ಯಾದಗಿರಿ | ಪೌರ ಕಾರ್ಮಿಕರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು: ಶಾಸಕ ಚೆನ್ನಾರೆಡ್ಡಿ ಪಾಟೀ

ನಗರಪೌರ ಕಾರ್ಮಿಕರಿಗೆ ಆಯುರ್ವೇದ ಆರೋಗ್ಯ ಶಿಬಿರ
ಯಾದಗಿರಿ: ನಗರ ಸ್ವಚ್ಛತೆ ಮತ್ತು ಅಭಿವೃದ್ಧಿಗೆ ಶ್ರಮಿಸುತ್ತಿರುವ ಪೌರ ಕಾರ್ಮಿಕರು ತಮ್ಮ ಆರೋಗ್ಯವನ್ನು ನಿರ್ಲಕ್ಷಿಸಬಾರದು ಎಂದು ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ತಿಳಿಸಿದ್ದಾರೆ.
ನಗರಸಭೆ ಆವರಣದಲ್ಲಿ ನಡೆದ 10ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಅಂಗವಾಗಿ ಆಯೋಜಿಸಿದ ಆರೋಗ್ಯ ಶಿಬಿರ ಉದ್ಘಾಟಿಸಿ ಅವರು ಮಾತನಾಡಿ, ಆಯುರ್ವೇದ ಚಿಕಿತ್ಸೆಯಿಂದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ ಮತ್ತು ಯಾವುದೇ ದುಷ್ಪರಿಣಾಮವಿಲ್ಲದೆ ಆರೋಗ್ಯವನ್ನು ಬೆಳೆಸಬಹುದು ಎಂದು ಹೇಳಿದರು.
ನಗರಸಭೆ ಅಧ್ಯಕ್ಷೆ ಕು. ಲಲಿತಾ ಅನಪೂರ ಶಿಬಿರದ ಮಹತ್ವವನ್ನು ಪ್ರಶಂಸಿಸಿ, ಕಾರ್ಮಿಕರಿಗೆ ಈ ಕಾರ್ಯಕ್ರಮದಿಂದ ಅನೇಕ ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ ಎಂದರು.
ಶಿಬಿರದಲ್ಲಿ ನಗರಸಭೆ ಉಪಾಧ್ಯಕ್ಷೆ ರುಖೀಯಾ ಬೇಗಂ, ಯುಡಾ ಅಧ್ಯಕ್ಷ ಬಾಬುರಾವ್ ಕಾಡ್ಲೂರ, ಪೌರಾಯುಕ್ತ ಉಮೇಶ್ ಚವ್ಹಾಣ, ಸದಸ್ಯರು ಹಾಗೂ ಪೌರ ಕಾರ್ಮಿಕರ ಸಂಘದ ಮುಖಂಡರು ಉಪಸ್ಥಿತರಿದ್ದರು. ಜಿಲ್ಲಾ ಆಯುಷ್ ಅಧಿಕಾರಿ ಡಾ. ವಂದನಾ ಜೆ. ಗಾಳಿಯವರು ಚಟುವಟಿಕೆಗಳ ವಿವರ ನೀಡಿದ್ದಾರೆ.
Next Story





