ಯಾದಗಿರಿ | ಕಾರ್ಯಪಾಲಕ ಇಂಜಿನಿಯರ್ ಮಂಜುನಾಥ ಸಂಗಾವಿ ಅವರಿಗೆ ಸನ್ಮಾನ

ಯಾದಗಿರಿ: ಜಿಲ್ಲಾ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಹೊಸ ಕಾರ್ಯಪಾಲಕ ಇಂಜಿನಿಯರ್ ಆಗಿ ಮಂಜುನಾಥ ಸಂಗಾವಿ ಅವರು ಪ್ರಭಾರ ವಹಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಸನ್ಮಾನ ಮಾಡಲಾಯಿತು.
ಈ ವೇಳೆ ಕರ್ನಾಟಕ ರಾಜ್ಯ ಸರ್ಕಾರಿ ಎಸ್.ಸಿ./ಎಸ್.ಟಿ. ನೌಕರರ ಸಮನ್ವಯ ಸಮಿತಿ (ರಿ) ಯಾದಗಿರಿ ಜಿಲ್ಲಾ ಶಾಖೆಯ ಅಧ್ಯಕ್ಷ ಆರ್.ಎಂ. ನಾಟೇಕಾರ್, ಉಪಾಧ್ಯಕ್ಷ ಚಂದ್ರಕಾಂತ ಸಂಗೋಳಿ, ವಿಭಾಗದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸಿದರು.
ಸಮಿತಿಯ ಅಧ್ಯಕ್ಷ ಆರ್.ಎಂ.ನಾಟೇಕಾರ್ ಮಾತನಾಡಿ, ಸಾಮಾಜಿಕ ನ್ಯಾಯ ಮತ್ತು ಅಭಿವೃದ್ಧಿ ದೃಷ್ಟಿಯಿಂದ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ ಮಹತ್ವದ ಪಾತ್ರ ವಹಿಸುತ್ತದೆ. ಮಂಜುನಾಥ ಸಂಗಾವಿ ಅವರ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಮೂಲಸೌಕರ್ಯ ಕಾರ್ಯಗಳು ಇನ್ನಷ್ಟು ವೇಗ ಪಡೆಯಲಿ ಎಂದು ಹಾರೈಸಿದರು.
ಈ ವೇಳೆ ಸಿಬ್ಬಂದಿ ಸದಸ್ಯರು ಹೂಮಾಲೆಗಳಿಂದ ಅಭಿನಂದನೆ ಸಲ್ಲಿಸಿ, ಪುಷ್ಪಗುಚ್ಛ ನೀಡಿ ಗೌರವಿಸಿದರು. ಮಂಜುನಾಥ ಸಂಗಾವಿ ಅವರು ವಿಶ್ವಾಸ ವ್ಯಕ್ತಪಡಿಸಿ, ತಂಡದ ಸಹಕಾರದಿಂದ ಗ್ರಾಮೀಣ ಅಭಿವೃದ್ಧಿ ಕಾಮಗಾರಿಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸುವೆವು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ವಿಭಾಗದ ಹಿರಿಯ ಅಧಿಕಾರಿಗಳು, ಇಂಜಿನಿಯರ್‌ಗಳು ಹಾಗೂ ಸಿಬ್ಬಂದಿ ಸದಸ್ಯರು ಉಪಸ್ಥಿತರಿದ್ದರು.





