ಯಾದಗಿರಿ ಬಂದ್‌ಗೆ ವಾಲ್ಮೀಕಿ ನಾಯಕ ಸಮಾಜ ಬೆಂಬಲ

ಯಾದಗಿರಿ: ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸುವಂತೆ ಆಗ್ರಹಿಸಿ ಸೋಮವಾರ ಹಮ್ಮಿಕೊಂಡಿರುವ ಸರ್ವ ಸಂಘಟನೆಗಳ ಹೋರಾಟ ಸಮಿತಿಯ ಯಾದಗಿರಿ ಬಂದ್‌ಗೆ ವಾಲ್ಮೀಕಿ ನಾಯಕ ಸಮಾಜದ ತಾಲೂಕು ಸಮಿತಿ ಬೆಂಬಲ ಘೋಷಿಸಿದೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಸಮಾಜದ ತಾಲೂಕು ಅಧ್ಯಕ್ಷ ಸಾಹೇಬಗೌಡ ನಾಯಕ ಗೌಡಗೇರಾ, ಜಿಲ್ಲೆಯ ರೈತರು ಬರದ ಸಂಕಷ್ಟದಿಂದ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಸರ್ಕಾರ ರಾಜಕೀಯ ಮಾಡುತ್ತಿದ್ದು, ಯಾದಗಿರಿ ಹಾಗೂ ಗುರುಮಠಕಲ್ ತಾಲೂಕುಗಳಿಗೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದರು.
ಬರ ಘೋಷಣೆಗಾಗಿ ನಡೆಯುತ್ತಿರುವ ಹೋರಾಟಕ್ಕೆ ವಾಲ್ಮೀಕಿ ನಾಯಕ ಸಮಾಜ ಸಂಪೂರ್ಣ ಬೆಂಬಲ ನೀಡಲಿದ್ದು, ಬಂದ್‌ನಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದಾಗಿ ಅವರು ತಿಳಿಸಿದ್ದಾರೆ.
Next Story




