Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ವಡಿಗೇರಾ ತಾಲ್ಲೂಕು ಕೇಂದ್ರದ...

ಯಾದಗಿರಿ | ವಡಿಗೇರಾ ತಾಲ್ಲೂಕು ಕೇಂದ್ರದ ಅಭಿವೃದ್ಧಿಗೆ ಸರಕಾರ ಬದ್ಧ : ಸಚಿವ ದರ್ಶನಾಪೂರ

ವಾರ್ತಾಭಾರತಿವಾರ್ತಾಭಾರತಿ5 Sept 2025 7:00 PM IST
share
ಯಾದಗಿರಿ | ವಡಿಗೇರಾ ತಾಲ್ಲೂಕು ಕೇಂದ್ರದ ಅಭಿವೃದ್ಧಿಗೆ ಸರಕಾರ ಬದ್ಧ : ಸಚಿವ ದರ್ಶನಾಪೂರ

ಯಾದಗಿರಿ: ನೂತನ ತಾಲ್ಲೂಕು ಕೇಂದ್ರವಾಗಿರುವ ವಡಗೇರಾ, ಹಾಗೂ ವಡಗೇರಾ ಪಟ್ಟಣದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ರಾಜ್ಯ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಖಾತೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪ ದರ್ಶನಾಪೂರ ಹೇಳಿದರು.

ಕಂದಾಯ ಇಲಾಖೆಯಿಂದ ವಡಗೇರಾ ಪಟ್ಟಣದಲ್ಲಿ 8.60 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಪ್ರಜಾ ಸೌಧ ತಾಲ್ಲೂಕು ಆಡಳಿತ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಇಂದು ಅಡಿಗಲ್ಲು ನೆರವೇರಿಸಿ ಅವರು ಮಾತನಾಡಿದರು.

ಒಂದು ವರ್ಷದಲ್ಲಿ ಕಟ್ಟಡ ಪೂರ್ಣಗೊಳ್ಳಲಿದ್ದು, ಇಲ್ಲಿಯೇ ಹಲವಾರು ಸರ್ಕಾರಿ ಇಲಾಖೆಗಳ ಕಚೇರಿಗಳು ಆರಂಭಗೊಳ್ಳಲಿವೆ. ಇದರಿಂದ ಗ್ರಾಮೀಣ ಭಾಗದ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ. ನಮ್ಮ ಸರ್ಕಾರ ಈಗಾಗಲೇ ರಾಜ್ಯದಲ್ಲಿ 54 ಪ್ರಜಾಸೌಧ ಕಟ್ಟಡ ನಿರ್ಮಾಣಕ್ಕೆ ಮಂಜೂರು ನೀಡಿದೆ. ಅದರಲ್ಲಿ ಕಲ್ಯಾಣ ಕರ್ನಾಟಕಕ್ಕೆ 16 ಪ್ರಜಾಸೌಧ ತಾಲ್ಲೂಕು ಆಡಳಿತ ಕೇಂದ್ರಗಳು ಮಂಜೂರಾಗಿವೆ. ಜಿಲ್ಲೆಯ ಗುರುಮಿಠಕಲ್, ಶಹಾಪೂರ, ಹುಣಸಗಿಯಲ್ಲಿ ಕೂಡ ಕಟ್ಟಡ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.

ಸಂಬಂಧಿಸಿದ ಗುತ್ತಿಗೆದಾರರು ನಿಗದಿತ ಅವಧಿಯೊಳಗೆ ಗುಣಮಟ್ಟದ ಕಾಮಗಾರಿ ಕೈಗೊಳ್ಳಬೇಕೆಂದು ಸೂಚಿಸಿ, ವಡಗೇರಾದಲ್ಲಿ 30 ಬೆಡ್‌ಗಳ ಸರ್ಕಾರಿ ಆಸ್ಪತ್ರೆಯನ್ನು 50 ಬೆಡ್‌ಗಳಾಗಿ ಮೇಲ್ದರ್ಜೆಗೆ ಏರಿಸಲಾಗಿದೆ. ಈಗಾಗಲೇ ಕಲ್ಯಾಣ ಕರ್ನಾಟದಲ್ಲಿ 554 ಕೋ. ರೂ. ವೆಚ್ಚದಲ್ಲಿ ಸರ್ಕಾರ ಆರೋಗ್ಯ ಕ್ಷೇತ್ರ ಅಭಿವೃದ್ಧಿ ಪಡಿಸುತ್ತಿದೆ. ಇದರಿಂದ ಬರುವ ದಿನಗಳಲ್ಲಿ ಜನರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.

