Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ರಾಜ್ಯ ಮಟ್ಟದ ಯುವಜನೋತ್ಸವ...

ಯಾದಗಿರಿ | ರಾಜ್ಯ ಮಟ್ಟದ ಯುವಜನೋತ್ಸವ ಸಂಘಟಿಸಲು ಸಕಲ ಸಿದ್ಧತೆ ಮಾಡಿಕೊಳ್ಳಿ : ಡಿಸಿ ಹರ್ಷಲ್ ಭೋಯರ್

ವಾರ್ತಾಭಾರತಿವಾರ್ತಾಭಾರತಿ24 Oct 2025 5:11 PM IST
share
ಯಾದಗಿರಿ | ರಾಜ್ಯ ಮಟ್ಟದ ಯುವಜನೋತ್ಸವ ಸಂಘಟಿಸಲು ಸಕಲ ಸಿದ್ಧತೆ ಮಾಡಿಕೊಳ್ಳಿ : ಡಿಸಿ ಹರ್ಷಲ್ ಭೋಯರ್

ಯಾದಗಿರಿ: ಡಿ.3 ಹಾಗೂ 4 ರಂದು ರಾಜ್ಯ ಮಟ್ಟದ ಯುವಜನೋತ್ಸವನ್ನು ಯಾದಗಿರಿಯಲ್ಲಿ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದ್ದು, ಇದಕ್ಕಾಗಿ ಸರ್ವ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರಾಜ್ಯ ಮಟ್ಟದ ಯುವಜನೋತ್ಸವ ಹಮ್ಮಿಕೊಳ್ಳುವ ಕುರಿತು ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಯಾದಗಿರಿಯಲ್ಲಿ ರಾಜ್ಯಮಟ್ಟದ ಯುವಜನೋತ್ಸವ ಸಂಘಟನೆಗೆ ಸರ್ಕಾರದ ನಿರ್ದೇಶನವಿರುವ ಹಿನ್ನೆಲೆಯಲ್ಲಿ , ಈಗಿನಿಂದಲೇ ಸಿದ್ಧತೆ ಆರಂಭಿಸಬೇಕು. ಮುಖ್ಯ ಸಮಾರಂಭದ ಉದ್ಘಾಟನೆಗೆ ಮಾನ್ಯ ಮುಖ್ಯಮಂತ್ರಿಗಳು ಆಗಮಿಸುವುದರಿಂದ ಎಲ್ಲ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ಸಿದ್ಧತೆ ಮಾಡಿಕೊಳ್ಳುವಂತೆ ಅವರು ಸೂಚಿಸಿದರು.

ಮುಖ್ಯ ಸಮಾರಂಭಕ್ಕೆ ಜಿಲ್ಲಾ ಕ್ರೀಡಾಂಗಣದಲ್ಲಿ ಮುಖ್ಯ ವೇದಿಕೆ, ಶಾಮಿಯಾನ, ವಿದ್ಯುತ್, ಅಲಂಕಾರ, ವಿವಿಧ ವಸತಿ ನಿಲಯ, ಸಮುದಾಯ ಭವನ ಗಳಲ್ಲಿ, ವಸತಿ, ಊಟೋಪಚಾರ, ಸಾರಿಗೆ , ಸೇರಿದಂತೆ ಅವಶ್ಯಕ ಸಿದ್ಧತೆ ಮಾಡಿಕೊಳ್ಳುವಂತೆ ತಿಳಿಸಿದ ಅವರು, ಏಳು ವಿವಿಧೆಡೆ ಕಾರ್ಯಕ್ರಮಗಳ ವೇದಿಕೆಗಳನ್ನು ಸಿದ್ದಗೊಳಿಸ ಬೇಕು ಎಂದರು.

