ಯಾದಗಿರಿ | ಕಿತ್ತೂರು ರಾಣಿ ಚೆನ್ನಮ್ಮ ಮೊದಲ ಸ್ವಾತಂತ್ರ್ಯ ಹೋರಾಟಗಾರ್ತಿ : ಶ್ರೀಧರ ಗೋಟುರ

ಯಾದಗಿರಿ: ದೇಶ ಕಂಡ ಅಪ್ರತಿಮ ಮತ್ತು ಭಾರತದ ಮೊದಲ ಮಹಿಳಾ ಸ್ವಾತಂತ್ರ್ಯ ಹೋರಾಟಗಾರ್ತಿ ಕಿತ್ತೂರು ರಾಣಿ ಚೆನ್ನಮ್ಮ ಎಂದು ಸಹಾಯಕ ಆಯುಕ್ತ ಶ್ರೀಧರ ಗೋಟುರ ಹೇಳಿದರು.
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಸಂಯುಕ್ತವಾಗಿ ಗುರುವಾರ ಇಲ್ಲಿನ ಜಿಲ್ಲಾ ಕಸಾಪ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ಕಿತ್ತೂರು ರಾಣಿ ಚೆನ್ನಮ್ಮ ಅವರ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದ ಅವರು, ಮಹಿಳೆಯರ ಸಬಲೀಕರಣದ ಸಂಕೇತವಾಗಿರುವ ಚೆನ್ನಮ್ಮ ಅವರು, ಸಂಗೋಳ್ಳಿ ರಾಯಣ್ಣನ ಬೆಂಬಲದೊಂದಿಗೆ ಕಿತ್ತೂರಿನ ಬಲವನ್ನು ಸಂಘಟಿಸಿ ಬ್ರಿಟಿಷರ ವಿರುದ್ಧ ಗೆರಿಲ್ಲಾ ಮಾದರಿಯ ಹೋರಾಟವನ್ನು ಮಾಡಿದ್ದಾರೆ ಎಂದರು.
ನಿವೃತ್ತ ಪ್ರಾಚಾರ್ಯ ಗುರುಲಿಂಗಪ್ಪಗೌಡ ಪಾಟೀಲ್ ವಿಶೇಷ ಉಪನ್ಯಾಸ ನೀಡಿದರು.
ಯುಡಾ ಅಧ್ಯಕ್ಷ ಬಾಬುರಾವ ಕಾಡ್ಲೂರ್, ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಸಹಾಯಕ ನಿರ್ದೇಶಕಿ ಉತ್ತರಾದೇವಿ, ಪಂಚಮಸಾಲಿ ಸಮಾಜದ ಜಿಲ್ಲಾಧ್ಯಕ್ಷ ಮಲ್ಲಣ್ಣಗೌಡ ಪಾಟೀಲ್, ದೇವಿಂದ್ರಪ್ಪ ತೊಟಗೇರಾ, ಅನೀಲ ಬಿರಾದರ್, ಶಾಂತು ದಿಗ್ಗಿ, ಶರಣು ದಿಗ್ಗಿ ಸೇರಿದಂತೆ ಮತ್ತಿತರರು ಇದ್ದರು.





