Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ನ್ಯಾಯವೇ ಸಮಾಜದ ನೆಲೆ : ಲಾಲಾ...

ಯಾದಗಿರಿ | ನ್ಯಾಯವೇ ಸಮಾಜದ ನೆಲೆ : ಲಾಲಾ ಹುಸೇನ್ ಕಂದಗಲ್

ವಾರ್ತಾಭಾರತಿವಾರ್ತಾಭಾರತಿ13 Sept 2025 5:54 PM IST
share
ಯಾದಗಿರಿ | ನ್ಯಾಯವೇ ಸಮಾಜದ ನೆಲೆ : ಲಾಲಾ ಹುಸೇನ್ ಕಂದಗಲ್
ಪೈಗಂಬರ್ ಮುಹಮ್ಮದ್ ಅಭಿಯಾನ ಪ್ರಯುಕ್ತ ಸೀರತ್ ಪ್ರವಚನ ಕಾರ್ಯಕ್ರಮ

ಯಾದಗಿರಿ: ನ್ಯಾಯವೇ ಸಮಾಜದ ಶ್ರೇಯೋಭಿವೃದ್ಧಿಗೆ ಮೂಲಸ್ತಂಭ. ಸತ್ಯದ ಪರ ನಿಲ್ಲುವುದೇ ನಿಜವಾದ ಧರ್ಮ ಎಂದು ಖ್ಯಾತ ಉಪನ್ಯಾಸಕ ಲಾಲಾ ಹುಸೇನ್ ಕಂದಗಲ್ ಅಭಿಪ್ರಾಯಪಟ್ಟರು.

ನಗರದ ಈಡನ್ ಗಾರ್ಡನ್ ಫಂಕ್ಷನ್ ಹಾಲಿನಲ್ಲಿ ಶನಿವಾರ ಜಮಾಅತೆ ಇಸ್ಲಾಮಿ ಹಿಂದ್ ವತಿಯಿಂದ ಆಯೋಜಿಸಲಾದ ʼನ್ಯಾಯದ ಹರಿಕಾರ ಪೈಗಂಬರ್ʼ ಅಭಿಯಾನದ ಪ್ರಯುಕ್ತ ಸೀರತ್ ಪ್ರವಚನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪೈಗಂಬರ್ ಮುಹಮ್ಮದ್ ಅವರ ಜೀವನ ಸಂದೇಶವನ್ನು ಉಲ್ಲೇಖಿಸಿದ ಅವರು, ನ್ಯಾಯವಿಲ್ಲದ ಸಮಾಜ ಅರಾಜಕತೆಯತ್ತ ದೂಡುತ್ತದೆ. ಇಸ್ಲಾಂ ಧರ್ಮದಲ್ಲಿ ನ್ಯಾಯಕ್ಕೆ ವಿಶೇಷ ಸ್ಥಾನ ನೀಡಲಾಗಿದೆ ಎಂದು ವಿವರಿಸಿದರು.

ಇಸ್ಲಾಂನಲ್ಲಿ ಹೆತ್ತವರು ಸ್ವರ್ಗದ ಬಾಗಿಲುಗಳಂತಿದ್ದರೂ, ನ್ಯಾಯದ ವಿಚಾರದಲ್ಲಿ ಸತ್ಯವೇ ಶ್ರೇಷ್ಠ. ಮಕ್ಕಳ ಕರ್ತವ್ಯವೆಂದರೆ ಸತ್ಯದ ಪರ ನಿಲ್ಲುವುದು ಎಂದು ಸ್ಪಷ್ಟಪಡಿಸಿದರು.

“ಜಾತಿಯನ್ನು ಪ್ರೀತಿಸಿದರೆ ಯಾರೂ ನಿನ್ನೊಡನೆ ಇರುವುದಿಲ್ಲ. ಮನುಷ್ಯನನ್ನು ಪ್ರೀತಿಸಿದರೆ ಎಲ್ಲರೂ ನಿನ್ನೊಡನೆ ಇರುತ್ತಾರೆ” ಎಂದು ಪೈಗಂಬರ್ ಅವರು ಹೇಳಿದ್ದಾರೆ. ಕಾರ್ಮಿಕರು, ಅನಾಥರು ಹಾಗೂ ಬಡವರ ಹಕ್ಕುಗಳ ರಕ್ಷಣೆಯಲ್ಲಿ ಅವರು ನೀಡಿದ ಆದರ್ಶಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಶಾಂತವೀರ ಗುರು ಮುರಘರಾಜೇಂದ್ರ ಮಹಾಸ್ವಾಮಿಗಳು ಆಶೀರ್ವಚನ ನೀಡಿ, ಧಾರ್ಮಿಕ ಸೌಹಾರ್ದ ಹಾಗೂ ನೈತಿಕ ಮೌಲ್ಯಗಳನ್ನು ಉಳಿಸಬೇಕೆಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ಲಲಿತಾ ಎಂ.ಅನಪೂರ, ಜಮಾಅತೆ ಇಸ್ಲಾಮಿ ಹಿಂದ್ ಯಾದಗಿರಿ ಜಿಲ್ಲಾಧ್ಯಕ್ಷ ಜನಾಬ್ ಸಲಾಹುದ್ದೀನ್ ಜಾಗಿರ್ದಾರ್, ಜಮಾಅತೆ ಇಸ್ಲಾಮಿ ಹಿಂದ್ ಯಾದಗಿರಿ ಜಿಲ್ಲಾ ಸಂಚಾಲಕ ಜನಾಬ್ ಅಮ್ಜದ್ ಹುಸೇನ್, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಚನ್ನಪ್ಪಗೌಡ ಮೊಸಂಬಿ, ತಂಜಿಮುಲ್ ಮುಸ್ಲಿಮಿನಲ್‌ ಬೈತುಲ್ ಮಾಲ್ ಅಧ್ಯಕ್ಷ ಜನಾಬ್ ಗುಲಾಮ ಸಮದಾನಿ ಮೂಸಾ, ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಜಿಲ್ಲಾಧ್ಯಕ್ಷ ಗುಂಡಪ್ಪ ಕಲಬುರಗಿ, ಡಿ.ಎಸ್.ಎಸ್. ಜಿಲ್ಲಾ ಸಂಚಾಲಕ ಮರೆಪ್ಪ ಚಟ್ಟೇರಕರ್, ಸೇರಿದಂತೆ ಅನೇಕ ಸಮಾಜಮುಖಿ ಮುಖಂಡರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X