ಯಾದಗಿರಿ | ಕಾರಿನಲ್ಲಿದ್ದ ನಗದು–ಬಂಗಾರ ಕಳವು ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಯಾದಗಿರಿ : ಜ.16ರಂದು ಹಾಡುಹಗಲೇ ಕಾರಿನಲ್ಲಿ ಇಟ್ಟಿದ್ದ ನಗದು ಹಾಗೂ ಬಂಗಾರವನ್ನು ಕಳವು ಮಾಡಿದ್ದ ಕಳ್ಳರಿಬ್ಬರನ್ನು ಯಾದಗಿರಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಶರಣಪ್ಪ ಕೊನೆಮನಿ ಅವರಿಗೆ ಸೇರಿದ 9.50 ಲಕ್ಷ ರೂ. ನಗದು ಹಾಗೂ 29 ಗ್ರಾಂ ಬಂಗಾರವನ್ನು ದೋಚಿದ ಪ್ರಕರಣಕ್ಕೆ ಸಂಬಂಧಿಸಿ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಮೂಲದ ಸಂದೀಪ್ ಬೋವಿ ಹಾಗೂ ಶಂಕರ ಬೋವಿ ಎಂಬುವರನ್ನು ಬಂಧಿಸಲಾಗಿದೆ.
ಬಂಧಿತರಿಂದ 8.20 ಲಕ್ಷ ರೂ. ನಗದು, ಸುಮಾರು 4.50 ಲಕ್ಷ ರೂ. ಮೌಲ್ಯದ 29 ಗ್ರಾಂ ಬಂಗಾರ ಹಾಗೂ 1 ಲಕ್ಷ ರೂ. ಮೌಲ್ಯದ ಎರಡು ಬೈಕ್‌ಗಳು ಸೇರಿದಂತೆ ಒಟ್ಟು 13.20 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ಹಾಗೂ ಹೆಚ್ಚುವರಿ ಎಸ್‌ಪಿ ಧರಣೇಶ್ ಅವರ ಮಾರ್ಗದರ್ಶನದಲ್ಲಿ, ಡಿವೈಎಸ್‌ಪಿ ಸುರೇಶ್ ನಾಯಕ, ಸಿಪಿಐ ಸುನೀಲ್ ಮೂಲಿಮನಿ, ಪಿಎಸ್‌ಐ ಮಂಜನಗೌಡ ಅವರ ನೇತೃತ್ವದ ತಂಡ ಹಾಗೂ ಪೊಲೀಸ್ ಸಿಬ್ಬಂದಿಗಳ ಸಹಕಾರದಿಂದ ಈ ಕಾರ್ಯಾಚರಣೆ ಯಶಸ್ವಿಯಾಗಿ ನಡೆಯಿತು.
ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.





