Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ನಿರಾಶ್ರಿತರಿಗೆ ಆಶ್ರಯ...

ಯಾದಗಿರಿ | ನಿರಾಶ್ರಿತರಿಗೆ ಆಶ್ರಯ ಒದಗಿಸುವುದು ನಮ್ಮ ಕರ್ತವ್ಯ: ಪೌರಾಯುಕ್ತ ಉಮೇಶ ಚವ್ಹಾಣ

ವಾರ್ತಾಭಾರತಿವಾರ್ತಾಭಾರತಿ18 Dec 2025 5:10 PM IST
share
ಯಾದಗಿರಿ | ನಿರಾಶ್ರಿತರಿಗೆ ಆಶ್ರಯ ಒದಗಿಸುವುದು ನಮ್ಮ ಕರ್ತವ್ಯ: ಪೌರಾಯುಕ್ತ ಉಮೇಶ ಚವ್ಹಾಣ

ಯಾದಗಿರಿ: ನಗರದಲ್ಲಿ ವಸತಿ ರಹಿತರಿಗೆ ಇರುವ ಉಚಿತ ಆಶ್ರಯ ಕೇಂದ್ರವು ನಿರಾಶ್ರಿತರಿಗೆ ಬಹಳ ಅನುಕೂಲವಾಗಿದ್ದು, ನಿರಾಶ್ರಿತರಿಗೆ ಆಶ್ರಯ ಒದಗಿಸುವುದು ನಮ್ಮ ಕರ್ತವ್ಯವಾಗಿದೆ ಎಂದು ಪೌರಾಯುಕ್ತರಾದ ಉಮೇಶ ಚವ್ಹಾಣ ಅವರು ತಿಳಿಸಿದ್ದಾರೆ.

ನಗರಸಭೆ, ಜಿಲ್ಲಾ ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಹಾಗೂ ಡೇ- ನಲ್ಮಾ ಅಭಿಯಾನದಡಿ ಮತ್ತು ಭಾರತಾಂಬೆ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ನಗರದ ನಗರಸಭೆಯ ಕಾರ್ಯಾಲಯದಲ್ಲಿ ನಡೆದ ʼನಗರ ವಸತಿ ರಹಿತರ ಆಶ್ರಯ ಕೇಂದ್ರದ ಆಶ್ರಯ ನಿರ್ವಹಣಾ ಸಮಿತಿಯ ಸಭೆʼಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ವಸತಿ ರಹಿತರ ಆಶ್ರಯ ಕೇಂದ್ರದಲ್ಲಿ ಆರೋಗ್ಯ ತಪಾಸಣೆ, ಯೋಗ, ಧ್ಯಾನ ಶಿಬಿರ, ಸ್ವಚ್ಚತೆ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಸೂಚನೆ ನೀಡಿದ ಅವರು, ವಸತಿ ರಹಿತರ ಆಶ್ರಯ ಕೇಂದ್ರಕ್ಕೆ ಬೇಕಾದ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಪ್ರಸ್ತಾವನೆ ಸಲ್ಲಿಸಿ ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ವಸತಿ ರಹಿತರ ಆಶ್ರಯ ಕೇಂದ್ರದಲ್ಲಿ ಇರುವ ನಿರಾಶ್ರಿತರಿಗೆ ತೊಂದರೆಯಾದಾಗ ಪೊಲೀಸ್ ಇಲಾಖೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು. ತಕ್ಷಣ ಸ್ಪಂದಿಸಿದ ಇಲಾಖೆಯವರು ಯಾವುದೇ ತೊಂದರೆಗಳಿಗೆ ಸ್ಪಂದಿಸಲು ಪೋಲಿಸ್ ಸಹಾಯವಾಣಿ 112 ಯಾವಾಗಲೂ ಸಿದ್ದವಿದೆ ಎಂದರು.

ಕೌಶಲ್ಯಾಭಿವೃದ್ದಿ ಇಲಾಖೆಯ ಅಭಿಯಾನ ವ್ಯವಸ್ಥಾಪಕ ವಿಜಯಕುಮಾರ ಪಾಟೀಲ ಮಾತನಾಡಿ, ನಗರದಲ್ಲಿ ಕಾರ್ಮಿಕರಾಗಿದ್ದು ವಸತಿ ಇಲ್ಲದವರಿಗೆ ತಾತ್ಕಾಲಿಕವಾಗಿ ಆಶ್ರಯ ನೀಡುವ ಉದ್ದೇಶದಿಂದ ಈ ಆಶ್ರಯ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಇಲ್ಲಿ ವಾಸ್ತವ್ಯ ಇರುವವರಿಗೆ ಊಟ, ತಿಂಡಿಯ ಅಗತ್ಯವಿಲ್ಲದಿದ್ದರೂ, ಮಾನವೀಯ ದೃಷ್ಟಿಯಿಂದ ಕಾರ್ಯ ನಿರ್ವಹಿಸುತ್ತಿರುವ ಭಾರತಾಂಬೆ ಸಂಸ್ಥೆಯವರು ಒದಗಿಸುತ್ತಿರುವುದು ಶ್ಲಾಘನೀಯ ಎಂದರು.

ಈ ಸಂದರ್ಭದಲ್ಲಿ ನಗರಸಭೆಯ ಸಮುದಾಯ ಸಂಘಟನಾಧಿಕಾರಿ ಭೀಮಣ್ಣ ಕೆ.ವೈದ್ಯ, ನಗರ ಪೊಲೀಸ್ ಠಾಣೆಯ ಸಿಬ್ಬಂದಿ ರವಿ ರಾಠೋಡ್, ಕಿರಿಯ ಅಭಿಯಂತರರಾದ ಲೋಕೇಶ್ವರಿ, ಭಾರತಾಂಬೆ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಮುಖ್ಯಸ್ಥ ಭೀಮಾಶಂಕರ ದೊಡ್ಮನಿ, ನಗರಸಭೆಯ ಕಿರಿಯ ಆರೋಗ್ಯ ನಿರೀಕ್ಷಕರಾದ ಮಂಜುನಾಥ, ಸಿಆರ್‌ಪಿಗಳಾದ ಸಾಬಮ್ಮ, ಅವ್ವಮ್ಮ, ಪ್ರೇಮಾ, ಆಶ್ರಯ ಕೇಂದ್ರದ ವ್ಯವಸ್ಥಾಪಕ ಬೀರಲಿಂಗಪ್ಪ ಕಿಲ್ಲನಕೇರಾ, ಕೇರ್ ಟೇಕರ್ ಗಳಾದ ದೇವಮ್ಮ, ಸಿದ್ರಾಮ್, ವಸತಿ ರಹಿತರಾದ ರಾಘವೇಂದ್ರ, ಪಟೇಲಸಾಬ್, ಈರಪ್ಪ, ಬಾಬು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X