Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ನಕಲಿ ಎಸ್‌ಟಿ ಜಾತಿ...

ಯಾದಗಿರಿ | ನಕಲಿ ಎಸ್‌ಟಿ ಜಾತಿ ಪ್ರಮಾಣಪತ್ರಕ್ಕೆ ಕಡಿವಾಣ ಹಾಕದಿದ್ದರೆ ರಾಜ್ಯದ್ಯಂತ ಹೋರಾಟ : ವಾಲ್ಮೀಕಿ ನಾಯಕ ಸಮಾಜ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ3 Jan 2026 7:27 PM IST
share
ಯಾದಗಿರಿ | ನಕಲಿ ಎಸ್‌ಟಿ ಜಾತಿ ಪ್ರಮಾಣಪತ್ರಕ್ಕೆ ಕಡಿವಾಣ ಹಾಕದಿದ್ದರೆ ರಾಜ್ಯದ್ಯಂತ ಹೋರಾಟ : ವಾಲ್ಮೀಕಿ ನಾಯಕ ಸಮಾಜ ಎಚ್ಚರಿಕೆ

ಯಾದಗಿರಿ/ಶಹಾಪುರ: ಹಿಂದುಳಿದ ವರ್ಗಕ್ಕೆ ಸೇರಿದ ಕೋಲಿ, ಕಬ್ಬಲಿಗ, ಬೆಸ್ತ ಸಮುದಾಯದವರಿಗೆ ಯಾವುದೇ ಕಾರಣಕ್ಕೂ ಪರಿಶಿಷ್ಟ ಪಂಗಡ (ಎಸ್‌ಟಿ) ಜಾತಿ ಪ್ರಮಾಣಪತ್ರ ನೀಡಬಾರದು. ಈ ವರ್ಗದವರು ರಾಜಕೀಯ ಪ್ರಭಾವ ಬಳಸಿ ತಳವಾರ ಹೆಸರಿನಲ್ಲಿ ಸುಳ್ಳು ಜಾತಿ ಪ್ರಮಾಣಪತ್ರ ಪಡೆದು ಎಸ್‌ಟಿ ಮೀಸಲಾತಿಯ ಸೌಲಭ್ಯಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿರುವುದನ್ನು ತಕ್ಷಣ ನಿಲ್ಲಿಸಬೇಕು ಎಂದು ವಾಲ್ಮೀಕಿ ನಾಯಕರ ಸಂಘದ ಜಿಲ್ಲಾಧ್ಯಕ್ಷ ಗೌಡ ಆಲ್ಬಾಳ ಹಾಗೂ ಉತ್ತರ ಕರ್ನಾಟಕ ಭಾಗದ ವಾಲ್ಮೀಕಿ ನಾಯಕ ಸಮಾಜದ ಅಧ್ಯಕ್ಷ ಮಾರಪ್ಪ ನಾಯಕ ಮಗದಂಪುರ ಅವರು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಪರಿಶಿಷ್ಟ ಪಂಗಡ ಪಟ್ಟಿಯಲ್ಲಿ ಇರುವ ನಾಯಕ, ವಾಲ್ಮೀಕಿ, ಬೇಡ ಸಮುದಾಯಗಳಲ್ಲಿನ ತಳವಾರ ಮತ್ತು ಪರಿವಾರ ಜಾತಿಗಳನ್ನು ಎಸ್‌ಟಿ ಪಟ್ಟಿಗೆ ಸೇರಿಸಲಾಗಿದೆ. ಆದರೆ ಹಿಂದುಳಿದ ವರ್ಗಕ್ಕೆ ಸೇರಿದ ತಳವಾರ ಸಮುದಾಯವನ್ನೇ ಎಸ್‌ಟಿ ಪಟ್ಟಿಗೆ ಸೇರಿಸಲಾಗಿದೆ ಎಂದು ಕೆಲವು ಕಾಂಗ್ರೆಸ್ ಪಕ್ಷದ ವಿಧಾನ ಪರಿಷತ್ ಸದಸ್ಯರು ಹಾಗೂ ರಾಜಕೀಯ ಮುಖಂಡರು ಸುಳ್ಳು ಹೇಳಿ ತಮ್ಮ ಸಮುದಾಯದ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿದರು.

ಕೋಲಿ–ಕಬ್ಬಲಿಗ ಸಮಾಜದ ತಳವಾರ ಹಾಗೂ ಪರಿವಾರ ಜಾತಿಗಳನ್ನು ಎಸ್‌ಟಿ ಪಟ್ಟಿಗೆ ಸೇರಿಸಿರುವುದಾಗಿ ಯಾವುದೇ ಪರಿಷ್ಕೃತ ಸರ್ಕಾರಿ ಆದೇಶವಿಲ್ಲ. ಅಂತಹ ಆದೇಶಗಳಿದ್ದರೆ ಬಹಿರಂಗವಾಗಿ ಪ್ರಕಟಿಸಬೇಕು. ಸರ್ಕಾರದ ಆದೇಶಗಳನ್ನು ತಿರುಚಿ ಸುಳ್ಳು ಮಾಹಿತಿ ಹರಡುವುದನ್ನು ತಕ್ಷಣ ನಿಲ್ಲಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಲಾಗುವುದು ಎಂದು ಎಚ್ಚರಿಸಿದರು.

