ಯಾದಗಿರಿ | ಅಜಲಾಪುರ ಗ್ರಾಮದಲ್ಲಿ ಸ್ವಚ್ಚತೆಗೆ ಒತ್ತಾಯಿಸಿ ಪ್ರತಿಭಟನೆ : ಉಮೇಶ್ ಮುದ್ನಾಳ್

ಯಾದಗಿರಿ : ಸೆ.23 ರಂದು ಬೆಳಗ್ಗೆ 9 ಗಂಟೆಗೆ ಸೈದಾಪುರ ಸಮೀಪದ ಗುರುಮಠಕಲ್ ಕ್ಷೇತ್ರದ ಅಜಲಾಪುರ ಗ್ರಾಮ ಪಂಚಾಯಿತಿ ಎದುರು ಪ್ರತಿಭಟನೆ ನಡೆಯಲಿದೆ ಎಂದು ಸಾಮಾಜಿಕ ಹೋರಾಟಗಾರ ಉಮೇಶ್ ಮುದ್ನಾಳ್ ತಿಳಿಸಿದ್ದಾರೆ.
ಈ ಹಿಂದೆ ಉಮೇಶ್ ಮುದ್ನಾಳ್ ಗ್ರಾಮಕ್ಕೆ ಭೇಟಿ ನೀಡಿ, “ಗ್ರಾಮ ಸ್ವಚ್ಚತೆ ಕಡೆಗಣಿಸಿದರೆ ಪ್ರತಿಭಟನೆ ನಡೆಸುತ್ತೇವೆ” ಎಂದು ಎಚ್ಚರಿಕೆ ನೀಡಿದ್ದೆ. ಆದರೆ ಅಧಿಕಾರಿಗಳು ಸ್ಪಂದಿಸದ ಹಿನ್ನೆಲೆಯಲ್ಲಿ, ಸಾರ್ವಜನಿಕರ ಆರೋಗ್ಯವನ್ನು ನಿರ್ಲಕ್ಷಿಸಿರುವ ಭ್ರಷ್ಟಾಚಾರದ ವಿರುದ್ಧ ನಾಳೆ ಹೋರಾಟ ಕೈಗೊಳ್ಳಲಾಗುತ್ತಿದೆ.
ಪ್ರತಿಭಟನೆಗೆ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಭಾಗವಹಿಸಿ ಹೋರಾಟವನ್ನು ಯಶಸ್ವಿಗೊಳಿಸಬೇಕಾಗಿ ಉಮೇಶ್ ಮುದ್ನಾಳ್ ಕರೆ ನೀಡಿದ್ದಾರೆ.
Next Story





