Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ಆರೋಗ್ಯ ಮತ್ತು ಕುಟುಂಬ...

ಯಾದಗಿರಿ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿವಿಧ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ

ವಾರ್ತಾಭಾರತಿವಾರ್ತಾಭಾರತಿ14 Oct 2025 7:41 PM IST
share
ಯಾದಗಿರಿ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿವಿಧ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ
ಭ್ರೂಣ ಲಿಂಗ ಪತ್ತೆಗೆ ಅವಕಾಶವಿಲ್ಲ: ಜಿಲ್ಲಾಧಿಕಾರಿ ಹರ್ಷಲ್ ಭೋಯರ್

ಯಾದಗಿರಿ: ಪಿಸಿ, ಪಿಎನ್‌ಡಿಟಿಯಡಿ ಭ್ರೂಣ ಲಿಂಗ ಪತ್ತೆ ಮತ್ತು ಭ್ರೂಣಲಿಂಗ ಆಯ್ಕೆಗೆ ಅವಕಾಶವಿಲ್ಲ. ಯಾರಾದರೂ ಕಾನೂನು ಬಾಹಿರವಾಗಿ ನಡೆದುಕೊಂಡಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳಾದ ಹರ್ಷಲ್ ಭೋಯರ್ ಅವರು ಹೇಳಿದರು.

ಅ.14ರ ಮಂಗಳವಾರದಂದು ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿವಿಧ ರಾಷ್ಟ್ರೀಯ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಂತಾನೋತ್ಪತಿ ಮತ್ತು ಮಕ್ಕಳ ಆರೋಗ್ಯ ಕಾರ್ಯಕ್ರಮದಡಿ ಜಿಲ್ಲೆಯ ಎಲ್ಲಾ ಆಡಳಿತ ವೈದ್ಯಾಧಿಕಾರಿಗಳು ಗಂಡಾಂತರ ಗರ್ಭೀಣಿಯರನ್ನು ಗುರುತಿಸಿ ಸತತವಾಗಿ ಅವರ ಆರೋಗ್ಯ ತಪಾಸಣೆಯನ್ನು ಕೈಗೊಂಡು ಅವರ ಹೆರಿಗೆಯನ್ನು ತಜ್ಞ ವೈದ್ಯರುಗಳ ಸಮ್ಮುಖದಲ್ಲಿ ಜರುಗಿಸಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಪ್ರಸವ ನಂತರ ಸಂಬಂದ ಪಟ್ಟ ಪ್ರಾಥಮಿಕ ಸುರಕ್ಷ ಅಧಿಕಾರಿಗಳು ಹಾಗೂ ಆಶಾ ಕಾರ್ಯಕರ್ತೆಯರು ಜಂಟಿಯಾಗಿ ಮನೆಗೆ ಭೇಟಿ ನೀಡಿ ಬಾಣಂತಿಯರ ಆರೋಗ್ಯ ತಪಾಸಣೆಯನ್ನು ಪರಿಶೀಲಿಸಿ ಆರೋಗ್ಯದಲ್ಲಿ ವ್ಯತ್ಯಾಸ ಕಂಡರೆ ಕೂಡಲೆ ವೈದ್ಯಾಧಿಕಾರಿಗಳ ಗಮನಕ್ಕೆ ತಂದು ಹೆಚ್ಚಿನ ರೀತಿಯಲ್ಲಿ ಆರೋಗ್ಯ ತಪಾಸಣೆ ನೀಡಿ ತಾಯಿ ಮರಣವನ್ನು ತಡೆಗಟ್ಟಲು ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಎನ್.ಎಮ್.ಎನ್.ಆರ್ ದರವು 105.7% ರಷ್ಟು ಪ್ರಗತಿ ಸಾಧಿಸಿದೆ. ಜಿಲ್ಲೆಯ ಎಲ್ಲಾ ಆರೋಗ್ಯ ಸಂಸ್ಥೆಗಳಿಂದ ಪ್ರತಿ ತಿಂಗಳು ಸಂಶಯಾಸ್ಪದ ಜ್ವರ ಮತ್ತು ದದ್ದು ಪ್ರಕರಣಗಳು ವರದಿಯಾಗುತ್ತಿವೆ. ಯಾವುದೇ ಆರೋಗ್ಯ ಸಂಸ್ಥೆಗಳು ಶೂನ್ಯ ಹೊಂದಿಲ್ಲ. ರ‍್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಕಾಯ್ದೆಯಡಿ ಜಿಲ್ಲೆಯ ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ದರಪಟ್ಟಿಯನ್ನು ಅಳವಡಿಸಬೇಕು. ಅಳವಡಿಸಿದ ದರಪಟ್ಟಿಯಂತೆ ಶುಲ್ಕವನ್ನು ಸಾರ್ವಜನಿಕರಿಂದ ಸ್ವೀಕರಿಸಬೇಕು. ಹೆಚ್ಚುವರಿ ಶುಲ್ಕವನ್ನು ಸ್ವಿಕರಿಸಿದಲ್ಲಿ ತಮ್ಮ ಮೇಲೆ ಪಿಸಿಪಿಎನ್ ಡಿ‌ಟಿ ಕಾಯ್ದೆಯಡಿಯಲ್ಲಿ ಪ್ರಾಧಿಕೃತ ಪ್ರಾಧಿಕಾರ ಸಮಿತಿಯ ಅಧ್ಯಕ್ಷರ ಸಮ್ಮುಖದಲ್ಲಿ ತಮ್ಮ ಮೇಲೆ ಶಿಸ್ತು ಕ್ರಮ ಜರುಗಿಸಲಾಗುತ್ತದೆಯೆಂದು ಸಮಿತಿಯ ಸಭೆಯಲ್ಲಿ ಜಿಲ್ಲಾಧಿಕಾರಿಗಳು ತಿಳಿಸಿದರು.

