Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಗಿರಿನಾಡಲ್ಲಿ ಮಿತಿ ಮೀರಿದ ಕಾಡುಹಂದಿ,...

ಗಿರಿನಾಡಲ್ಲಿ ಮಿತಿ ಮೀರಿದ ಕಾಡುಹಂದಿ, ಮಂಗಗಳ ಉಪಟಳ| ಬೆಳೆಗಳ ರಕ್ಷಣೆಗೆ ಸೀರೆಗಳ ಬಳಕೆಗೆ ಮುಂದಾದ ರೈತರು

ವಾರ್ತಾಭಾರತಿವಾರ್ತಾಭಾರತಿ23 Dec 2025 5:08 PM IST
share
ಗಿರಿನಾಡಲ್ಲಿ ಮಿತಿ ಮೀರಿದ ಕಾಡುಹಂದಿ, ಮಂಗಗಳ ಉಪಟಳ| ಬೆಳೆಗಳ ರಕ್ಷಣೆಗೆ ಸೀರೆಗಳ ಬಳಕೆಗೆ ಮುಂದಾದ ರೈತರು

ಯಾದಗಿರಿ: ಯಾದಗಿರಿ ಗುರುಮಠಕಲ್ ತಾಲೂಕಿನ ಯರಗೋಳದಿಂದ ಗುರುಮಠಕಲ್‌ವರೆಗೆ ಗುಡ್ಡಗಾಡು ಪ್ರದೇಶದ ಕೆಳಭಾಗದ ರೈತರ ತಮ್ಮ ಬೆಳೆಗಳು ಜಮೀನಿನಲ್ಲಿ ಬಿತ್ತನೆ ಮಾಡಿರುವ ಜೋಳ, ಸಜ್ಜಿ, ಶೇಂಗಾ ಸೇರಿದಂತೆ ಇನ್ನಿತರ ಬೆಳೆ ರಕ್ಷಣೆಗೆ ಸೀರೆ ಜಮೀನು ಸುತ್ತಲೂ ಕಟ್ಟಿದ್ದಾರೆ. ಜಿಲ್ಲೆಯಲ್ಲಿ ಕಾಡು ಹಂದಿ, ಮಂಗಗಳ ಹಾವಳಿ ಮೀತಿ ಮೀರಿದ್ದು, ಇದರಿಂದಾಗಿ ತೀವ್ರ ಕಂಗಲಾಗಿರುವ ರೈತರು ಅಳಿದುಳಿದ ಬೆಳೆ ರಕ್ಷಣೆಗೆ ಹಳೆ ಸೀರೆಗಳ ಮೊರೆ ಹೋಗಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ ಉಮೇಶ್‌.ಕೆ. ಮುದ್ನಾಳ ತಿಳಿಸಿದ್ದಾರೆ

ರೈತರ ಜಮೀನಿಗಳಿಗೆ ಭೇಟಿ ನೀಡಿ ರೈತರ ಜೊತೆ ಚರ್ಚಿಸಿ ಮಾತನಾಡಿದ ಉಮೇಶ್‌.ಕೆ.ಮುದ್ನಾಳ, ತಮ್ಮ ಜಮೀನಿನಲ್ಲಿ ಬಿತ್ತನೆ ಮಾಡಿರುವ ಬೆಳಗಳನ್ನು ರಕ್ಷಿಸಿಕೊಳ್ಳಲು ಹಳೆ ಸೀರೆಗಳನ್ನು ಹೊಲದ ಸುತ್ತಲೂ ನಾಲ್ಕು ಕಡೆ ಕಟ್ಟುತ್ತಿರುವ ದೃಶ್ಯ ಯಾದಗಿರಿ, ಗುರುಮಠಕಲ್ ತಾಲೂಕಿನ ಯರಗೋಳ, ಅಲ್ಲಿಪೂರ, ಹತ್ತಿಕುಣಿ, ಸೌದಾಗಾರ, ತಾತಳಗೇರಾ, ಯಂಪಾಡ್ ಅರಕೇರಾ, ಶಿವಪೂರ, ಕೋಟಗೇರಾ, ಕೆ. ಹೊಸಳ್ಳಿ, ಧರ್ಮಾಪೂರ, ಬೋಡಬಂಡಾ, ಸೇರಿದಂತೆ ಅನೇಕ ಗ್ರಾಮಗಳಲ್ಲಿ ಸಾಮಾನ್ಯವಾಗಿದೆ. ಈ ಪ್ರದೇಶದಲ್ಲಿ ಹಂದಿ, ಮಂಗಗಳ ಉಪಟಳ ಹೆಚ್ಚಳವಾಗಿದೆ. ರೈತರು ಹಳೇ ಸೀರೆಯನ್ನು ಬಳಕೆ ಮಾಡುವ ಮೂಲಕ ಕಾಡು ಹಂದಿ, ಮಂಗಗಳ ನಿಯಂತ್ರಣಕ್ಕೆ ಹರಸಾಹಸ ಪಡುತ್ತಿದ್ದಾರೆ. ಕಾಡುಹಂದಿ, ಮಂಗಗಳ ಹಾವಳಿ ಮಿತಿಮೀರಿದ ಪರಿಣಾಮ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಹೇಳಿದ್ದಾರೆ.

