Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. Yadagiri | ದಲಿತರ ಹಲ್ಲೆ ಖಂಡಿಸಿ...

Yadagiri | ದಲಿತರ ಹಲ್ಲೆ ಖಂಡಿಸಿ ವಡಗೇರಾ ಬಂದ್: 'ಮಾದಿಗ ದಂಡೋರ'ದಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ1 Oct 2026 4:14 PM IST
share
Yadagiri | ದಲಿತರ ಹಲ್ಲೆ ಖಂಡಿಸಿ ವಡಗೇರಾ ಬಂದ್: ಮಾದಿಗ ದಂಡೋರದಿಂದ ಪ್ರತಿಭಟನೆ

ಯಾದಗಿರಿ: ವಡಗೇರಾ ತಾಲೂಕಿನ ಗುರುಸಣಗಿ ಬೆಟ್ಟದ ಸಿದ್ಧಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ದಲಿತ ಮಾದಿಗ ಸಮುದಾಯದವರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಇನ್ನೂ ಐವರು ಆರೋಪಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿ ಮಾದಿಗ ದಂಡೋರ (ಎಂಆರ್ಪಿಎಸ್) ಸಮಿತಿಯಿಂದ ಗುರುವಾರ ವಡಗೇರಾ ತಾಲೂಕು ಬಂದ್ ನಡೆಸಿ ಪ್ರತಿಭಟನೆ ಮಾಡಲಾಯಿತು.

ಹಲ್ಲೆ ಪ್ರಕರಣದಲ್ಲಿ ಕೆಲವರ ವಿರುದ್ಧ ಮಾತ್ರ ಪ್ರಕರಣ ದಾಖಲಿಸಿ, ಉಳಿದ ಐವರನ್ನು ಕೈಬಿಡಲಾಗಿದೆ. ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲ ಆರೋಪಿಗಳ ವಿರುದ್ಧವೂ ಪ್ರಕರಣ ದಾಖಲಿಸಿ, ಕೂಡಲೇ ಬಂಧಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಬಳಿಕ ವಡಗೇರಾ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಮಾದಿಗ ದಂಡೋರ ರಾಜ್ಯಾಧ್ಯಕ್ಷ ನರಸಪ್ಪ ದಂಡೋರ, ರಾಜ್ಯದಲ್ಲಿ ದಲಿತ ಸಮುದಾಯದವರ ಮೇಲೆ ದೌರ್ಜನ್ಯ, ದಬ್ಬಾಳಿಕೆ, ಕೊಲೆ, ಅತ್ಯಾಚಾರ, ಹಲ್ಲೆ ಹಾಗೂ ಜಾತಿ ನಿಂದನೆ ಪ್ರಕರಣಗಳು ನಿರಂತರವಾಗಿ ನಡೆಯುತ್ತಿವೆ. ಸ್ವಾತಂತ್ರ್ಯ ಬಂದು ಹಲವು ವರ್ಷಗಳಾದರೂ ದಲಿತರು ಭಯಮುಕ್ತವಾಗಿ ಹಾಗೂ ನೆಮ್ಮದಿಯಿಂದ ಬದುಕುವ ಪರಿಸ್ಥಿತಿ ನಿರ್ಮಾಣವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾನೂನು ಹಾಗೂ ಪೊಲೀಸ್ ವ್ಯವಸ್ಥೆ ಇದ್ದರೂ ದಲಿತರ ಮೇಲಿನ ದೌರ್ಜನ್ಯಗಳು ಮುಂದುವರಿದಿವೆ. ದಲಿತ ಸಮುದಾಯದವರೇ ಗೃಹ ಸಚಿವರಾಗಿದ್ದರೂ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಬೀಳದಿರುವುದು ವಿಷಾದನೀಯ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಾದಿಗ ಸಮುದಾಯದವರ ಮೇಲೆ ಕೊಲೆ, ಅತ್ಯಾಚಾರ, ಜಾತಿನಿಂದನೆ ಹಾಗೂ ಹಲ್ಲೆಯಂತಹ ಗಂಭೀರ ಘಟನೆಗಳು ನಡೆದರೂ ಸಂತ್ರಸ್ತರಿಗೆ ನ್ಯಾಯ ದೊರಕಿಸುವಲ್ಲಿ ಪೊಲೀಸ್ ಇಲಾಖೆ ವಿಫಲವಾಗಿದೆ ಎಂದು ಆರೋಪಿಸಿದರು.

ದೌರ್ಜನ್ಯಕ್ಕೊಳಗಾದವರು ದೂರು ನೀಡಿದ ಸಂದರ್ಭದಲ್ಲಿ ಅವರಿಗೆ ಸೂಕ್ತ ರಕ್ಷಣೆ ಒದಗಿಸಬೇಕು. ಆರೋಪಿಗಳ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಂಡು, ದಲಿತರ ಮೇಲಿನ ದೌರ್ಜನ್ಯಗಳಿಗೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದರು.

ಜಿಲ್ಲಾಧ್ಯಕ್ಷ ಕಾಶಪ್ಪ ಮಾದಿಗ ಮಾತನಾಡಿ, ನಮ್ಮ ಸಮುದಾಯದವರು ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ವೇಳೆ ಹಲ್ಲೆ ನಡೆದಿದೆ. ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲ ಆರೋಪಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಇನ್ನೂ ಐವರು ಆರೋಪಿಗಳಿದ್ದು, ಅವರನ್ನು ಕೂಡಲೇ ಬಂಧಿಸಬೇಕು. ಪೊಲೀಸ್ ಇಲಾಖೆ ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಚಂದ್ರು ಮುಂಡರಗಿ, ಮಲ್ಲು ಬೆಳಿಗೇರ, ಭೀಮಾಶಂಕರ ಆಲ್ದಾಳ, ಸೈದಪ್ಪ ತುಮಕೂರ, ಪೋಲಪ್ಪ ವಡಗೇರಾ, ವಿಲ್ಸನ್ ಹಾಲಗೇರ, ಶಿವಶರಣಪ್ಪ ಗೋನಾಲ, ಮರೆಯಣ್ಣ ಗೋನಾಲ, ಮಲ್ಲು ಕುಮನೂರ, ಭೀಮರಾಯ ಕೋನಳ್ಳಿ, ಕುಮಾರ್ ತುಮಕೂರ, ತಿಪ್ಪಣ್ಣ ಗೊಂದೆನೂರ, ರಾಜು ಮೇತ್ರಿ, ಪರಶುರಾಮ ಪೂಜಾರಿ, ಅನಿಲ್ ದಾಸನಕೇರಿ, ಬಸವರಾಜ ಹಾದಿಮನಿ, ರವಿ ಬುರ್ರಾನೂರ ಸೇರಿದಂತೆ ಹಲವರು ಭಾಗವಹಿಸಿದ್ದರು.

Tags

Wadagera BandhCondemn Assault on Dalits
share
ವಾರ್ತಾಭಾರತಿ
ವಾರ್ತಾಭಾರತಿ
Next Story
X