ಯಾದಗಿರಿ | ಅರ್ಥಪೂರ್ಣವಾಗಿ ವಿಶ್ವಕರ್ಮ ಅಮರಶಿಲ್ಪಿ ಜಕಣಚಾರಿ ಜಯಂತಿ ಆಚರಣೆಗೆ ನಿರ್ಧಾರ

ಯಾದಗಿರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿವಿಧ ಇಲಾಖೆಗಳು ಹಾಗೂ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಜ.1 ರಂದು ವಿಶ್ವಕರ್ಮ ಅಮರಶಿಲ್ಪಿ ಜಕಣಚಾರಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಮರಶಿಲ್ಪಿ ಜಕಣಾಚಾರಿ ಜಯಂತಿ ಆಚರಿಸುವ ಕುರಿತು ಸಹಾಯಕ ಆಯುಕ್ತ ಶ್ರೀಧರ್ ಗೋಟುರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.
ಅಂದು ನಗರದ ಸರ್ಕಾರಿ ಪದವಿ ಮಹಾವಿದ್ಯಾಲಯದ ಸಭಾಂಗಣದಲ್ಲಿ ಮಧ್ಯಾಹ್ನ 1 ಗಂಟೆಗೆ ಈ ಜಯಂತಿ ಆಯೋಜಿಸಲು, ಜಕಣಾಚಾರಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಿ ಗೌರವ ಅರ್ಪಿಸಲು, ವೇದಿಕೆ, ಆಸನದ ವ್ಯವಸ್ಥೆ, ಶಿಷ್ಟಾಚಾರದಂತೆ ಗಣ್ಯರನ್ನು, ಉಪನ್ಯಾಸಕರನ್ನು ಆಹ್ವಾನಿಸಲು ನಿರ್ಧರಿಸಲಾಯಿತು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಸಹಾಯಕ ಆಯುಕ್ತ ಶ್ರೀಧರ್ ಗೋಟುರ್ ಅವರು ಕಾರ್ಯಕ್ರಮದ ಸಂದರ್ಭದಲ್ಲಿ, ಸೂಕ್ತ ಪೊಲೀಸ್ ಬಂದೋಬಸ್ತ್, ವೇದಿಕೆ ಸಿದ್ಧತೆ ನೋಡಿಕೊಳ್ಳಲು, ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಆಮಂತ್ರಣ ಪತ್ರಿಕೆ ವಿತರಿಸುವ ವ್ಯವಸ್ಥೆಗೆ ಸೂಚಿಸಲಾಯಿತು.
ಕಾರ್ಯಕ್ರಮವನ್ನು ತಾಲೂಕು ಮಟ್ಟದಲ್ಲಿ ಶಾಲಾ, ಕಾಲೇಜು, ಗ್ರಾಮ ಪಂಚಾಯತ್, ವಿವಿಧ ಕಚೇರಿಗಳಲ್ಲಿ ಈ ಜಯಂತಿ ಆಚರಣೆ, ಮುಖ್ಯ ಕಾರ್ಯಕ್ರಮಕ್ಕೆ, ಅಗತ್ಯ ಸಿದ್ಧತೆ ಮಾಡಿಕೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚಿಸಿದರು. ಸಮಾಜದ ಮೂಲಕ ಹಮ್ಮಿಕೊಳ್ಳಲಾಗುವ ಮೆರವಣಿಗೆ ಕಾರ್ಯಕ್ರಮ ಮುಂಚಿತವಾಗಿ ಜಿಲ್ಲಾಡಳಿತಕ್ಕೆ ಈ ಕುರಿತು ಮಾಹಿತಿ ನೀಡಲು ಸೂಚಿಸಿದರು.
ಸಭೆಯಲ್ಲಿ ಕನ್ನಡ ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಉತ್ತರದೇವಿ ಸ್ವಾಗತಿಸಿದರು. ವಿಶ್ವಕರ್ಮ ತಡಿಬಿಡಿ, ಶಿವಣ್ಣ ವಿಶ್ವಕರ್ಮ, ದೇವಿಂದ್ರಪ್ಪ ವಿಶ್ವಕರ್ಮ, ಶಿವಕುಮಾರ್, ಚಂದ್ರ ಶೇಖರ್ ಪತ್ತಾರ, ಹಣಮಂತರಾಯ್ ವಿಶ್ವ ಕರ್ಮ ಉಪಸ್ಥಿತರಿದ್ದರು.