ಈಗಾಗಲೇ ಸರ್ಕಾರ 1800 ಕೋಟಿ ರೂ. ವೆಚ್ಚದಲ್ಲಿ ಜಲಧಾರೆ ಯೋಜನೆ ಮೂಲಕ ಜನರಿಗೆ ಶುದ್ಧ ಕುಡಿಯುವ ನೀರನ್ನು ಪೂರೈಸುವ ಯೋಜನೆ ಕಾಮಗಾರಿ ಪ್ರಗತಿಯಲ್ಲಿದೆ. ಮುಖ್ಯಮಂತ್ರಿಗಳು ಶಾಸಕರಿಗೆ ತಲಾ 50 ಕೋಟಿ ರೂ. ವಿಶೇಷ ಅನುದಾನ ನೀಡಿದ್ದಾರೆ. ಜನರಿಗೆ ಅಗತ್ಯಕ್ಕನುಗುಣವಾಗಿ ಕಾಮಗಾರಿ ಕೈಗೊಳ್ಳಲಾಗುವುದು ಎಂದರು.

ಸರ್ಕಾರ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಗೆ 5 ಸಾವಿರ ಕೋಟಿ ರೂ. ಅನುದಾನ ನೀಡಿರುವುದರಿಂದ ಎಲ್ಲಾ ಭಾಗದವರಿಗಾಗಿ ಅಭಿವೃದ್ಧಿ ಕಾಮಗಾರಿಗಳನ್ನು ತೆಗೆದುಕೊಳ್ಳಲಾಗಿದೆ. ರಾಜ್ಯ ಸರ್ಕಾರದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿದೆ. ಮುಖ್ಯ ಮಂತ್ರಿಗಳಾದ ಸಿದ್ಧರಾಮಯ್ಯ ನವರು ಹಣಕಾಸು ಖಾತೆ ನಿರ್ವಹಣೆ ಮಾಡುವ ಮೂಲಕ ವಿಧಾನ ಸಭಾ ಚುನಾವಣೆ ಪೂರ್ವದಲ್ಲಿ ಜನರಿಗೆ ನೀಡಿರುವ ಭರವಸೆಯಂತೆ ಪಂಚ ಗ್ಯಾರಂಟಿಗಳಿಗೆ ಅನುದಾನ ಒದಗಿಸುವ ಜೊತೆಗೆ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಸೂಕ್ತ ಅನುದಾನ ನೀಡಿ ಬದಲಾವಣೆಗೆ ಶ್ರಮಿಸುತ್ತಿದ್ದಾರೆ ಎಂದು ಸರ್ಕಾರದ ಸಾಧನೆಗಳನ್ನು ವಿವರಿಸಿದರು.

ಶಾಸಕ ಚೆನ್ನಾರೆಡ್ಡಿ ಪಾಟೀಲ್‌ ತುನ್ನೂರು ಮಾತನಾಡಿ, ಹಿಂದುಳಿದಿರುವ ವಡಗೇರಾ ತಾಲ್ಲೂಕಿಗೆ ರೈತರಿಗೆ ನೀರಾವರಿ ಸೌಕರ್ಯ ಕಲ್ಪಿಸಲು ನೀರಾವರಿ ಇಲಾಖೆಯಿಂದ 200 ಕೋಟಿ ರೂಪಾಯಿ ಕಾಮಗಾರಿ ಟೆಂಡರ್ ಕರೆಯಲಾಗುತ್ತಿದೆ. ಬರುವ ದಿನಗಳಲ್ಲಿ ರೈತರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಕರ್ನಾಟಕ ಗೃಹ ಮಂಡಳಿ ಕಾರ್ಯನಿರ್ವಾಹಕ ಅಭಿಯಂತರ ವಿಜಯಕುಮಾರ ಯೋಜನೆ ಬಗ್ಗೆ ಮಾಹಿತಿ ನೀಡಿದರು.

ವೇದಿಕೆ ಮೇಲೆ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಬಾಬುರಾವ್ ಚಿಂಚನ್‌ಸೂರ್, ಜಿಲ್ಲಾಧಿಕಾರಿ ಹರ್ಷಲ್ ಭೋಯರ್, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಿಕಾರ್ಜುನ ಸಂಗ್ವಾರ, ತಹಸೀಲ್ದಾರ ಮಂಗಳ ಎಮ್., ಗ್ರಾ.ಪಂ. ಅಧ್ಯಕ್ಷ ಸಿದ್ದಪ್ಪ ತಮ್ಮಣ್ಣೋರ್, ಗೃಹಮಂಡಳಿಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಗಿರೀಶ್, ಬಸ್ಸುಗೌಡ ಬಿಳ್ಹಾರ, ಸೇರಿದಂತೆ ಹಲವರು ಉಪಸ್ಥಿತರಿದ್ದರು. ಈ ಕಾರ್ಯಕ್ರಮವನ್ನು ಸಾಹೇಬರೆಡ್ಡಿ ಇಟಗಿ ನಿರೂಪಿಸಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X