Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | 20 ದಿನಗಳಲ್ಲಿ 750...

ಯಾದಗಿರಿ | 20 ದಿನಗಳಲ್ಲಿ 750 ವಾಹನಗಳಿಗೆ ದಂಡ: ಎಸ್ ಪಿ ಪ್ರಥ್ವಿಕ್ ಶಂಕರ್

ವಾರ್ತಾಭಾರತಿವಾರ್ತಾಭಾರತಿ25 Oct 2025 8:11 PM IST
share
ಯಾದಗಿರಿ | 20 ದಿನಗಳಲ್ಲಿ 750 ವಾಹನಗಳಿಗೆ  ದಂಡ: ಎಸ್ ಪಿ ಪ್ರಥ್ವಿಕ್ ಶಂಕರ್
"ಐಟಿಎಂಎಸ್ ಅಳವಡಿಕೆಗೆ ಜಿಲ್ಲೆಗೆ 2.40 ಕೋಟಿ ರೂ. ಅನುದಾನ"

ಯಾದಗಿರಿ: ವಾಹನ ಸವಾರರು ಉಲ್ಲಂಘಿಸುವ ಸಂಚಾರ ನಿಯಮಗಳಿಗೆ ದಂಡ ಹಾಕುವ ಕೆಲಸ ಕಳೆದ ಅ.6 ರಿಂದ ನಗರದಲ್ಲಿ ಆರಂಭಿಸಿರುವ ಪೊಲೀಸರು ಕೇವಲ ಮೂರೇ ವಾರದಲ್ಲಿ ಸುಮಾರು 750 ವಾಹನ ಸವಾರರಿಗೆ ದಂಡ ವಿಧಿಸಿದ್ದಾರೆಂದು ಎಸ್ ಪಿ ಪ್ರಥ್ವಿಕ್ ಶಂಕರ್ ಹೇಳಿದ್ದಾರೆ.

ಶನಿವಾರ ತಮ್ಮ ಕಚೇರಿಯಲ್ಲಿ‌ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಾಹನ ಚಲಾಯಿಸುವಾಗ ಮೊಬೈಲ್ ಬಳಕೆ ಮಾಡುವ ಮತ್ತು ಮೂರು ಜನರು ಕುಳಿತು ವಾಹನಗಳನ್ನು ಚಲಾಯಿಸುವ ಸವಾರರಿಗೆ ಆನ್ ಲೈನ್ ದಂಡ ಹಾಕಲಾಗುತ್ತಿದೆ.‌ ಈ ಸಂಪರ್ಕ ರಹಿತ ದಂಡ ಹಾಕುವ ಉದ್ದೇಶವಿಷ್ಠೆ. ಮಂಡ್ಯದಲ್ಲಿ ಸಂಚಾರ ನಿಮಯ ಉಲ್ಲಂಘಿಸಿ ಹೋಗುತ್ತಿದ್ದ ಸವಾರರನ್ನು ಹಿಡಿಯಲು ಪೊಲೀಸರು‌ ಮುಂದಾದಾಗ ತಪ್ಪಿಸಿಕೊಳ್ಳಲು ಹೋಗಿ‌ ಜೀವ‌ ಕಳೆದುಕೊಂಡಿದ್ದರಿಂದ ನಮ್ಮ ನಗರದಲ್ಲಿ‌ ಸಂಪರ್ಕ ರಹಿತ ದಂಡ ವಿಧಿಸುವ ಕೆಲಸ ಮಾಡಲಾಗುತ್ತಿದೆ ಇದು‌ ಬರುವ ದಿನಗಳಲ್ಲಿ‌ ಜಿಲ್ಲೆಯ ಎಲ್ಲಡೆ ವಿಸ್ತರಿಸಲಾಗುವುದೆಂದರು.

ಜೀವಕ್ಕಿಂತ ದೊಡ್ಡದ್ದು ಏನು ಇಲ್ಲ. ಆದರೇ ನಗರ ಸೇರಿದಂತೆಯೇ ಜಿಲ್ಲೆಯಲ್ಲಿ‌ ಬಹುತೇಕ ವಾಹನ ಸವಾರರು ಸಂಚಾರಿ‌ ನಿಯಮಗಳನ್ನು ಉಲ್ಲಂಘಿಸಿಯೇ ಸಂಚರಿಸುತ್ತಾರೆ. ಇದು ಅವರ ಜೀವಗಳಿಗೆ ಅಪಾಯವಿದ್ದು, ಇದನ್ನು ತಡೆಗಟ್ಟಲು ದಂಡ ಹಾಕುವ ಮೂಲಕ ಅರಿವು‌ ಮೂಡಿಸುವ ಕೆಲಸ ನಡೆದಿದೆ. ಮುಂದೇ ಎಲ್ಲ ತರಹದ ಸಂಚಾರ ನಿಯಮಗಳನ್ನು‌ ಉಲ್ಲಂಘಿಸಿವರಿಗೂ ಈ ಆನ್ ಲೈನ್ ದಂಡ ಹಾಕಲಾಗುವುದೆಂದರು.

