Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ನಾರಾಯಣಪುರ ಜಲಾಶಯಕ್ಕೆ ಬಾಗಿನ...

ಯಾದಗಿರಿ | ನಾರಾಯಣಪುರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಚಿವ ಶರಣಬಸಪ್ಪ ದರ್ಶನಾಪುರ

ವಾರ್ತಾಭಾರತಿವಾರ್ತಾಭಾರತಿ8 Oct 2025 4:38 PM IST
share
ಯಾದಗಿರಿ | ನಾರಾಯಣಪುರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಚಿವ ಶರಣಬಸಪ್ಪ ದರ್ಶನಾಪುರ

ಯಾದಗಿರಿ: ಜಿಲ್ಲೆಯ ಹುಣಸಗಿ ತಾಲ್ಲೂಕಿನ ನಾರಾಯಣಪುರ ಬಸವಸಾಗರ ಜಲಾಶಯಕ್ಕೆ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಅವರು ಬುಧವಾರದಂದು ಬಾಗಿನ ಅರ್ಪಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಬಾಗಿನ ಅರ್ಪಣೆ ಸ್ವಲ್ಪ ತಡವಾಗಿದೆ. ರೈತರು ಇದೀಗ ತೊಂಬತ್ತು ದಿನಗಳಲ್ಲಿ ಬರುವ ಎರಡನೇ ಬೆಳೆಯನ್ನು ಬೆಳೆಸುವತ್ತ ಗಮನಹರಿಸಬೇಕು. ರೈತರು ಹಾಳಾದರೆ ದೇಶ ಹಾಳಾಗುತ್ತದೆ ಎಂದು ಹೇಳಿದರು.

ಈ ಬಾರಿ ಜಲಾಶಯದ ನೀರಿನ ಮಟ್ಟ ತೃಪ್ತಿಕರವಾಗಿದ್ದು, ಕೆಲವು ಸಣ್ಣಪುಟ್ಟ ನಿರ್ವಹಣಾ ಕೆಲಸಗಳನ್ನು ಕೈಗೊಳ್ಳಬೇಕಿದೆ ಎಂದು ಅವರು ತಿಳಿಸಿದರು. ರಾಜ್ಯದ ಹಲವೆಡೆ ಬೆಳೆ ಹಾನಿಯಾಗಿರುವ ಹಿನ್ನೆಲೆಯಲ್ಲಿ, ಈ ವಿಷಯವನ್ನು ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಲಾಗಿದೆ. “ಮುಂದಿನ ನಾಲ್ಕು-ಐದು ದಿನಗಳಲ್ಲಿ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಮತ್ತು ಎನ್‌ಡಿಆರ್‌ಎಫ್ ಯೋಜನೆಯಡಿ ರೈತರಿಗೆ ಪರಿಹಾರ ನೀಡುವ ಕಾರ್ಯ ನಡೆಯಲಿದೆ ಎಂದರು.

ರೈತರು ಸದೃಢವಾಗಬೇಕೆಂಬ ಆಶಯ ವ್ಯಕ್ತಪಡಿಸಿದ ಅವರು, ಬಿಜಾಪುರ ಮತ್ತು ಯಾದಗಿರಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕೆರೆ ತುಂಬುವ ಕಾರ್ಯ ಆರಂಭವಾಗಿದೆ. ಮಾರ್ಚ್ ಎರಡನೇ ವಾರದೊಳಗೆ ಕೈ ಸೇರುವ ಬೆಳೆಗಳನ್ನು ಬೆಳೆಸಬೇಕು. ಈ ಕುರಿತು ಮುಂಜಾಗ್ರತಾ ಕ್ರಮಗಳನ್ನು ರೈತರು ವಹಿಸಬೇಕು ಎಂದು ಸಲಹೆ ನೀಡಿದರು.

ಮುಂದಿನ ವರ್ಷ ಮಾರ್ಚ್ ತಿಂಗಳಲ್ಲಿ ಜಲಧಾರ ಯೋಜನೆ ಪೂರ್ಣಗೊಳ್ಳಲಿದೆ ಎಂದು ಸಚಿವರು ತಿಳಿಸಿದರು. ಬೂದಿಹಾಳ ಏತ ನೀರಾವರಿ ಯೋಜನೆಯಡಿ ಪೈಪ್ ಲೈನ್ ಕೆಲಸಗಳು ಪ್ರಗತಿಯಲ್ಲಿ ಇದ್ದು, ಯೋಜನೆ ನೀರಿನಿಂದ ಸುಮಾರು 20–30 ಹೆಕ್ಟೇರ್ ಪ್ರದೇಶಕ್ಕೆ ನೀರು ಒದಗಿಸಲಾಗುತ್ತದೆ ಎಂದರು.

