Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ನವೆಂಬರ್‌ನಲ್ಲಿ ಯಾದಗಿರಿ ಜಿಲ್ಲಾ ಉತ್ಸವ...

ನವೆಂಬರ್‌ನಲ್ಲಿ ಯಾದಗಿರಿ ಜಿಲ್ಲಾ ಉತ್ಸವ ಆಯೋಜನೆ

ವಾರ್ತಾಭಾರತಿವಾರ್ತಾಭಾರತಿ11 March 2026 8:27 PM IST
share
ನವೆಂಬರ್‌ನಲ್ಲಿ ಯಾದಗಿರಿ ಜಿಲ್ಲಾ ಉತ್ಸವ ಆಯೋಜನೆ
ಕರವೇ ನಿಯೋಗಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪೂರ ಭರವಸೆ

ಯಾದಗಿರಿ: ಬರುವ ನವೆಂಬರ್ ತಿಂಗಳೊಳಗಾಗಿ ಜಿಲ್ಲಾ ಉತ್ಸವವನ್ನು ಅದ್ಧೂರಿಯಾಗಿ ಆಯೋಜಿಸಲಾಗುವುದು ಎಂದು ಸಣ್ಣ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪೂರ ಪ್ರಕಟಿಸಿದರು.

ನಗರದಲ್ಲಿನ ಉಸ್ತುವಾರಿ ಸಚಿವರ ಕಚೇರಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಮುಖಂಡರ ನಿಯೋಗವನ್ನು ಭೇಟಿ ಮಾಡಿ ಮಾತನಾಡಿದ ಅವರು, ಮುಂಬರುವ ಏಪ್ರಿಲ್ ತಿಂಗಳಲ್ಲಿ ಜಿಲ್ಲೆಯ ಎಲ್ಲಾ ಉನ್ನತ ಅಧಿಕಾರಿಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಮುಖಂಡರ ವಿಶೇಷ ಸಭೆ ಕರೆಯಲಾಗುವುದು. ಆ ಸಭೆಯಲ್ಲಿ ಉತ್ಸವದ ಪೂರ್ವಸಿದ್ಧತೆಗಳ ಕುರಿತು ಸವಿಸ್ತಾರವಾಗಿ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕರವೇ (ಪ್ರವೀಣ ಶೆಟ್ಟಿ ಬಣ) ಉತ್ತರ ಕರ್ನಾಟಕ ಅಧ್ಯಕ್ಷ ಶರಣು ಬಿ ಗದ್ದಿಗೆ, ಜಿಲ್ಲೆ ರಚನೆಯಾಗಿ 16 ವರ್ಷಗಳಾದರೂ ಜಿಲ್ಲಾ ಉತ್ಸವ ಇನ್ನೂ ಕನಸಾಗಿಯೇ ಉಳಿದಿದೆ. ಜಿಲ್ಲೆಯ ಸಮಸ್ತ ಕನ್ನಡಿಗರ ಕನಸು ಈ ವರ್ಷ ನನಸಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ಕರವೇ ಜಿಲ್ಲಾಧ್ಯಕ್ಷ ಟಿ ಎನ್ ಭೀಮುನಾಯಕ್ ಮಾತನಾಡಿ, ಜಿಲ್ಲೆಯ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಅನಾವರಣಗೊಳಿಸಲು ಜಿಲ್ಲಾ ಉತ್ಸವ ಆಯೋಜನೆ ಅಗತ್ಯವಾಗಿದೆ. ಹಿಂದುಳಿದ ಗಡಿಭಾಗದ ಜಿಲ್ಲೆಯಲ್ಲಿ ಕನ್ನಡದ ಸಂಸ್ಕೃತಿ ಪಸರಿಸಲು ಇದು ಸಹಾಯಕವಾಗಲಿದೆ ಎಂದು ಹೇಳಿದರು.

ಸ್ಥಳೀಯ ಕಲಾವಿದರಿಗೆ ವೇದಿಕೆ ಕಲ್ಪಿಸಿ, ಜಿಲ್ಲೆಯ ಸಾಂಸ್ಕೃತಿಕ ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸಲು ಜಿಲ್ಲಾ ಉತ್ಸವ ಅತ್ಯಂತ ಅವಶ್ಯಕ ಎಂದು ಅವರು ತಿಳಿಸಿದರು.

ಇದೇ ಸಂದರ್ಭದಲ್ಲಿ ಕರವೇ ನಿಯೋಗವು ಸಚಿವ ದರ್ಶನಾಪೂರ ಅವರಿಗೆ ಶಾಲು ಹೊದಿಸಿ ಸನ್ಮಾನಿಸಿತು.

ಬಳಿಕ ಕರವೇ ಮುಖಂಡರ ನಿಯೋಗವು ಜಿಲ್ಲಾಧಿಕಾರಿ ಹರ್ಷಲ್ ಬೋಯರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಈ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು, ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಸಮಾಲೋಚನೆ ನಡೆಸಿ ಉತ್ಸವವನ್ನು ಯಶಸ್ವಿಯಾಗಿ ಆಯೋಜಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಸಂತೋಷಕುಮಾರ ನಿರ್ಮಲಕರ್, ಸಿದ್ದುರಡ್ಡಿ ತಂಗಡಗಿ, ಮಲ್ಲು ಮಾಳಿಕೇರಿ, ಅಂಬ್ರೇಷ್ ಹತ್ತಿಮನಿ, ಚೌಡಯ್ಯ ಬಾವೂರ, ವಿಶ್ವರಾಜ ಪಾಟೀಲ್, ಭೀಮಾಶಂಕರ ಹತ್ತಿಕುಣಿ, ಬಸವರಾಜ ಜಗನ್ನಾಥ, ಅಶೋಕ ನಾಯಕ, ವಿಜಯಕುಮಾರ ರಾಠೋಡ, ಸಿದ್ದಲಿಂಗರಡ್ಡಿ ಮುನಗಾಲ, ರವಿ ಜಮ್ಮಾರ, ಮಲ್ಲು ಚಾಮನಳ್ಳಿ, ಭೀಮುಪೂಜಾರಿ, ರಮೇಶ ಡಿ. ನಾಯಕ ಸೇರಿದಂತೆ ಅನೇಕರು ಇದ್ದರು.

Tags

yadagir
share
ವಾರ್ತಾಭಾರತಿ
ವಾರ್ತಾಭಾರತಿ
Next Story
X