ಸರಕಾರಿ ವೈದ್ಯರ ಕರ್ತವ್ಯದ ಬಯೋಮೆಟ್ರಿಕ್‌ ಹಾಜರಾತಿ ವರದಿಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯಕ್ಕೆ ಸಲ್ಲಿಸಬೇಕು. ಪಿಸಿಪಿಎನ್ ಡಿಟಿ ಕಾಯ್ದೆಯಡಿಯಲ್ಲಿ ಪ್ರತಿ ಸರಕಾರಿ ಹಾಗೂ ಖಾಸಗಿ ಸಂಸ್ಥೆಯವರು ಬಾಲಿಕ ಸಾಫ್ಟವೇರ್‌ನಲ್ಲಿ ಕಡ್ಡಾಯವಾಗಿ ಫಲಾನುಭವಿಯ ಮಾಹಿತಿಯನ್ನು ನಮೂದಿಸಬೇಕು. ಇಲ್ಲವಾದಲ್ಲಿ ಅಂತಹ ಸಂಸ್ಥೆಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.

ಲಸಿಕಾ ಕಾರ್ಯಕ್ರಮದಲ್ಲಿ ಜಿಲ್ಲೆ 2ನೇ ಸ್ಥಾನ :

ಲಸಿಕಾ ಕಾರ್ಯಕ್ರಮದಡಿಯಲ್ಲಿ ಜಿಲ್ಲೆಯಲ್ಲಿ ಒಟ್ಟು 1,286 ಸಂಶಾಯಾಸ್ಪದ ಜ್ವರ ಹಾಗೂ ದದ್ದು ಪ್ರಕರಣಗಳು ವರಿಯಾಗಿದ್ದು, ರಾಜ್ಯದಲ್ಲಿಯೆ 2ನೇ ಜಿಲ್ಲೆ ಸ್ಥಾನದಲ್ಲಿದೆ. ಸದರಿ ಪ್ರಕರಣಗಳಲ್ಲಿ 23 ಲ್ಯಾಬ್ ನಿಂದ ದೃಢಪಟ್ಟ ದಡಾರ ಪ್ರಕರಣಗಳು ವರದಿಯಾಗಿವೆ. ಪ್ರಕರಣಗಳಲ್ಲಿ 27 ಲ್ಯಾಬ್ ನಿಂದ ದೃಢಪಟ್ಟ ರುಬೆಲ್ಲಾ ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯ ಎನ್.ಎಮ್.ಎನ್.ಆರ್ ದರವು 105.7% ರಷ್ಟು ಪ್ರಗತಿ ಸಾಧಿಸಿದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ಸಭೆಗೆ ಮಾಹಿತಿ ‌ನೀಡಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಸರ್ವೆಕ್ಷಣಾಧಿಕಾರಿ ಸಾಜಿದ್ ಸೇರಿದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X