ಐಟಿಎಂಎಸ್ ಅಳವಡಿಕೆಗೆ ಜಿಲ್ಲೆಗೆ 2.40 ಕೋಟಿ ರೂ. ಅನುದಾನ :

ಇಂಟಿಗ್ರೇಟೆಡ್‌ ಟ್ರಾಫಿಕ್ ಮ್ಯಾನೇಜ್‌ಮೆಂಟ್‌ ಸಿಸ್ಟಮ್ (ಐಟಿಎಂಎಸ್‌) ಅಳವಡಿಕೆಗೆ ರಾಜ್ಯ ಸರ್ಕಾರವು ಸಂಚಾರ ಮತ್ತು ರಸ್ತೆ ಸುರಕ್ಷತಾ ಕಮಿಷನರ್ (ಸಿಟಿಆರ್‌ಎಸ್‌) ಅಡಿ ಜಿಲ್ಲೆಗೆ 2.40 ಕೋಟಿ ಅನುದಾನ ನೀಡಿದೆ ಎಂದು ಎಸ್ ಪಿ ಪ್ರಥ್ವಿಕ್ ಶಂಕರ್ ಹೇಳಿದರು.

ಐಟಿಎಂಎಸ್‌ ಅಡಿ ಹೈ ಡೆಫಿನಿಷನ್‌ ಸಿ.ಸಿ.ಟಿ.ವಿ ಕ್ಯಾಮೆರಾ, ಅಟೊಮೇಟಿಕ್ ನಂಬರ್ ಪ್ಲೇಟ್‌ ರಿಕಗ್ನಿಷನ್ (ಎಎನ್‌ಪಿಆರ್‌), ರಸ್ತೆಗಳಲ್ಲಿ ವಾಹನಗಳ ವೇಗವನ್ನು ಮಾಪನ ಮಾಡಿ ಅಳೆಯುವ ಸ್ಪೀಡ್ ರಾಡಾರ್ ತಂತ್ರಜ್ಞಾನದ ಗನ್, ಕ್ಯಾಟ್ ಐಸ್ ಉಪಕರಣ, ಡಿಜಿಟಲ್ ಸೈನ್ ಬೋರ್ಡ್‌ಗಳಂತಹ ಸಾಧನಗಳನ್ನು ಒಳಗೊಂಡಿರಲಿದೆ. ಈ ಸಾಧನಗಳ ಮೂಲಕ ತ್ರಿಬಲ್ ರೈಡ್, ಮೊಬೈಲ್ ಬಳಸುತ್ತಾ ವಾಹನಗಳ ಚಾಲನೆ, ಮಿತಿಗಿಂತ ವೇಗವಾಗಿ ವಾಹನ ಚಾಲನೆ ಮಾಡುವವರನ್ನು ಪತ್ತೆ ಹಚ್ಚಲು ಸುಲಭವಾಗುತ್ತದೆ.

ಈ ಒಟ್ಟು ಅನುದಾನದಲ್ಲಿ 1.40 ಕೋಟಿ ರೂ. ಜಿಲ್ಲೆಯ ಏಳು ಕಡೆ ಐಟಿಎಂಎಸ್ ಅಳವಡಿಕೆಗೆ ಬಳಕೆಯಾಗಲಿದ್ದು, ಉಳಿದ ಒಂದು ಕೋಟಿ ರೂ. ನಲ್ಲಿ ಎಲ್ಲ ರೀತಿಯ ಸಂಚಾರಿ ಸಾಮಾಗ್ರಿಗಳನ್ನು ಖರೀದಿಸಲಾಗುವುದೆಂದು ಅವರು ಹೇಳಿದರು.

ಶಹಾಪುರ ತಾಲೂಕಿನ ಚಾಮನಾಳ ತಾಂಡಾ ಮಹಿಳೆಯೊಬ್ಬಳ ತಲೆಗೂದಲು ಕತ್ತರಿಸಿ ತಲೆಗೆ ಸುಣ್ಣ ಹಚ್ಚಿ ಅಮಾನುಷವಾಗಿ‌ ವರ್ತಿಸಿದ‌ ಘಟನೆಗೆ ಸಂಬಂಧಿಸಿದಂತೆಯೇ ಕೆಂಭಾವಿ ಪೊಲೀಸ್ ಪೊಲೀಸ್ ಠಾಣೆಯಲ್ಲಿ 11 ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು, ಈ ಪೈಕಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಎಸ್ ಪಿ ಪ್ರಥ್ವಿಕ್ ಶಂಕರ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X