ಯಾದಗಿರಿ | ಸಂಗಮೇಶ್ವರ, ಬಲಭೀಮೇಶ್ವರ ಜಾತ್ರೆ ನಿಮಿತ್ತ ಮದ್ಯ ಮಾರಾಟ ನಿಷೇಧ : ಜಿಲ್ಲಾಧಿಕಾರಿ ಆದೇಶ

ಯಾದಗಿರಿ: ಜಿಲ್ಲೆಯ ಶಹಾಪುರ ತಾಲೂಕಿನ ಶ್ರೀ ಸಂಗಮೇಶ್ವರ ಮತ್ತು ಬಲಭೀಮೇಶ್ವರ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ, ನಗರ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಅವರು ಆದೇಶ ಹೊರಡಿಸಿದ್ದಾರೆ.
ಜಾತ್ರೆಯ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮವಾಗಿ ಈ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 21ರ ಅಡಿಯಲ್ಲಿ ತಮಗೆ ಪ್ರದತ್ತವಾದ ಅಧಿಕಾರ ಚಲಾಯಿಸಿರುವ ಜಿಲ್ಲಾಧಿಕಾರಿಗಳು, 2026ರ ಜನವರಿ 15ರ ಬೆಳಿಗ್ಗೆ 6 ಗಂಟೆಯಿಂದ ಜನವರಿ 16ರ ಸಂಜೆ 6 ಗಂಟೆಯವರೆಗೆ ಶಹಾಪುರ ನಗರದ ಎಲ್ಲಾ ವೈನ್‌ಶಾಪ್, ಬಾರ್ ಮತ್ತು ರೆಸ್ಟೋರೆಂಟ್‌ಗಳಲ್ಲಿ ಸಗಟು ಹಾಗೂ ಚಿಲ್ಲರೆ ಮದ್ಯ ಮಾರಾಟವನ್ನು ಕಟ್ಟುನಿಟ್ಟಾಗಿ ನಿಷೇಧಿಸಿದ್ದಾರೆ.
ಈ ಅವಧಿಯಲ್ಲಿ ಮದ್ಯ ಮಾರಾಟ ಅಥವಾ ಸಾಗಾಟ ಕಂಡುಬಂದಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