ಪೂರ್ವ ಸಿದ್ಧತೆಗಳನ್ನು ನೋಡಿಕೊಳ್ಳಲು ಸ್ವಾಗತ ಸಮಿತಿ, ನೋಂದಣಿ ಸಮಿತಿ, ವಸತಿ ಸಮಿತಿ, ಸಾರಿಗೆ ಸಮಿತಿ, ಊಟೋಪಚಾರ ಸಮಿತಿ, ಹಣಕಾಸು, ಶಿಷ್ಟಾಚಾರ ಸಮಿತಿ,ವೇದಿಕೆ ನಿರ್ಮಾಣ ಹಾಗೂ ಅಲಂಕಾರ ಸಮಿತಿ, ತೀರ್ಪುಗಾರರ ಸಮಿತಿ, ರಕ್ಷಣಾ ಸಮಿತಿ, ಆರೋಗ್ಯ ಸಮಿತಿ,ಪ್ರಚಾರ ಸಮಿತಿ, ವಿಜ್ಞಾನ, ವಸ್ತುಪ್ರದರ್ಶನ ಸಮಿತಿ, ಸ್ವಯಂ ಸೇವಕರ ಸಮಿತಿಗಳನ್ನು ರಚಿಸಲಾಗಿದ್ದು, ಈ ಸಮಿತಿಗಳ ಅಧ್ಯಕ್ಷರು ತುರ್ತಾಗಿ ಸಭೆ ಕರೆದು ಸಮಿತಿ ಸದಸ್ಯರೊಂದಿಗೆ ಸಮನ್ವಯ ಸಾಧಿಸಿ ಸೂಕ್ತ ಕ್ರಮ ಕೈಗೊಂಡು ಮುಂದಿನ ಸಭೆಯಲ್ಲಿ ಮಾಹಿತಿ ಒದಗಿಸುವಂತೆ ಅವರು ಸೂಚಿಸಿದರು.

ಸಭೆಯಲ್ಲಿ ಮಾತನಾಡಿದ ಯುವಜನ ಸೇವಾ ಹಾಗೂ ಕ್ರೀಡಾಧಿಕಾರಿ ರಾಜು ಬಾವಿ ಹಳ್ಳಿ ಅವರು, ಯುವಜನೋತ್ಸವದಲ್ಲಿ 15 ರಿಂದ 29 ವರ್ಷ ವಯೋಮಾನದ ವಿದ್ಯಾರ್ಥಿ, ವಿದ್ಯಾರ್ಥಿನಿಯರು, ಯುವಕ, ಯುವತಿ ಸಂಘದ ಸದಸ್ಯರು, ಭಾಗವಹಿಸಲಿದ್ದಾರೆ. ಜಿಲ್ಲಾ ಮಟ್ಟದ ಯುವಜನೋತ್ಸವದಲ್ಲಿ ವಿಜೇತರಾದ ಪ್ರತಿ ಜಿಲ್ಲೆಯಿಂದ 32 ಜನ ಸ್ಪರ್ಧಾಳುಗಳಂತೆ ಸುಮಾರು 1200 ಜನ ಯುವಕ, ಯುವತಿಯರು, ಅಧಿಕಾರಿ, ಸಿಬ್ಬಂದಿಗಳು ಒಳಗೊಂಡಂತೆ 1,500 ಜನ ರಾಜ್ಯದ ಎಲ್ಲ ಜಿಲ್ಲೆಗಳಿಂದ ಭಾಗವಹಿಸಲಿದ್ದಾರೆ. ಜಾನಪದ ನೃತ್ಯ ,ಜಾನಪದ ಗೀತೆ,(ಪ್ರಾದೇಶಿಕ ಭಾಷೆ ) ಕಥೆ ಬರೆಯುವುದು,( ಹಿಂದಿ, ಆಂಗ್ಲ,ಪ್ರಾದೇಶಿಕ ಭಾಷೆ ಯಲ್ಲಿ), ಭಾಷಣ, ಕವಿತೆ ಬರೆಯುವುದು , ವಿಜ್ಞಾನ ಮೇಳ ಹಾಗೂ ವಸ್ತು ಪ್ರದರ್ಶನ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ ಎಂದು ಹೇಳಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ರಮೇಶ್ ಕೋಲಾರ್, ಸಹಾಯಕ ಆಯುಕ್ತ ಶ್ರೀಧರ್ ಗೋಟುರ್, ಜಿ.ಪಂ ಮುಖ್ಯ ಯೋಜನಾಧಿಕಾರಿ ದೇವರಮನಿ, ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X