜಾಬ್ ಕಾರ್ಡ್ ಹೊಂದಿರದ ಕುಟುಂಬಗಳು ಅಗತ್ಯ ದಾಖಲೆಗಳೊಂದಿಗೆ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಹೊಸ ಜಾಬ್ ಕಾರ್ಡ್ ಪಡೆಯಬೇಕು. ಜಾಬ್ ಕಾರ್ಡ್ ಹೊಂದಿದ್ದರೂ ಕೆಲಸಕ್ಕೆ ಬಾರದ ಕಾರ್ಮಿಕರು ಸಹ ವಿಬಿ-ಜಿ ರಾಮ್-ಜಿ ಯೋಜನೆಯಡಿ ಕೆಲಸದಲ್ಲಿ ಭಾಗವಹಿಸಬೇಕು ಎಂದು ತಿಳಿಸಿದರು.

ಈಗಾಗಲೇ ಕೆಲಸಕ್ಕೆ ಬರುತ್ತಿರುವ ಕಾರ್ಮಿಕರು ನಿರಂತರವಾಗಿ ಹಾಜರಾಗಬೇಕು. ಪ್ರತಿ ಕಾರ್ಮಿಕರಿಗೆ ದಿನಕ್ಕೆ ₹382 ಕೂಲಿ ನೀಡಲಾಗುತ್ತಿದ್ದು, ವಾರ್ಷಿಕ 125 ದಿನಗಳವರೆಗೆ ನಿರಂತರ ಕೆಲಸ ಪಡೆಯಲು ಅವಕಾಶವಿದೆ ಎಂದರು.

ಟ್ರಂಚೆಸ್ ಹಾಗೂ ಗೋ ಕಟ್ಟೆ ಕಾಮಗಾರಿಗಳಿಂದ ಅಂತರ್ಜಲ ಮಟ್ಟ ಹೆಚ್ಚಾದರೆ ಸುತ್ತಮುತ್ತಲಿನ ರೈತರ ಜಮೀನುಗಳಲ್ಲಿ ನೀರಿನ ತೇವಾಂಶ ಹೆಚ್ಚಾಗಿ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಲಿದೆ. ಇದರಿಂದ ಪರಿಸರ ಸಂರಕ್ಷಣೆ, ಪರಿಸರ ಸಮತೋಲನ ಹಾಗೂ ಜೀವವೈವಿಧ್ಯತೆಯ ವೃದ್ಧಿಗೆ ಸಹಕಾರಿಯಾಗುವುದರ ಜತೆಗೆ ಗ್ರಾಮೀಣ ಜನರು ಸಾಮಾಜಿಕ ಹಾಗೂ ಆರ್ಥಿಕವಾಗಿ ಸಬಲರಾಗಲು ನೆರವಾಗಲಿದೆ ಎಂದು ಹೇಳಿದರು.

ಕೆಲಸದ ಸ್ಥಳಗಳಲ್ಲಿ ಕುಡಿಯುವ ನೀರು, ನೆರಳು ಹಾಗೂ ಅಗತ್ಯ ಪ್ರಥಮ ಚಿಕಿತ್ಸಾ ವ್ಯವಸ್ಥೆ ಕಲ್ಪಿಸಬೇಕು. ಗ್ರಾಮೀಣ ಕೂಲಿ ಕಾರ್ಮಿಕರು ತಮ್ಮ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಬೇಕು ಎಂದು ಸೂಚಿಸಿದರು. ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರು ವೈಯಕ್ತಿಕ ಕಾಮಗಾರಿಗಳಾದ ಕುರಿ ಶೆಡ್, ಕೋಳಿ ಶೆಡ್, ಜಾನುವಾರುಗಳ ಶೆಡ್ ಸೇರಿದಂತೆ ವಿವಿಧ ಯೋಜನೆಗಳ ಸೌಲಭ್ಯ ಪಡೆಯಬಹುದು ಎಂದು ತಿಳಿಸಿದರು.

ತಾಲೂಕಿನಲ್ಲಿ ತಾಂತ್ರಿಕ ಅನುಮೋದನೆ ಪಡೆದಿರುವ ಕಾಮಗಾರಿಗಳನ್ನು ಕೂಡಲೇ ಪ್ರಾರಂಭಿಸಿ, ಗ್ರಾಮೀಣ ಭಾಗದ ಜನರು ಗುಳೆ ಹೋಗುವುದನ್ನು ತಡೆಯಲು ವಿಬಿ-ಜಿ ರಾಮ್-ಜಿ ಯೋಜನೆಯಡಿ ನಿರಂತರ ಕೆಲಸ ಒದಗಿಸಬೇಕು. ನಿಗದಿತ ಮಾನವ ದಿನಗಳ ಗುರಿ ತಲುಪುವಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಈ ಸಂದರ್ಭದಲ್ಲಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು ಶ್ರೀ ಶಶಿಧರ ಹಿರೇಮಠ, ಡಿಎಮ್ ಐಎಸ್ ರಾಘವೇಂದ್ರ, ಟಿಐಇಸಿ ಪರಶುರಾಮ, ಪಿಡಿಓ ಮಲ್ಲಿಕಾರ್ಜುನ, ಟಿಸಿ ರವೀಂದ್ರ ದೇಸಾಯಿ, ಟಿಐಇಸಿ ದುರ್ಗೇಶ್, ಟಿಎಇ, ಬಿಎಫ್ ಟಿ, ಜಿಕೆಮ್ ಸೇರಿದಂತೆ ಕೂಲಿಕಾರರು ಮತ್ತು ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಇದ್ದರು.

Tags

Vadigera taluk
share
ವಾರ್ತಾಭಾರತಿ
ವಾರ್ತಾಭಾರತಿ
Next Story
X