ಆಲಮಟ್ಟಿ ಅಣೆಕಟ್ಟಿನ ಎತ್ತರವನ್ನು ಹೆಚ್ಚಿಸುವ ರಾಜ್ಯ ಸರ್ಕಾರದ ಬದ್ಧತೆಯನ್ನು ಹೊಂದಿದೆ. ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸುವುದು ನಮ್ಮ ಸರ್ಕಾರದ ವಾಗ್ದಾನವಾಗಿದೆ. ಭೂಸ್ವಾಧೀನ ಪ್ರಕ್ರಿಯೆಯನ್ನು ಆದಷ್ಟು ಬೇಗ ಮುಗಿಸಿ, ನಮ್ಮ ಪಾಲಿನ ನೀರಿನ ಸದ್ಬಳಕೆ ಮಾಡಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

ಅದ್ದೂರಿ ಮೆರವಣಿಗೆ :

ಬಾಗಿನ ಅರ್ಪಣೆಗೆ ಮುನ್ನ ಸಚಿವರು ಗೇಜ್ ರೂಮ್‌ನಲ್ಲಿ ಶಕ್ತಿ ಮಾತೆಯ ಚಿತ್ರಕ್ಕೆ ಪೂಜೆ ಸಲ್ಲಿಸಿದರು. ಅಲ್ಲಿಂದ ಶಾಸಕರು ಹಾಗೂ ದೇಶಮುಖ ವಿದ್ಯಾ ಸಂಸ್ಥೆಯ ವಿದ್ಯಾರ್ಥಿನಿಯರು ಬಾಗಿನ ಅರ್ಪಿಸುವ ಸ್ಥಳದವರೆಗೆ ಅದ್ದೂರಿ ಮೆರವಣಿಗೆಯಲ್ಲಿ ಅವರನ್ನು ಕರೆದೊಯ್ದರು. ಈ ವೇಳೆ ಅರ್ಚಕ ರಾಘವೇಂದ್ರ ಜೋಷಿ ಪೂಜಾ ಕಾರ್ಯ ನೆರವೇರಿಸಿದರು.

ನಾರಾಯಣಪುರ ಬಸವಸಾಗರ ಜಲಾಶಯವು 33.313 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿದ್ದು, ಪ್ರಸ್ತುತ ಸಂಪೂರ್ಣ ಸಾಮರ್ಥ್ಯಕ್ಕೆ ನೀರು ತುಂಬಿಕೊಂಡಿದೆ. ಇದಕ್ಕೂ ಮೊದಲು ವಾದ್ಯಮೇಳ ಮತ್ತು ಕುಂಭಕಳಸ ಮೆರವಣಿಗೆ ಮೂಲಕ ಸಚಿವರು ಹಾಗೂ ಜಿಲ್ಲಾಧಿಕಾರಿಗಳಿಗೆ ಭವ್ಯ ಸ್ವಾಗತ ನೀಡಲಾಯಿತು.

ಈ ಸಂದರ್ಭದಲ್ಲಿ ಸುರಪುರ ಕ್ಷೇತ್ರದ ಶಾಸಕ ರಾಜಾ ವೇಣುಗೋಪಾಲ ನಾಯಕ, ಯಾದಗಿರಿ ಕ್ಷೇತ್ರದ ಶಾಸಕರಾದ ಚನ್ನರೆಡ್ಡಿ ಪಾಟೀಲ್ ತುನ್ನೂರು, ಜಿಲ್ಲಾಧಿಕಾರಿಗಳಾದ ಹರ್ಷಲ್ ಭೋಯರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್, ಡ್ಯಾಂ ಮುಖ್ಯ ಎಂಜಿನಿಯರ್ ರಮೇಶ ಜಿ.ರಾಠೋಡ, ಇಇ ಹನಮಂತಪ್ಪ ಕನ್ನೂರು, ಎಇಇಗಳಾದ ವಿದ್ಯಾಧರ್, ರಾಘವೇಂದ್ರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X