ಪ್ರತಿ ವರ್ಷ ಬರ ಅತಿವೃಷ್ಟಿ ನಡುವೆಯೇ ಶತಾಯ ಗತಾಯವಾಗಿ ಬೆಳೆಗಳನ್ನು ಬೆಳೆದುಕೊಂಡಿದ್ದಾರೆ. ಒಂದೆಡೆ ವಿದ್ಯುತ್ ಕಣ್ಣಾಮುಚ್ಚಾಲೆಯಿಂದ ಬೇಸತ್ತ ರೈತರಿಗೆ ಇನ್ನೊಂದು ಕಡೆ ಕಾಡು ಹಂದಿ, ಮಂಗಗಳ ಕಾಟ ಹೆಚ್ಚಳವಾಗಿವೆ. ಇವೆರಡರ ನಡುವೆ ಸಿಲುಕಿ ಒದ್ದಾಡುವಂತಹ ಪರಿಸ್ಥಿತಿ ರೈತರಿಗೆ ನಿರ್ಮಾಣವಾಗಿದೆ. ಈ ಭಾಗದ ಅಧಿಕಾರಿಗಳು, ಜನಪ್ರತಿನಿಧಿಗಳು ಮಾತ್ರ ಅನ್ನದಾತನ ಸಂಕಟ ಅರಿಯುವ ಪ್ರಯತ್ನ ಮಾಡದಿರುವುದು ನಿಜಕ್ಕೂ ಬೇಸರದ ಸಂಗತಿಯಾಗಿದೆ ಎಂದು ಹೇಳಿದರು.

ಸಂಬಂಧಿಸಿದ ಇಲಾಖೆಗಳು ರೈತರಿಗೆ ಇರುವ ಸಂಕಷ್ಟ ದೂರ ಮಾಡಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂಬುದು ರೈತರ ಆಗ್ರಹವಾಗಿದೆ. ರೈತರು ಇಷ್ಟೆಲ್ಲ ಸಂಕಷ್ಟದಲ್ಲಿ ಸಾಲ ಮಾಡಿ ಬೆಳೆ ಬೆಳೆದರೂ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗುತ್ತಿದೆ. ಆದರೆ ರೈತಪರ ಸರಕಾರ ಎನ್ನುವ ರಾಜಕಾರಣಿಗಳು ಯಾವುದೇ ರೈತರ ಸಂಕಷ್ಟ ಪರಿಹರಿಸುವ ಕೆಲಸ ಮಾಡದೇ ಬರಿ ಬಾಯಿಮಾತಿನಲ್ಲಿ ರೈತರ ಪರ ಎಂದು ಬುರುಡೆ ಬಿಡುತ್ತಿರುವುದು ಸಮಸ್ಯೆ ಹೆಚ್ಚಲು ಕಾರಣವಾಗಿದೆ. ಇನ್ನಾದರೂ ಜಿಲ್ಲಾಡಳಿತ ತಕ್ಷಣ ಸಮಸ್ಯೆ ಗುರುತಿಸಿ ಇದಕ್ಕೆ ಪರಿಹಾರ ಕಂಡುಕೊಳ್ಳಬೇಕಿದೆ. ಇಲ್ಲವಾದಲ್ಲಿ ಅನ್ನದಾತರು ಮುಂದಿನ ದಿನಗಳಲ್ಲಿ ಸಿಡಿದೇಳುವ ಸಾಧ್ಯತೆ ತಳ್ಳಿ ಹಾಕುವಂತಿಲ್ಲ ಎಂದು ಹೇಳಿದರು.

ಈ ಸಂರ್ಭದಲ್ಲಿ ಸಂಶುದ್ದಿನ್, ಅಬ್ಬಾಸಲಿ, ಪವನ, ಮಲ್ಲೇಶಿ, ಸಣ್ಣ ಶರಣಪ್ಪ, ಸಿದ್ದಪ್ಪ, ದಸ್ತಗಿರಿ, ರಮೇಶ, ನಿಂಗಪ್ಪ, ಸಿದ್ರಾಮಪ್ಪ ತಳವಾರ, ಪರಮೇಶ ರಾಠೋಟ್‌, ಶಿವು ಹತ್ತಿಕುಣಿ, ಹಣಮಂತ ಯಂಕಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X