ರಾಜ್ಯದಲ್ಲಿ ಸುಮಾರು 2.50 ಲಕ್ಷ ನಕಲಿ ಎಸ್‌ಟಿ ಜಾತಿ ಪ್ರಮಾಣಪತ್ರಗಳು ಸೃಷ್ಟಿಯಾಗಿದ್ದು, ಅವುಗಳ ಆಧಾರದ ಮೇಲೆ ಉದ್ಯೋಗ, ಮುಂಬಡ್ತಿ ಸೇರಿದಂತೆ ಅನೇಕ ಸರ್ಕಾರಿ ಸೌಲಭ್ಯಗಳನ್ನು ಪಡೆದುಕೊಳ್ಳಲಾಗುತ್ತಿದೆ. ಈ ಕುರಿತು ದಾಖಲೆ ಸಮೇತ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಅಹಿಂದ ಸಮಾಜದ ಜಿಲ್ಲಾಧ್ಯಕ್ಷ ಹನುಮೇಗೌಡ ಮರ್ಕಲ್, ತಾಲೂಕು ಅಧ್ಯಕ್ಷ ಮರಪ್ಪ ಪ್ಯಾಟಿ ಶಿರವಾಳ, ನಕಲಿ ಎಸ್‌ಟಿ ಜಾತಿ ಪ್ರಮಾಣಪತ್ರ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಶ್ರವಣಕುಮಾರ ನಾಯಕ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದಲಿಂಗಪ್ಪ ನಾಯಕ, ತಾಲೂಕು ಕಾರ್ಯದರ್ಶಿ ಹನುಮಂತ ದೊರೆ, ಯುವ ಜಿಲ್ಲಾಧ್ಯಕ್ಷ ದೇವು, ಘಟಕದ ಮುಖಂಡರಾದ ಗಂಗನಾಳ, ಶರಣಪ್ಪ ಜಾಕನಳ್ಳಿ, ತಿರುಪತಿ ಯಕ್ಕಿಂತಿ, ರಾಘವೇಂದ್ರ ಯಕ್ಕಿಂತಿ ಹಳಿಸಗರ, ಅಶೋಕ ಗಾಂಜಿ, ಮಲ್ಲಪ್ಪ ಹಳಹಳ್ಳಿ, ಅಶೋಕ ಟಣಕೇದಾರ, ಸುಭಾಷ ರಾಂಪುರ, ರಮೇಶ್ ಗುರಿಕಾರ, ಅಂಬರೀಷ ಇಟಗಿ, ಗೋಪಾಲ ದೊರಿ, ಬಲಭೀಮ ನಾಯಕ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಎಸ್‌ಟಿ ಮೀಸಲಾತಿ ಕೋಟಾದಲ್ಲಿ ಗೆದ್ದ ಶಾಸಕರು–ಸಚಿವರ ಮನೆ ಮುಂದೆ ಧರಣಿ :

ಎಸ್‌ಟಿ ಮೀಸಲಾತಿ ಕೋಟಾದಿಂದ ಚುನಾವಣೆ ಗೆದ್ದು ಶಾಸಕರು ಹಾಗೂ ಸಚಿವರಾಗಿರುವವರು ಈ ವಿಚಾರವನ್ನು ಅಧಿವೇಶನದಲ್ಲಿ ಪ್ರಬಲವಾಗಿ ಮುಂದಿಡದೆ ಸರ್ಕಾರದ ಮೇಲೆ ಒತ್ತಡ ತರುವಲ್ಲಿ ವಿಫಲರಾಗಿದ್ದಾರೆ. ಇಂತಹ ಶಾಸಕರು ಮತ್ತು ಸಚಿವರ ಮನೆ ಮುಂದೆ ಧರಣಿ ನಡೆಸಲಾಗುವುದು. ನಮ್ಮ ಸಮುದಾಯಕ್ಕೆ ನ್ಯಾಯ ಸಿಗದಿದ್ದರೆ ಅರೆಬೆತ್ತಲೆ ಪ್ರತಿಭಟನೆ ಹಾಗೂ ತಲೆ ಬೋಳಿಸಿಕೊಂಡು ಉಗ್ರ ಹೋರಾಟ ನಡೆಸಲಾಗುವುದು. ಮುಂದಿನ ಚುನಾವಣೆಯಲ್ಲಿ ಅವರಿಗೆ ತಕ್ಕ ಪಾಠ ಕಲಿಸಲಾಗುವುದು. ಇದು ಕೆಲವರ ನಿರ್ಧಾರವಲ್ಲ. ಇದು ರಾಜ್ಯದ ವಾಲ್ಮೀಕಿ ಸಮುದಾಯದ ಜನರ ತೀರ್ಮಾನವಾಗಿದೆ ಎಂದು ಅವರು ತಿಳಿಸಿದರು.

ಸರಿಯಾದ ದಾಖಲೆ ಪರಿಶೀಲನೆ ಇಲ್ಲದೆ ರಾಜಕೀಯ ಪ್ರಭಾವಕ್ಕೆ ಒಳಗಾಗಿ ನಕಲಿ ಎಸ್‌ಟಿ ಜಾತಿ ಪ್ರಮಾಣಪತ್ರ ನೀಡುತ್ತಿರುವ ಅಧಿಕಾರಿಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ರಾಜ್ಯವ್ಯಾಪಿ ಉಗ್ರ ಹೋರಾಟ ಮಾಡಬೇಕಾಗುತ್ತದೆ.

- ಗೌಡಪ್ಪಗೌಡ ಅಲ್ವಾಳ, ವಾಲ್ಮೀಕಿ ನಾಯಕ ಸಮಾಜದ ಜಿಲ್ಲಾಧ್ಯಕ್ಷ

Tags

yadagir
share
ವಾರ್ತಾಭಾರತಿ
ವಾರ್ತಾಭಾರತಿ
Next Story
X